Death News: ಮಾಜಿ ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಪತ್ನಿ ವಿಯೋಗ

Published : Feb 17, 2023, 04:30 PM IST
Death News: ಮಾಜಿ ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಪತ್ನಿ ವಿಯೋಗ

ಸಾರಾಂಶ

ಮಾಜಿ ವಿಧಾನಸಭಾಧ್ಯಕ್ಷ, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ (69) ಅವರು ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ.

ಕೋಲಾರ (ಫೆ.17): ಮಾಜಿ ವಿಧಾನಸಭಾಧ್ಯಕ್ಷ, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ (69) ಅವರು ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ, ಕಳೆದ ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಇನ್ನು ಮೃತೆ ವಿಜಯಮ್ಮ ಅವರಿಗೆ 69 ವರ್ಷ ವಯಸ್ಸಾಗಿತ್ತು. ಇವರಿಗೆ ಪತಿ, ಒಬ್ಬ ಮಗಳು, ಒಬ್ಬ ಮಗ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. 

ಸಂತಾಪ ಸೂಚಿಸಿದ ಸಿದ್ದರಾಮಯ್ಯ: ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು. ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

PREV
Read more Articles on
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ