Death News: ನಾಡಿನ ಇಬ್ಬರು ಜನಪ್ರತಿನಿಧಿಗಳಾದ ದೇಶಪ್ಪ ಲಮಾಣಿ, ತಿಮ್ಮಪ್ಪ ಹೆಗಡೆ ನಿಧನ

By Sathish Kumar KH  |  First Published Jan 17, 2023, 11:03 AM IST

ರಾಜ್ಯ ರಾಜಕಾರಣದಲ್ಲಿ ಸೇವೆಯನ್ನು ಸಲ್ಲಿಸಿದ್ದ ಇಬ್ಬರು ಜನಪ್ರತಿನಿಧಿಗಳು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಮಾಜಿ ಸಚಿವರಾಗಿದ್ದ ಡಾ. ಹೆಗ್ಗಪ್ಪ ದೇಶಪ್ಪ ಲಮಾಣಿ ಮತ್ತು ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ ನಿಧನರಾಗಿದ್ದಾರೆ. 


ಶಿವಮೊಗ್ಗ/ ಹಾವೇರಿ (ಜ.17): ರಾಜ್ಯ ರಾಜಕಾರಣದಲ್ಲಿ ಉತ್ತಮ ಸೇವೆಯನ್ನು ಮಾಡಿ ಜನಮನ್ನಣೆ ಗಳಿಸಿದ್ದ ಜನಪ್ರತಿನಿಧಿಗಳಿಬ್ಬರು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಮಾಜಿ ಸಚಿವರಾಗಿದ್ದ ಡಾ. ಹೆಗ್ಗಪ್ಪ ದೇಶಪ್ಪ ಲಮಾಣಿ ಮತ್ತು ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ ನಿಧನರಾಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿ ಜಿಲ್ಲೆಯ ಬ್ಯಾಡಗಿ ಕ್ಷೇತ್ರದ ಮಾಜಿ ಶಾಸಕ ಡಾ.ಹೆಗ್ಗಪ್ಪ ದೇಶಪ್ಪ ಲಮಾಣಿ (93) ವಯೋಸಹಜ ಕಾಯಿಲೆಯಿಂದ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಹಲವು ವರ್ಷಗಳಿಂದ ವಯೋಸಹಜ ಕಾಯಿಮೆಗಳಿಂದ ಬಳಲುತ್ತಿದ್ದರು. ಇವರು ಕರ್ನಾಟಕ ವಿಶ್ವವಿದ್ಯಾಲಯದ ಕಲಾ ಮಹಾವಿದ್ಯಾಲಯದ ಮುಖ್ಯ ಪ್ರಾಧ್ಯಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಜೊತೆಗೆ, ರಾಜಕೀಯ ಪ್ರವೇಶದ ನಂತರ ಬ್ಯಾಡಗಿ ಕ್ಷೇತ್ರದಿಂದ 1983 ಮತ್ತು 1989 ರಂದು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ, ವೀರಪ್ಪ ಮೊಯ್ಲಿ ಮುಖ್ಯಮಂತ್ರಿ ಆಗಿದ್ದ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Tap to resize

Latest Videos

ಮಾಜಿ ಶಾಸಕ ಎಲ್..ಟಿ.ತಿಮ್ಮಪ್ಪ ಹೆಗಡೆ ನಿಧನ: ಮತ್ತೊಂದೆಡೆ ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಲ್..ಟಿ.ತಿಮ್ಮಪ್ಪ ಹೆಗಡೆ (94) ಅವರು ಕೂಡ ಸಾವನ್ನಪ್ಪಿದ್ದಾರೆ. ಇವರು ಕೂಡ ವಯೋಸಹಜ ಕಾರಣಗಳಿಂದ ಬಳಲುತ್ತಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಕಾಂಗ್ರೆಸ್‌ನ ಪ್ರಮುಖ ನಾಯಕರದಲ್ಲಿ ಒಬ್ಬರಾಗಿದ್ದ ಇವರು ಸಾಗರ ವಿಧಾನಸಭಾ ಕ್ಷೇತ್ರದಿಂದ 1978 ಮತ್ತು 1983ರಲ್ಲಿ ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಾಗರ ತಾಲೂಕಿನ ಮಡಸೂರು ಗ್ರಾಮದಲ್ಲಿ ನಿಧನವಾಗಿದ್ದು, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಹರನಾಥ ರಾವ್ ಸಂತಾಪ ಸೂಚಿಸಿದ್ದಾರೆ.

click me!