ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಪರೀಕ್ಷೆ ವೇಳೆಯಲ್ಲಿ ಕೋವಿಡ್ ಸೋಂಕು ದೃಢ| ಆಸ್ಪತ್ರೆಗೆ ದಾಖಲಿಸಲು ಕುಟುಂಬಸ್ಥರು ನಿರ್ಧಾರ| ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಚ್.ವೈ.ಮೇಟಿ|
ಬಾಗಲಕೋಟೆ(ಏ.23): ಮಾಜಿ ಸಚಿವ ಎಚ್.ವೈ.ಮೇಟಿ ಅವರಿಗೆ ಕೊರೋನಾ ದೃಢಪಟ್ಟಿದ್ದು, ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಚ್.ವೈ.ಮೇಟಿ ಅವರಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಪರೀಕ್ಷೆ ವೇಳೆಯಲ್ಲಿ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
'ಯಡಿಯೂರಪ್ಪ ಸಿಎಂ ಸ್ಥಾನ ಬಿಟ್ಟರೆ, ನಾನು ಮುಖ್ಯಮಂತ್ರಿ ಆಗ್ತೇನೆ'
ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೇಟಿಯವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.