'ದೇಶದ ಆರ್ಥಿಕ ಸ್ಥಿತಿ ಹದ​ಗೆ​ಡಿ​ಸಿದ ನರೇಂದ್ರ ಮೋದಿ'

By Kannadaprabha NewsFirst Published Feb 9, 2020, 12:00 PM IST
Highlights

ಕೇಂದ್ರ ಎಲ್ಲ ಸಂಸ್ಥೆ​ಗಳ ಮಾರಾ​ಟಕ್ಕೆ ಯತ್ನ: ಎಂ.ಬಿ. ಪಾಟೀಲ ಆರೋ​ಪ|ನರಸಿಂಹರಾವ್‌, ಡಾ.ಮನಮೋಹನ ಸಿಂಗ್‌ ಪ್ರಧಾನಿಯಾಗಿದ್ದಾಗ ಭಾರತದ ಆರ್ಥಿಕ ಪರಿಸ್ಥಿತಿ ಗಟ್ಟಿಗೊಳಿಸಿದ್ದರು|ಎಲ್ಲ ರಂಗಗಳಲ್ಲಿ ಕೇಂದ್ರ ಸರ್ಕಾರ ವಿಫಲ|

ವಿಜಯಪುರ(ಫೆ.09): ಕಳೆದ 6 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆರ್ಥಿಕ ಸ್ಥಿತಿಯನ್ನು ಭಾರಿ ಪ್ರಮಾಣದಲ್ಲಿ ಹದಗೆಡಿಸಿದೆ ಎಂದು ಶಾಸಕ ಎಂ.ಬಿ.ಪಾಟೀಲ ಗಂಭೀರವಾಗಿ ಆರೋಪಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 6 ವರ್ಷಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡಿಸಿದ್ದಾರೆ. ಹಿಂದೆ ಅಮೆರಿಕ, ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತವಿದ್ದರೂ ಕಾಂಗ್ರೆಸ್‌ ಅವಧಿಯಲ್ಲಿ ಯಾವುದೇ ಪರಿಣಾಮ ಬೀರಲಿಲ್ಲ. ಆದರೆ ಈಗ ಕೇಂದ್ರ ಎಲ್ಲ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದೆ ಎಂದು ದೂರಿದರು.

ಈ ಹಿಂದೆ ನರಸಿಂಹರಾವ್‌, ಡಾ.ಮನಮೋಹನ ಸಿಂಗ್‌ ಪ್ರಧಾನಿಯಾಗಿದ್ದಾಗ ಭಾರತದ ಆರ್ಥಿಕ ಪರಿಸ್ಥಿತಿಯನ್ನು ಗಟ್ಟಿಗೊಳಿಸಿದ್ದರು. ಈಗ ಬಿಜೆಪಿ ಸರ್ಕಾರ ಕಳೆದ 6 ವರ್ಷಗಳಲ್ಲಿ ಭಾರತದ ಆರ್ಥಿಕ ವ್ಯವಸ್ಥೆಯನ್ನು ಹದಗೆಡಿಸಿದೆ. ರಾಜ್ಯಕ್ಕೆ ಜಿಎಸ್‌ಟಿ ಎರಡು ಕಂತುಗಳಲ್ಲಿ ಬಂದಿದೆ. ಅದರಲ್ಲಿ ಶೇ.10ರಷ್ಟು ಕಡಿತ ಕೂಡ ಆಗಿದೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಪ್ರವಾಹ ಪೀಡಿತ ಪ್ರದೇಶಗಳಿಗೆ 38 ಕೋಟಿ ಹಾನಿಯಾಗಿದ್ದರೂ ಕೇವಲ 12 ಕೋಟಿ ಪರಿಹಾರ ಬಂದಿದೆ. ಎಲ್ಲ ರಂಗಗಳಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇನ್ನೂ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಬಿಡಲಿ, ಪ್ರತಿ ವರ್ಷ 2 ಕೋಟಿ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಇನ್ನೂ ಅಚ್ಛೇ ದಿನ ಬಂದೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಚೆನ್ನಾಗಿತ್ತು. ಈಗ ರಾಜ್ಯ ಸರ್ಕಾರದ ಹಣಕಾಸು ಸ್ಥಿತಿ ಚಿಂತಾಜನಕವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿವೆ. ದೇಶ ಮತ್ತು ರಾಜ್ಯವನ್ನು ಸಂಕಷ್ಟಕ್ಕೆ ನೂಕಿವೆæ. ಖಾತೆ ಹಂಚಿಕೆ, ಸಂಪುಟ ಹಂಚಿಕೆ ವಿಚಾರ ಏನೇ ಇರಲಿ ಅಭಿವೃದ್ಧಿ ಕಡೆಗೆ ಗಮನ ಇರಬೇಕು. ಆದರೆ, ಈ ಸರ್ಕಾರ ಇದ್ದರೂ ಅಷ್ಟೇ ಇಲ್ಲದಿದ್ದರೂ ಅಷ್ಟೇ ಎನ್ನುವಂತಾಗಿದೆ ಎಂದು ವ್ಯಂಗ್ಯವಾಡಿದರು.

ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಳಂಬವಾಗಿದೆ. ಇದರಿಂದ ಯಾವುದೇ ತೊಂದರೆಯಾಗಿಲ್ಲ. ಈಗ ಕೆಪಿಸಿಸಿಗೆ ಹಾಲಿ ಅಧ್ಯಕ್ಷರಿದ್ದಾರೆ. ಅವರು ಕೆಲಸ ಮಾಡುತ್ತಿದ್ದಾರೆ ಎಂದರು.
 

click me!