ಪಟೇಲರ ಸಂಪುಟದಲ್ಲಿ ಪ್ರಮುಖ ಖಾತೆ ನಿರ್ವಹಿಸಿದ್ದ ಮಾಜಿ ಸಚಿವ ಜೈವಂತ ನಿಧನ

Published : Dec 11, 2020, 11:17 PM ISTUpdated : Dec 11, 2020, 11:20 PM IST
ಪಟೇಲರ ಸಂಪುಟದಲ್ಲಿ ಪ್ರಮುಖ ಖಾತೆ ನಿರ್ವಹಿಸಿದ್ದ ಮಾಜಿ ಸಚಿವ ಜೈವಂತ ನಿಧನ

ಸಾರಾಂಶ

ಮಾಜಿ ಸಚಿವ ಪ್ರೇಮಾನಂದ ಜೈವಂತ ನಿಧನ/ ಜೆಎಸ್ ಪಟೇಲರ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದರು/  ಅನಾರೋಗ್ಯದಿಂದ ಬಳಲುತ್ತಿದ್ದ ನಾಯಕ/ ಗಣ್ಯರಿಂದ ಕಂಬನಿ

ಶಿರಸಿ (ಡಿ. 11)  ಮಾಜಿ ಅಬಕಾರಿ ಸಚಿವರು, ಜನತಾ ಪಾರ್ಟಿಯ ಹಿರಿಯ ಮುಖಂಡರಾಗಿದ್ದ ಪ್ರೇಮಾನಂದ ಜೈವಂತ(74) ಶುಕ್ರವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

1994ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಅವರು, ಜೆ ಎಚ್ ಪಟೇಲರ ಸಚಿವ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದರು.1999ರಲ್ಲಿ ವಿವೇಕಾನಂದ ವೈದ್ಯರೆದುರು ಪಕ್ಷೇತರರಾಗಿ ಸ್ಪರ್ಧಿಸಿ ಸೋಲನ್ನು ಕಂಡಿದ್ದರು. ಮೂವರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಜೈವಂತ ಅಗಲಿದ್ದಾರೆ.

ಕಲಾಲೋಕ ಅಗಲಿದ ಗುಡ್ಡದ ಭೂತ ಖ್ಯಾತಿಯ ಆಚಾರ್ಯ

ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಪ್ರೇಮಾನಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.   ಜನತಾ ಪಾರ್ಟಿ ತೊರೆದು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.

PREV
click me!

Recommended Stories

ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
ಸರ್ಕಾರಿ ಶಾಲೆ ಟಾಯ್ಲೆಟ್‌ ಸ್ವಚ್ಛತೆಗೆ ಉದ್ಯಮಿ ನೆರವು