
ಹುಬ್ಬಳ್ಳಿ(ಜು.29): ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರು ಕಾರು ಆಪಘಾತವಾದ ಘಟನೆ ನಗರದ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಘಟನೆ ಇಂದು(ಗುರುವಾರ) ನಡೆದಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಶಿವರಾಮ್ ಹೆಬ್ಬಾರ್ ಅವರು ಕಾರು ಗುದ್ದಿದೆ. ಸಿಎಂ ಕಾರು ಹಿಂಬಾಲಿಸುವ ಭರದಲ್ಲಿ ಆಪಘಾತ ನಡೆದಿದೆ.
ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಅಪಘಾತ: ಮೂವರ ದುರ್ಮರಣ
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಬಸವರಾಜ ಬೊಮ್ಮಾಯಿ ಹೊರ ಹೋಗುವ ವೇಳೆ ಈ ಘಟನೆ ಸಂಭವಿಸಿದೆ. ಸಿಎಂ ಕಾರಿನಲ್ಲಿ ಶಿವರಾಮ ಹೆಬ್ಬಾರ ಇದ್ದರು. ಶಿವರಾಮ್ ಹೆಬ್ಬಾರ್ ಅವರ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.