'ಪ್ರಧಾನಿ ಮೋದಿ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಇಡೀ ವಿಶ್ವವೇ ಹೊಗಳುತ್ತಿದೆ'

Kannadaprabha News   | Asianet News
Published : Jun 06, 2020, 01:51 PM ISTUpdated : Jun 06, 2020, 02:00 PM IST
'ಪ್ರಧಾನಿ ಮೋದಿ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಇಡೀ ವಿಶ್ವವೇ ಹೊಗಳುತ್ತಿದೆ'

ಸಾರಾಂಶ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿನ ಪ್ರತಿಯೊಬ್ಬರ ನಾಗರಿಕರನ್ನು ಜೊತೆಗೆ ತೆಗೆದುಕೊಂಡು ಹೋಗುವಂತಹ ಹಲವಾರು ಜನಪರ ಯೋಜನೆ ಜಾರಿಗೆ ತರುವ ಮೂಲಕ ಮೋದಿ ಸಬ್‌ ಕಾ ಸಾಥ್‌, ಸಬ್‌ ಕಾ ಕಾಸ್‌ ಎಂದು ದೇಶದಲ್ಲಿ ಎಲ್ಲರನ್ನು ಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಮಾಡುತ್ತಿದ್ದಾರೆ: ಪ್ರತಾಪಗೌಡ ಪಾಟೀಲ್‌

ಮಸ್ಕಿ(ಜೂ.06): ಪ್ರಪಂಚದ ಪ್ರಬಲ ರಾಷ್ಟ್ರಗಳು ಪ್ರಧಾನಿ ನರೇಂದ್ರ ಮೋದಿಯವರ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಮುಕ್ತ ಕಂಠದಿದ ಹಾಡಿ ಹೊಗಳುತ್ತಿವೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಹೇಳಿದ್ದಾರೆ. 

ಪಟ್ಟಣದ ಬಸವೇಶ್ವರ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಶುಕ್ರವಾರ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿನ ಪ್ರತಿಯೊಬ್ಬರ ನಾಗರಿಕರನ್ನು ಜೊತೆಗೆ ತೆಗೆದುಕೊಂಡು ಹೋಗುವಂತಹ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನರೇಂದ್ರ ಮೋದಿಯವರು ಸಬ್‌ ಕಾ ಸಾಥ್‌, ಸಬ್‌ ಕಾ ಕಾಸ್‌ ಎಂದು ದೇಶದಲ್ಲಿ ಎಲ್ಲರನ್ನು ಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಮಾಡುತ್ತಿದ್ದಾರೆ ಎಂದು ತಿಳಿ​ಸಿ​ದ​ರು.

ದೇವದುರ್ಗ: ಕ್ವಾರಂಟೈನ್‌ ಕೇಂದ್ರದಲ್ಲಿ ಮೃತ ಬಾಲಕನಿಗೆ ಕೊರೋನಾ ಪಾಸಿಟಿವ್‌

ಈಗಾಗಲೇ ದೇಶದಲ್ಲಿ ತ್ರಿವಳಿ ತಲಾಖ್‌ ಹಾಗೂ ಜಮ್ಮು ಕಾಶ್ಮೀರದ 370 ಕಾಯ್ದೆ ರದ್ದು ಸೇರಿದಂತೆ ಅನೇಕ ಜನತ ಕಾರ್ಯಗಳನ್ನು ಮಾಡುವ ಮೂಲಕ ಜನರ ಶ್ವಾಸವನ್ನು ಗಳಿಸಿದ್ದಾರೆ. ದೇಶದಲ್ಲಿ ಕೊರೋನಾ ವೈರಸ್‌ನ್ನು ತಡೆಗಟ್ಟಲು ಪ್ರಧಾನಿಯವರು ಎಲ್ಲಾ ರೀತಿಯಿಂದಲೂ ಶ್ರಮಿಸುತ್ತಿದ್ದಾರೆ. ಆದರೆ ಇನ್ನು ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ. ಆದ್ದರಿಂದ ಸಾರ್ವಜನಿಕರು ಸಹ ರೋಗ ತಡೆಗಟ್ಟಲು ಸಹಕರಿಸಬೇಕು ಎಂದು ಮನವಿ ಮಾಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಹರಳಳ್ಳಿ, ಬಿಜೆಪಿ ಮುಖಂಡರಾದ ಬಸವಂತರಾಯ ಕುರಿ, ಬಸವರಾಜಸ್ವಾು ಹಸಮಕಲ್‌, ಶರಣಬಸವ ಇದ್ದರು.
 

PREV
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!