ರಾಜಕಾರಣದಿಂದ ನಿವೃತ್ತನಾಗಿಲ್ಲ: ಬೆಳಗಾವಿ ಲೋಕಸಭೆ ಉಪಚುನಾವಣೆ ಸ್ಪರ್ಧೆಗೆ ಕೋರೆ ಇಂಗಿತ

Kannadaprabha News   | Asianet News
Published : Oct 11, 2020, 11:54 AM IST
ರಾಜಕಾರಣದಿಂದ ನಿವೃತ್ತನಾಗಿಲ್ಲ: ಬೆಳಗಾವಿ ಲೋಕಸಭೆ ಉಪಚುನಾವಣೆ ಸ್ಪರ್ಧೆಗೆ ಕೋರೆ ಇಂಗಿತ

ಸಾರಾಂಶ

ಬೆಳಗಾವಿ ಲೋಕಸಭೆ ಉಪಚುನಾವಣೆ ಅಭ್ಯರ್ಥಿ ನಿರ್ಧರಿಸುವ ವಿಚಾರ ವರಿಷ್ಠರಿಗೆ ಬಿಟ್ಟದ್ದು| ಪಕ್ಷದ ವಿಚಾರ ಬಂದಾಗ ಎಲ್ಲದರಲ್ಲೂ ಕೋರೆ ನೆನಪಾಗುತ್ತಾರೆ. ಮೇಲಾಗಿ ನಾನು ಇನ್ನೂ ರಾಜಕಾರಣದಿಂದ ನಿವೃತ್ತಿ ಘೋಷಿಸಿಲ್ಲ ಎಂದು ಸ್ಪಷ್ಟಪಡಿಸಿದ ಪ್ರಭಾಕರ್‌ ಕೋರೆ| 

ಬೆಳಗಾವಿ(ಅ.11): ಬೆಳಗಾವಿ ಲೋಕಸಭೆ ಉಪಚುನಾವಣೆ ಟಿಕೆಟ್‌ ಯಾರಿಗೆ ನೀಡಬೇಕು ಎಂಬುದು ವರಿಷ್ಠರಿಗೆ ಬಿಟ್ಟ ನಿರ್ಧಾರ. ಆದರೆ ನಾನಿನ್ನೂ ರಾಜಕಾರಣದಿಂದ ನಿವೃತ್ತನಾಗಿಲ್ಲ ಎಂದು ಮಾರ್ಮಿಕವಾಗಿ ಟಿಕೆಟ್‌ ಆಕಾಂಕ್ಷಿ ಎಂಬ ಸಂದೇಶವನ್ನು ರಾಜ್ಯಸಭಾ ಮಾಜಿ ಸದಸ್ಯ, ಕೆಎಲ್‌ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ರವಾನಿಸಿದ್ದಾರೆ. 

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ ಉಪಚುನಾವಣೆ ಅಭ್ಯರ್ಥಿ ನಿರ್ಧರಿಸುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಪಕ್ಷದ ವಿಚಾರ ಬಂದಾಗ ಎಲ್ಲದರಲ್ಲೂ ಕೋರೆ ನೆನಪಾಗುತ್ತಾರೆ. ಮೇಲಾಗಿ ನಾನು ಇನ್ನೂ ರಾಜಕಾರಣದಿಂದ ನಿವೃತ್ತಿ ಘೋಷಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ: ಕಬ್ಬಿನ ಬಾಕಿ ಬಿಲ್‌ಗಾಗಿ ಆಗ್ರಹಿಸಿ ಸಮಾಧಿಯಲ್ಲೇ ಧರಣಿ ಕುಳಿತ ರೈತ

ಹಾಗಾಗಿ ನಾನು ಉಪಚುನಾವಣೆಗೆ ಸ್ಪರ್ಧಿಸುತ್ತೇನೋ ಇಲ್ಲವೋ ಎಂಬುದು ಚರ್ಚೆಗೆ ವಿಷಯವಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. 
 

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC