Pratap Simha case: ಪ್ರತಾಪ್ ಸಿಂಹ ಜಾಮೀನು ಅರ್ಜಿ ವಜಾ; ಮಾಜಿ ಸಂಸದನಿಗೆ ಬಂಧನ ಭೀತಿ?

Published : Oct 13, 2026, 08:46 PM IST
Pratap Simha

ಸಾರಾಂಶ

ಟಿ.ನರಸೀಪುರದಲ್ಲಿ ನಡೆದ ಶೋಭಾ ಯಾತ್ರೆ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ.

ಬೆಂಗಳೂರು/ಮೈಸೂರು (ಅ.13): ಬಿಜೆಪಿಯ ಪ್ರಮುಖ ನಾಯಕ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕಾನೂನು ವಿಚಾರದಲ್ಲಿ ಹಿನ್ನಡೆಯುಂಟಾಗಿದೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

ನ್ಯಾಯಾಲಯದ ಆದೇಶದ ವಿವರ:

ನ್ಯಾಯಾಧೀಶರಾದ ಜಸ್ಟೀಸ್ ಕೆ.ಬಿ. ಶಿವಪ್ರಸಾದ್ ಅವರ ಪೀಠವು ಈ ಆದೇಶವನ್ನು ಪ್ರಕಟಿಸಿದೆ. ಪ್ರತಾಪ್ ಸಿಂಹ ವಿರುದ್ಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಒಟ್ಟು ಎರಡು ಎಫ್‌ಐಆರ್ (FIR) ದಾಖಲಾಗಿದ್ದವು. ಇವುಗಳಲ್ಲಿ ಕ್ರೈಂ ನಂ. 333 ಪ್ರಕರಣದಲ್ಲಿ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ, ಪ್ರಮುಖ ಕ್ರೈಂ ನಂ. 328 ರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯವು ಸ್ಪಷ್ಟವಾಗಿ ನಿರಾಕರಿಸಿದೆ.

ಘಟನೆಯ ಹಿನ್ನೆಲೆಯಿಷ್ಟು:

ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಶೋಭಾ ಯಾತ್ರೆ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಹಾಗೂ ಇತರರ ವಿರುದ್ಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿವಿಧ ಗುಂಪುಗಳು ಹಾಗೂ ಜಾತಿಗಳ ನಡುವೆ ದ್ವೇಷವನ್ನು ಉತ್ತೇಜಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಮತ್ತು ಧಾರ್ಮಿಕ ನಂಬಿಕೆಗಳಿಗೆ ಅವಮಾನ ಉಂಟುಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಬಿಎನ್‌ಎಸ್ (BNS) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಸೆಕ್ಷನ್ 132, 191, 194, 196(1)(a)(b), 299, 353(1)(b)(c) ಹಾಗೂ ಸೆಕ್ಷನ್ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಿರೀಕ್ಷಣಾ ಜಾಮೀನು ತಿರಸ್ಕೃತಗೊಂಡಿರುವುದರಿಂದ ಪ್ರತಾಪ್ ಸಿಂಹ ಅವರಿಗೆ ಕಾನೂನು ತೊಡಕುಗಳು ಹೆಚ್ಚಾಗುವ ಸಾಧ್ಯತೆಯಿದೆ.

PREV
Read more Articles on
click me!

Recommended Stories

ಕೃಷಿಹೊಂಡದ ಪೈಪ್‌ನಲ್ಲಿ ಅವಿತುಕೊಂಡಿದ್ದ ಚಿರತೆ, ಬಗ್ಗಿ ನೋಡಿದ ಕುರಿಗಾಹಿಗಳ ಪ್ರಾಣ ಉಳಿದಿದ್ದೇ ರೋಚಕ!
Sting Operation Karnataka: ಕೊನೆಗೂ ಮೌನ ಮುರಿದ ಮಾಜಿ ಸಿಎಂ ಸಿದ್ದರಾಮಯ್ಯ