ಮಂಗಳೂರು: ಆಸ್ಪತ್ರೆಯಿಂದ ಬಂದು ಮತ ಹಾಕಿದ ಮಾಜಿ ಯೋಧ ಆಸ್ಪತ್ರೆಯಲ್ಲೇ ನಿಧನ

By Kannadaprabha NewsFirst Published Apr 25, 2024, 11:51 AM IST
Highlights

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಲಿ ಏ.15ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದು, ಬುಧವಾರ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.

ಮಂಗಳೂರು(ಏ.25): ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. 

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೇ ಮತದಾನ ಕರ್ತವ್ಯ ಪೂರೈಸಿದವರು. 

ನೇಹಾ ಕೇಸ್‌ ಸಿಬಿಐಗೆ ಒಪ್ಪಿಸಿ, ರಾಜ್ಯ ಸರ್ಕಾರದಿಂದ ಪರಿಹಾರ ನೀಡಿ: ಕಟೀಲ್‌ ಆಗ್ರಹ

click me!