ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

Suvarna News   | Asianet News
Published : Dec 12, 2019, 12:06 PM IST
ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಸಾರಾಂಶ

ಮುತ್ತಪ್ಪ ರೈಗೆ ಅನಾರೋಗ್ಯ| ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು| ಮಣಿಪಾಲ್ ಆಸ್ಪತ್ರೆಯಲ್ಲಿ ಕಿಮೋ ಥೆರೆಪಿ ಮತ್ತು ಕಿಡ್ನಿ ಚೆಕ್ ಅಪ್ ಮಾಡಿಸಿಕೊಂಡ ಮುತ್ತಪ್ಪ ರೈ|

ಬೆಂಗಳೂರು(ಡಿ.12): ಅನಾರೋಗ್ಯ ನಿಮಿತ್ತ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.  

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅವರನ್ನು ಬುಧವಾರ ರಾತ್ರಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮುತ್ತಪ್ಪ ರೈ ಅವರು ಕಳೆದ‌ ಕೆಲವು ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಚೆನ್ನೈನ ಅಪೋಡ ಆಸ್ಪತ್ರೆಯಲ್ಲೂ ಕೂಡ ಒಂದು ತಿಂಗಳು ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. 

ಇದೀಗ ಮುತ್ತಪ್ಪ ರೈ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾದ ಹಿನ್ನೆಲೆಯಲ್ಲಿ ಮತ್ತೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುತ್ತಪ್ಪ ರೈ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಕಿಮೋ ಥೆರೆಪಿ ಮತ್ತು ಕಿಡ್ನಿ ಚೆಕ್ ಅಪ್ ಮಾಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 
 

PREV
click me!

Recommended Stories

ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
ಸರ್ಕಾರಿ ಶಾಲೆ ಟಾಯ್ಲೆಟ್‌ ಸ್ವಚ್ಛತೆಗೆ ಉದ್ಯಮಿ ನೆರವು