ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ದುರ್ಮರಣ

Published : Feb 18, 2019, 04:20 PM ISTUpdated : Feb 18, 2019, 05:35 PM IST
ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ದುರ್ಮರಣ

ಸಾರಾಂಶ

ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವ್ಯಾಗನಾರ್ ಕಾರೊಂದು  80 ಅಡಿ ಕಂದಕಕ್ಕೇ ಉರುಳಿ ಅವಘಡ ಸಂಭವಿಸಿದೆ. 

ಚಿಕ್ಕಮಗಳೂರು :  80 ಅಡಿಯ ಕಂದಕಕ್ಕೆ ವ್ಯಾಗನಾರ್ ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪದ ಹಿರೇಬೈಕ್ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.  ಗಾಯಾಳುಗಳನ್ನು ಕಳಸ ಆಸ್ಪತ್ರೆಗೆ ದಾಖಲಿಸಿ, ಕಳಸ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. 

ವಿಶ್ವನಾಥ್ (55)  ಪುಪ್ಪಾವತಿ (48) ದಂಪತಿ, ರಾಹುಲ್ ರೈ (58), ಮಮತಾ [ 51 ] ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದವರು. ಮೂಡಿಗೆರೆ ತಾಲೂಕಿನ ಬಾಳೆಹೊಳೆಯಲ್ಲಿ ಯಕ್ಷಗಾನ ಕಾರ್ಯಕ್ರಮ ನೋಡಲು ಬರುತ್ತಿದ್ದ ವೇಳೆ ಅವಘಡವಾಗಿದೆ. ಕಳಸದಿಂದ ಬಾಳೆಹೊಳೆ ಬರುವಾಗ ಕಳಸ ಸಮೀಪದ ಹಿರೇಬೈಲು ಗ್ರಾಮದ ಬಳಿ ಕಾರು ಕಂದಕಕ್ಕೆ ಉರುಳಿದೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PREV
click me!

Recommended Stories

ಅಡಿಕೆ ತೋಟದ ದುರಂತ: ಗೊನೆ ಕೊಯ್ಯುವಾಗ ಆಯತಪ್ಪಿ ಬಿದ್ದ ಕಾರ್ಮಿಕ ಸಾವು
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!