ದಂಪತಿಯ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದ್ದ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಳಗಾವಿ, (ಏ.04): ನೀರಿನ ಹೊಂಡದಲ್ಲಿ ಬಿದ್ದು ನಾಲ್ವರು ಮಕ್ಕಳು ದಾರುಣ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಂಜನಕಟ್ಟಿ ಗ್ರಾಮದಲ್ಲಿ ನಡೆದಿದೆ.
ಭಾಗವ್ವಾ ಜಕ್ಕನ್ನವರ(6), ತಾಯಮ್ಮ(5), ಮಾಳಪ್ಪ ಜಕ್ಕನ್ನವರ(4) ಮತ್ತು 3 ವರ್ಷದ ರಾಜಶ್ರೀ ಜಕ್ಕನ್ನವರ ಮೃತ ಮಕ್ಕಳು.