ರಾಮನಗರ: ಬೆಂಗ್ಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರ ದುರ್ಮರಣ

By Girish Goudar  |  First Published Oct 14, 2023, 8:37 AM IST

ಗುದ್ದಿದ ರಭಸಕ್ಕೆ ಒಮಿನಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತವಾದ ಹಿನ್ನಲೆಯಲ್ಲಿ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.


ರಾಮನಗರ(ಅ.14):  ಬೆಳ್ಳಂಬೆಳಗ್ಗೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಇಂದು(ಶನಿವಾರ) ನಡೆದಿದೆ. ಮೃತರ ಹೆಸರು ತಿಳಿದು ಬಂದಿಲ್ಲ.  

ಲಾರಿ ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಒಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಮೈಸೂರು ಕಡೆ ಲಾರಿ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಗುದ್ದಿದ ಪರಿಣಾಮ ಒಮಿನಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. 

Tap to resize

Latest Videos

ಹೊಸಪೇಟೆ ಬಳಿ ಭೀಕರ ಅಪಘಾತ: 7 ಜನರ ದುರ್ಮರಣ, ದೇವಸ್ಥಾನಕ್ಕೆ ಹೋದವರು ಮರಳಿ ಬರಲೇ ಇಲ್ಲ..!

ಗುದ್ದಿದ ರಭಸಕ್ಕೆ ಒಮಿನಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತವಾದ ಹಿನ್ನಲೆಯಲ್ಲಿ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

click me!