ಬಾಗಲಕೋಟೆಯಲ್ಲಿ ಭೀಕರ ಅಪಘಾತ: ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ದುರ್ಮರಣ

By Girish Goudar  |  First Published Jan 26, 2024, 8:00 AM IST

ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಅಮರನಾಥ ರೆಡ್ಡಿ ಭೇಟಿ ನೀಡಿದ್ದು, ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರ ತೆಗೆಯಲಾಯಿತು. ಇತ್ತ ಮೃತದೇಹಗಳನ್ನು ಬೀಳಗಿ ತಾಲೂಕಾಸ್ಪತ್ರೆಗೆ ಶವಪರೀಕ್ಷೆಗೆ ಕೊಂಡೊಯ್ಯಲಾಯಿತು. ಸ್ಥಳದಲ್ಲಿ ಮೃತರ ಸಂಭಂಧಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. 


ವರದಿ: ಮಲ್ಲಿಕಾರ್ಜುನ ಹೊಸಮನಿ, ಏಷಿಯಾನೆಟ್ ಸುವರ್ಣನ್ಯೂಸ್, ಬಾಗಲಕೋಟೆ  

ಬಾಗಲಕೋಟೆ(ಜ.26):  ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿ ಇಂದು(ಶುಕ್ರವಾರ) ನಡೆದಿದೆ. 

Tap to resize

Latest Videos

undefined

ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ 4 ಗಂಟೆಗೆ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35),  ತುಕಾರಾಮ್ ತಳೇವಾಡ (30) ಎಂಬ ನಾಲ್ವರು ಮೃತಪಟ್ಟಿದ್ದು, ಮೃತರನ್ನೆಲ್ಲಾ ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದೆ. 

ಬೈಕ್‌ಗೆ ಡಿಕ್ಕಿ ಹೊಡೆದು ಸ್ಪೋರ್ಟ್ಸ್ ಕಾರು ಪರಾರಿ: 20 ಅಡಿ ಎತ್ತರಕ್ಕೆ ಹಾರಿ ಬಿದ್ದ ಬೌನ್ಸರ್ ತಾರಕ್‌ ರಾಮ್ ಸಾವು

ಇವರೆಲ್ಲ ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದರು, ಇನ್ನು ಘಟನೆ ಬೆನ್ನಲ್ಲೇ ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಅಮರನಾಥ ರೆಡ್ಡಿ ಭೇಟಿ ನೀಡಿದ್ದು, ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರ ತೆಗೆಯಲಾಯಿತು. ಇತ್ತ ಮೃತದೇಹಗಳನ್ನು ಬೀಳಗಿ ತಾಲೂಕಾಸ್ಪತ್ರೆಗೆ ಶವಪರೀಕ್ಷೆಗೆ ಕೊಂಡೊಯ್ಯಲಾಯಿತು. ಸ್ಥಳದಲ್ಲಿ ಮೃತರ ಸಂಭಂಧಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. 

click me!