ಮಹಾರಾಷ್ಟ್ರದಿಂದ ಆಗಮಿಸಿದ ಇಬ್ಬರು ಹಾಗೂ ನೆಗಡಿ, ಕೆಮ್ಮು, ಜ್ವರ ಪ್ರಕರಣದ ಇಬ್ಬರಲ್ಲಿ ಸೋಂಕು ದೃಢ| 10 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆ| ಇಲ್ಲಿಯವರೆಗೆ ಒಟ್ಟು 232 ಸೋಂಕಿತರು ಗುಣಮುಖ| ಇನ್ನುಳಿದ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ, 7 ಜನರು ಸಾವು|
ವಿಜಯಪುರ(ಜೂ.25): ಹೆಲ್ತ್ ಬುಲೆಟಿನ್‌ನಲ್ಲಿ ಬುಧವಾರ ಮತ್ತೆ 4 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 321 ಕೋವಿಡ್-19 ಪಾಸಿಟಿವ್ ಪ್ರಕಟರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಆಗಮಿಸಿದ ಇಬ್ಬರು ಹಾಗೂ ನೆಗಡಿ, ಕೆಮ್ಮು, ಜ್ವರ ಪ್ರಕರಣದ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ವಿಜಯಪುರ: ಮತ್ತೆ ಒಂದೇ ದಿನ 16 ಕೊರೋನಾ ಪಾಸಿಟಿವ್ ಕೇಸ್
24 ವರ್ಷದ ಮಹಿಳೆ (ಪಿ 9722), 27 ವರ್ಷದ ವ್ಯಕ್ತಿ (ಪಿ 9723), 58 ವರ್ಷದ ವ್ಯಕ್ತಿ (ಪಿ 9724) ಹಾಗೂ 21 ವರ್ಷದ ಯುವಕ (ಪಿ 9725) ಸೇರಿದಂತೆ 4 ಜನರಲ್ಲಿ ಸೋಂಕು ಧೃಡಪಟ್ಟಿದ್ದು, 10 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿಯವರೆಗೆ ಒಟ್ಟು 232 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 7 ಜನರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.