ಪ್ರಪಾತಕ್ಕೆ ಉರುಳಿದರೂ ಅದೃಷ್ಟವಶಾತ್ ಬದುಕುಳಿದ ನಾಲ್ವರು

Published : Jun 18, 2019, 12:08 PM IST
ಪ್ರಪಾತಕ್ಕೆ ಉರುಳಿದರೂ ಅದೃಷ್ಟವಶಾತ್ ಬದುಕುಳಿದ ನಾಲ್ವರು

ಸಾರಾಂಶ

ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದಿದ್ದು,  ಇದರಲ್ಲಿದ್ದ ನಾಲ್ವರೂ ಕೂಡ ಅದೃಷ್ಟವಶಾತ್ ಬದುಕಿ ಉಳಿದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

ಚಿಕ್ಕಮಗಳೂರು (ಜೂ.18) :  ಚಾಲಕನ ನಿಯಂತ್ರಣ ತಪ್ಪಿ ಕಾರ್  ಪ್ರಾಪಾತಕ್ಕೆ ಬಿದ್ದು ನಾಲ್ವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನ ಗಿರಿಯ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು  ಪ್ರಪಾತಕ್ಕೆ ಬಿದ್ದಿದೆ.

ಬೆಂಗಳೂರಿನ ನಾಲ್ವರು ಇಂಜಿನಿಯರ್ ಗಳು ಚಿಕ್ಕಮಗಳೂರು ಪ್ರವಾಸಕ್ಕೆ ಆಗಮಿಸಿದ್ದರು. ಮುಳ್ಳಯ್ಯನ ಗಿರಿಗೆ ತೆರಳುತ್ತಿದ್ದ ವೇಳೆ ನಾಲ್ವರಿದ್ದ ಕಾರು ಉರುಳಿ ಬಿದ್ದಿದ್ದು,  ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಕಾರು ಚಾಲನೆ ಮಾಡುತಿದ್ದ ಮಹೇಂದ್ರರಾವ್ ‌ಎನ್ನುವವರ ತಲೆಗೆ ಏಟಾಗಿದ್ದು, ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ.  ಇನ್ನೂ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV
click me!

Recommended Stories

ಬೆಂಗಳೂರು ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಅಗ್ನಿ ಅವಘಡ: ನಡುರಸ್ತೆಯಲ್ಲೇ ಭಸ್ಮವಾದ ಕಾರು
ಬೆಂಗಳೂರು ಹೋಟೆಲ್‌ನಲ್ಲಿ ಭರ್ಜರಿ ಪಾರ್ಟಿ, ಪೊಲೀಸ್ ಬಂದಾಕ್ಷಣ ಬಾಲ್ಕನಿಯಿಂದ ಜಿಗಿದ ಯುವತಿ!