Free Bus: ಗಾರ್ಮೆಂಟ್ಸ್‌ ಮಹಿಳಾ ಸಿಬ್ಬಂದಿಗೆ ಫ್ರೀ ಬಸ್‌ಪಾಸ್‌

By Kannadaprabha News  |  First Published Dec 22, 2021, 4:13 AM IST

*  ‘ವನಿತಾ ಸಂಗಾತಿ’ ಯೋಜನೆಯಡಿ ಬಿಎಂಟಿಸಿ ಪಾಸ್‌
*   ಕಾರ್ಮಿಕ ಇಲಾಖೆ ಸಹಭಾಗಿತ್ವ
*   ಮಾಲೀಕರಿಂದಲೂ ಶೇ.40ರಷ್ಟು ಪಾಲು
 


ಬೆಂಗಳೂರು(ಡಿ.22):  ನಗರದ(Bengaluru) ಗಾರ್ಮೆಂಟ್ಸ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ(Garments Women Staff ) 2022ರ ಜನವರಿಯಿಂದ ‘ವನಿತಾ ಸಂಗಾತಿ’ ಯೋಜನೆಯಡಿ ಉಚಿತ ಬಸ್‌ ಪಾಸ್‌ ಒದಗಿಸಲು ಬಿಎಂಟಿಸಿ(BMTC) ನಿರ್ಧರಿಸಿದೆ.ಕಾರ್ಮಿಕ ಇಲಾಖೆಯ ಸಹಭಾಗಿತ್ವದಲ್ಲಿ ಗಾರ್ಮೆಂಟ್ಸ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಕಾರ್ಮಿಕರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸುವುದು ಹಾಗೂ ಆರ್ಥಿಕವಾಗಿ ನೆರವಾಗುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಈ ಕಾರ್ಯಕ್ರಮ ಜಾರಿಯಾದ ಬಳಿಕ ಗಾರ್ಮೆಂಟ್ಸ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ನೌಕರರು ಪ್ರತಿನಿತ್ಯ ತಮ್ಮ ಕರ್ತವ್ಯ ಖಾಸಗಿ ಬಸ್ಸು, ಆಟೋ ಹಾಗೂ ಇತರೆ ಖಾಸಗಿ ಸಂಸ್ಥೆಯ ವಾಹನಗಳನ್ನು ಅವಲಂಬಿಸುವುದು ತಪ್ಪಲಿದೆ.

ಬೆಂಗಳೂರು ನಗರದಲ್ಲಿ 850ಕ್ಕಿಂತಲೂ ಹೆಚ್ಚಿನ ಗಾರ್ಮೆಂಟ್ಸ್‌ ಕಾರ್ಖಾನೆಗಳಿವೆ. ಈ ಗಾಮೆಂಟ್ಸ್‌ ಸುಮಾರು 3 ಲಕ್ಷಕ್ಕೂ ಹೆಚ್ಚು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಇದರಲ್ಲಿ ಶೇ.80 ಕ್ಕಿಂತ ಹೆಚ್ಚು ಮಹಿಳಾ ಕಾರ್ಮಿಕರಿದ್ದು, ಈ ನೌಕರರು ವನಿತಾ ಸಂಗಾತಿ ಯೋಜನ ಫಲಾನುಭವಿಗಳಾಗಬಹುದು.

Tap to resize

Latest Videos

undefined

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್

ಪಾಸು ಪಡೆಯುವುದು ಹೇಗೆ:

ವನಿತಾ ಸಂಗಾತಿ ಪಾಸು ಪಡೆಯಲಿಚ್ಚಿಸುವ ಗಾರ್ಮೆಂಟ್ಸ್‌ ಮಹಿಳಾ ನೌಕರರು ಕರ್ತವ್ಯ ನಿರ್ವಹಿಸುವ ಗಾರ್ಮೆಂಟ್ಸ್‌ ಕಾರ್ಖಾನೆಯ ಮಾಲೀಕರಿಗೆ ಮನವಿ ಸಲ್ಲಿಸಬೇಕು. ಗಾರ್ಮೆಂಟ್ಸ್‌ ಮಾಲೀಕರು ಪಾಸು ಪಡೆಯುವ ಮಹಿಳಾ ಕಾರ್ಮಿಕರ ಪಟ್ಟಿಯನ್ನು, ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಇ-ಮೇಲ್‌ ವಿಳಾಸ welfarecommissioner123@gmail.comಗೆ ಸಲ್ಲಿಸಬೇಕು.

ಇದಾದ ಬಳಿಕ ಗಾರ್ಮೆಂಟ್ಸ್‌ ಮಾಲೀಕರಿಂದ ಸ್ವೀಕರಿಸುವ ಕೋರಿಕೆಗಳನ್ನು ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ(Labor Welfare Board) ಅಧಿಕಾರಿಗಳು ಪರಿಶೀಲಿಸಿ, ಅರ್ಹ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಬಿಎಂಟಿಸಿಗೆ ನೀಡಬೇಕು. ಈ ಪಟ್ಟಿಯಂತೆ ಗಾರ್ಮೆಂಟ್ಸ್‌ ಮಾಲೀಕರಿಂದ ಅವಶ್ಯ ದಾಖಲೆಗಳ ಪ್ರತಿಗಳನ್ನು ಹಾಗೂ ಗಾರ್ಮೆಂಟ್ಸ್‌ ಮಾಲೀಕರ ಪಾಲಿನ ಮೊತ್ತ ಶೇ.40ರಷ್ಟನ್ನು ಪಡೆದು ಪಾಸುಗಳನ್ನು ನಗರದ ಕೆಂಪೇಗೌಡ ಬಸ್‌ ನಿಲ್ದಾಣದ ಕೌಂಟರ್‌ಗಳಲ್ಲಿ ವಿತರಣೆ ಮಾಡಲು ಕ್ರಮಕೈಗೊಳ್ಳಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದಿನಿಂದಲೇ ಮನವಿ ಸಲ್ಲಿಸಲು ಅವಕಾಶ

2022ರ ಜನವರಿ ತಿಂಗಳಿಗೆ ತಮ್ಮಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಸಿಬ್ಬಂದಿಗೆ ಬಸ್‌ ಪಾಸ್‌ ಕೊಡಿಸುವುದಕ್ಕಾಗಿ ಗಾರ್ಮೆಂಟ್ಸ್‌ ಮಾಲೀಕರು ಡಿ.22ರಿಂದ ಕಾರ್ಮಿಕ ಇಲಾಖೆಗೆ ಇ-ಮೇಲ್‌ ಮೂಲಕ ಕಾರ್ಮಿಕ ಇಲಾಖೆಗೆ ಮನವಿ ಸಲ್ಲಿಸಬೇಕು. ಈ ಪಾಸುಗಳನ್ನು ಪಡೆಯುವ ಮಹಿಳಾ ಕಾರ್ಮಿಕರು ಬಿಎಂಟಿಸಿಯ ಮಾಸಿಕ ಪಾಸಿನ ಗುರುತಿನ ಚೀಟಿಯೊಂದಿಗೆ ವನಿತಾ ಸಂಗಾತಿ ಪಾಸುಗಳನ್ನು ಪಡೆದ ಸಂಸ್ಥೆಯ ಎಲ್ಲ ಸಾಮಾನ್ಯ ಸೇವೆಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ವಿವರಿಸಿದ್ದಾರೆ.

' ಬಡವರ ಮಕ್ಕಳಿಗೆ ಉಚಿತ ಬಸ್‌ಪಾಸ್‌ '

ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಉಚಿತ ಸರ್ಕಾರಿ ಬಸ್‌ಪಾಸ್‌: ಹೆಬ್ಬಾರ್‌

ನೋಂದಾಯಿತ ಕಾರ್ಮಿಕರಿಗೆ ಕೆಲಸದ ಸ್ಥಳಗಳಿಗೆ ತೆರಳಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(Bangalore Metropolitan Transport Corporation) (ಬಿಎಂಟಿಸಿ) ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಆರಂಭಿಸಲಾಗಿರುವ ಪಾಸ್‌ ನೀಡುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದ್ದು, ಶೀಘ್ರದಲ್ಲೇ ಕೆಎಸ್‌ಆರ್‌ಟಿಸಿ ಬಸ್‌ ಪಾಸ್‌ ವಿತರಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಘೋಷಿಸಿದ್ದರು. 

ಯೋಜನೆ ವ್ಯಾಪ್ತಿ, ಪಾಸ್‌ ದೂರ ಮಿತಿ ಕುರಿತು ಅಂತಿಮ ಹಂತದ ಮಾತುಕತೆಗಳು ಕಾರ್ಮಿಕ ಇಲಾಖೆ(Department of Labor) ಮತ್ತು ಕೆಎಸ್‌ಆರ್‌ಟಿಸಿ(KSRTC) ನಡುವೆ ನಡೆಯುತ್ತಿದ್ದು, ಶೀಘ್ರದಲ್ಲಿಯೇ ರಾಜ್ಯದ ಕಾರ್ಮಿರಿಗೆ ಉಚಿತ ಸಾರಿಗೆ ಸೌಲಭ್ಯ ಭಾಗ್ಯ ದೊರೆಯಲಿದೆ. ಈಗಾಗಲೇ ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಕಲ್ಯಾಣ ಮಂಡಳಿಯ ನೊಂದಾಯಿತ ಕಾರ್ಮಿಕರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಪಾಸ್‌ ಸೌಲಭ್ಯ ನೀಡಲಾಗಿದೆ. ಮುಂದಿನ ಹಂತದಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದರು. 
 

click me!