ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌

By Kannadaprabha News  |  First Published Jun 19, 2024, 11:11 AM IST

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಅವರ ಪ್ರಯಾಣಕ್ಕೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ತಿಳಿಸಿದರು.


 ಗೌರಿಬಿದನೂರು ;  ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಅವರ ಪ್ರಯಾಣಕ್ಕೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ತಿಳಿಸಿದರು.

ನಗರದ ಶಾಸಕರ ಕಚೇರಿಯಲ್ಲಿ ಮಂಗಳವಾರ ಶಾಸಕ ಕೆ. ಎಚ್ ಪುಟ್ಟಸ್ವಾಮಿಗೌಡ ರವರ ಕೆ.ಎಚ್‌ಪಿ ಫೌಂಡೇಷನ್ ವತಿಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಗಳನ್ನು ವಿತರಣೆ ಮಾಡಿ ಮಾತನಾಡಿದರು.

Tap to resize

Latest Videos

ಹಂತ ಹಂತವಾಗಿ ವಿತರಣೆ

ತಾವು ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡುತ್ತಿದ್ದು, ಈ ವರ್ಷ ಈಗ ತಾನೆ ಶಾಲಾ- ಕಾಲೇಜುಗಳು ಪ್ರಾರಂಭಗೊಳ್ಳುತ್ತಿದ್ದು ಹಂತ-ಹಂತವಾಗಿ ಬಸ್‌ ಪಾಸ್ ಗಳನ್ನು ವಿತರಣೆ ಕಾರ್ಯ ಪ್ರಾರಂಭಿಸಿದ್ದೇವೆ. ಈ ದಿನ ಸುಮಾರು 200 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿರುವುದಾಗಿ ಹೇಳಿದರು.

ಮಾಡಲಾಗಿದ್ದು, ಇನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅರ್ಜಿ ಸಲ್ಲಿಸಿದ ತಾಲ್ಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೂ ಬಸ್ ಪಾಸ್ ವಸ್ಥೆಯನ್ನು ಮಾಡಲು ನಾವುಗಳು ಸಿದ್ದರಿದ್ದೇವೆ. ಇದರ ಸದ್ಬಳಕೆ ಪಡೆದು ವಿದ್ಯಾರ್ಥಿಗಳು ಆಸಕ್ತಿಯಿಂದ ಒಳ್ಳೆಯ ವಿದ್ಯಾಭ್ಯಾಸ ಮಾಡಿ ಉತ್ತಮ ಪಲಿತಾಂಶವನ್ನು ಪಡೆದು ಪೋಷಕರ ಕನಸನ್ನು ನನಸು ಮಾಡಬೇಕು ಎಂದು ಹೇಳಿದರು.

ಗ್ರಾಮೀಣ ಮಕ್ಕಳಿಗೆ ಅನುಕೂಲ

ಬಹು ಮುಖ್ಯವಾಗಿ ಗ್ರಾಮೀಣ ಪ್ರದೇಶದಿಂದ ಬಹಳಷ್ಟು ಮಂದಿ ವಿದ್ಯಾರ್ಥಿಗಳು ಪ್ರತಿ ದಿನ ತಮ್ಮ ಹಳ್ಳಿಗಳಿಂದ ಶಾಲಾ-ಕಾಲೇಜಿಗೆ ಪ್ರಯಾಣ ಮಾಡುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಅವರ ಪ್ರಯಾಣಕ್ಕೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಎಂದು ಹೇಳಿದರು.

ಈ ವೇಳೆ ಮುಖಂಡರಾದ ಆರ್. ಅಶೋಕ್, ಎಂ. ನರಸಿಂಹಮೂರ್ತಿ, ಆರ್. ಆರ್. ರೆಡ್ಡಿ, ಗೋಪಿ, ನಂಜುಂಡಪ್ಪ, ಮಲ್ಲಸಂದ್ರ ಗಂಗಾಧರ್, ಅಲ್ತಾಪ್ ವೆಂಕಟರಮಣ, ಲಕ್ಷ್ಮೀಸೇರಿದಂತೆ ಇತರರು ಭಾಗವಹಿಸಿದ್ದರು.

click me!