ಇನ್ಫೋಸಿಸ್‌ ಸಹಕಾರದಲ್ಲಿ ಜೈಲು ಖೈದಿಗಳಿಗೆ ಕಂಪ್ಯೂಟರ್‌ ತರಬೇತಿ: ಐಎಎಸ್‌ ಶಿಲ್ಪಾನಾಗ್‌ ಕಾರ್ಯಕ್ಕೆ ಮೆಚ್ಚುಗೆ

By Sathish Kumar KHFirst Published Nov 16, 2023, 5:50 PM IST
Highlights

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲಾ ಕಾರಾಗೃಹ ಬಂಧಿಗಳಿಗೆ ಉಚಿತವಾಗಿ ಕಂಪ್ಯೂಟರ್ ಶಿಕ್ಷಣ ತರಬೇತಿಯನ್ನು ನೀಡಲಾಗುತ್ತಿದೆ.

ವರದಿ - ಪುಟ್ಟರಾಜು. ಆರ್. ಸಿ. ಏಷ್ಯಾನೆಟ್  ಸುವರ್ಣ ನ್ಯೂಸ್
ಚಾಮರಾಜನಗರ (ನ.16):
ಇಡೀ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲಾ ಕಾರಾಗೃಹ ಬಂಧಿಗಳಿಗೆ ಉಚಿತವಾಗಿ ಕಂಪ್ಯೂಟರ್ ಶಿಕ್ಷಣ ತರಬೇತಿಯನ್ನು ನೀಡುವ ವಿನೂತನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಚಾಲನೆ ನೀಡಿದ್ದಾರೆ. 

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ವಿಶೇಷ ಕಾಳಜಿ ಹಾಗೂ ಆಸಕ್ತಿಯಿಂದ ಚಾಮರಾಜನಗರದ ಜಿಲ್ಲಾ ಕಾರಾಗೃಹ ಬಂಧಿಗಳಿಗೆ ಮೈಸೂರಿನ ಇನ್ಫೋಸಿಸ್ ರೋಟರಿ ಪಂಚಶೀಲ ಸಹಯೋಗದೊಂದಿಗೆ ಕಾರಾಗೃಹ ಬಂಧಿಗಳಿಗೆ ಕಾರಾಗೃಹದಲ್ಲೇ ಕಂಪ್ಯೂಟರ್ ತರಬೇತಿ ಪಡೆಯಲು ವ್ಯವಸ್ಥೆ ಮಾಡಿದ್ದಾರೆ. ಇದಕ್ಕಾಗಿ ಸುಸಜ್ಜಿತ ಕೊಠಡಿಯಲ್ಲಿ 10 ಕಂಪ್ಯೂಟರ್ ಮತ್ತು ಪ್ರಿಂಟರ್‌ ಅಳವಡಿಕೆ ಮಾಡಲಾಗಿದ್ದು, ಇಂದು ಅಧಿಕೃತವಾಗಿ ತರಬೇತಿಗೆ ಚಾಲನೆ ನೀಡಿದ್ದಾರೆ. ಕಾರಾಗೃಹ ಕಟ್ಟಡದಲ್ಲಿಯೇ ಬಂಧಿಗಳಿಗೆ ಕಂಪ್ಯೂಟರ್ ತರಬೇತಿ ಪಡೆಯಲು ಇನ್ಫೋಸಿಸ್ ಸಹಕಾರದೊಂದಿಗೆ ತರಬೇತಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತರಬೇತಿ ಕೊಠಡಿಯಲ್ಲಿ ಕಲಿಕಾರ್ಥಿಗಳಿಗೆ ಸುಲಭವಾಗಿ ಕಂಪ್ಯೂಟರ್ ಅರ್ಥೈಸುವ ಕನ್ನಡ ಕಿರುಪುಸ್ತಕಗಳನ್ನೂ ಸಹ ಇಡಲಾಗಿದೆ. 

ಮಾಜಿ ಸಿಎಂ ಕುಮಾರಸ್ವಾಮಿ ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳಿಂದ ಅಧಿಕಾರ ಹಿಡಿದಿದ್ರು: ಸಿಎಂ ಸಿದ್ದರಾಮಯ್ಯ

ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು, ಕೆಲ ದಿನಗಳ ಹಿಂದೆ ಸಾಕ್ಷರತಾ ಕಾರ್ಯಕ್ರಮಕ್ಕಾಗಿ ಕಾರಾಗೃಹಕ್ಕೆ ಬಂದ ವೇಳೆ ಕಾರಾಗೃಹ ಬಂಧಿಗಳಿಗೂ ಕಂಪ್ಯೂಟರ್ ಶಿಕ್ಷಣ ನೀಡಬೇಕೆಂಬ ಆಲೋಚನೆ ಬಂತು. ಅಂದೇ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಶಿಕ್ಷಣ ತರಬೇತಿಗೆ ಕ್ರಮವಹಿಸುವುದಾಗಿ ಭರವಸೆ ನೀಡಿದ್ದೆನು. ಈ ಆಶಯ ಸಾಕಾರಗೊಳಿಸುವ ದಿನ ಇಂದು ಬಂದಿದೆ. ಇನ್ಫೋಸಿಸ್ ಸೇರಿದಂತೆ ಇತರೆ ಸಂಸ್ಥೆಗಳು ನಮ್ಮ ಮನವಿಗೆ ಒಗೊಟ್ಟು ಇಲ್ಲಿನ ಬಂಧಿಗಳಿಗೆ ಅತ್ಯಾಧುನಿಕ 10 ಕಂಪ್ಯೂಟರ್, ಪ್ರಿಂಟರ್ಗಳನ್ನು ನೀಡಿ ತರಬೇತಿಗೆ ಅಗತ್ಯ ಸಿಬ್ಬಂದಿ ನಿಯೋಜಿಸಿದೆ. ಕಾರಾಗೃಹ ಅಧಿಕಾರಿಗಳು ಪೂರಕವಾಗಿ ಸ್ಪಂದಿಸಿದ್ದಾರೆ ಎಂದರು.

ಕಾರಾಗೃಹದಲ್ಲಿರುವ ಸಮಯ ಸದುಪಯೋಗವಾಗಲಿ. ಇಲ್ಲಿಂದ ಹೊರಹೋದ ಮೇಲೆ ಸ್ವಂತ ಶಕ್ತಿಯ ಮೇಲೆ ಜೀವನ ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಂಪ್ಯೂಟರ್ ತರಬೇತಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚು ಓದಿಲ್ಲದೆ ಇರುವವರು ಸಹ ಕಂಪ್ಯೂಟರ್ ಕಲಿಯಲು ಅವಕಾಶವಿದೆ. ಇಲ್ಲಿ ಅನೇಕ ಬಗೆಯ ಕಂಪ್ಯೂಟರ್ ತರಬೇತಿ ನೀಡಲಾಗುತ್ತದೆ. ಈಗಿರುವ ಗ್ರಂಥಾಲಯದ ಜೊತೆ ಇ ಲೈಬ್ರರಿ ಸಹ ಆರಂಭಿಸಿದರೆ ಬಂಧಿಗಳಿಗೆ ಅವರವರ ಭಾಷೆಯಲ್ಲಿಯೇ ಓದಲು ಅನುಕೂಲ ಮಾಡಿಕೊಡಬಹುದು. ಹಿಂದೆ ಕಾರಾಗೃಹದಲ್ಲಿ ಗಂಧದ ಕಡ್ಡಿ ತಯಾರಿಕೆ ಮತ್ತಿತ್ತರ ಕೆಲಸಕ್ಕೆ ಪ್ರೋತ್ಸಾಹ ಸಿಕ್ಕಿತ್ತು.ಕೋವಿಡ್ ಬಳಿಕ ಇದೆಲ್ಲಾ ಸ್ಟಾಪ್ ಆಗಿದೆ. ಆದ್ದರಿಂದ ಈಗ ಕಂಪ್ಯೂಟರ್ ತರಬೇತಿ ಆರಂಭವಾಗಿದೆ ಎಂದರು.

ಹಾಸನಾಂಬೆ ಪವಾಡದಲ್ಲಷ್ಟೇ ಅಲ್ಲ, ಆದಾಯದಲ್ಲೂ ಶ್ರೀಮಂತೆ: ಕೇವಲ 12 ದಿನದಲ್ಲಿ 8.72 ಕೋಟಿ ಆದಾಯ ಗಳಿಕೆ

ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಎನ್.ಎಸ್. ಶಿವಕುಮಾರ್ ಮಾತನಾಡಿ, ಕಾರಾಗೃಹದಲ್ಲಿ ಬಂಧಿಗಳಿಗೆ ಕಂಪ್ಯೂಟರ್ ತರಬೇತಿ ನೀಡುವ ಹೊಸ ಕಾರ್ಯಕ್ಕೆ ರಾಜ್ಯದಲ್ಲೇ ಚಾಮರಾಜನಗರ ಜಿಲ್ಲೆ ಮೊದಲು ಎನಿಸಿದೆ. ಈ ಅವಕಾಶ ಕಲ್ಪಿಸಿದ ಜಿಲ್ಲಾಧಿಕಾರಿ, ಇನ್ಫೋಸಿಸ್ ಸಂಸ್ಥೆ ಹಾಗೂ ಇತರೆ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ನುಡಿದರು. ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಮೊದಲ ಹಂತವಾಗಿ 130 ಕ್ಕೂ ಹೆಚ್ಚು ಕೈದಿಗಳಿದ್ದು, ಎಸ್ಎಸ್ಎಲ್ ಸಿ ಹಾಗೂ ಮೇಲ್ಪಟ್ಟ 38 ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಆಯ್ಕೆ ಮಾಡಲಾಗಿದೆ. ನಂತರ ಹಂತ ಹಂತವಾಗಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಶಿಕ್ಷಣ ಒದಗಿಸುವ ಆಶಯ ಹೊಂದಿದ್ದಾರೆ.

click me!