ಈ ರೋಗಿಗಳಿಗೆ ಉಚಿತ ಕೊರೋನಾ ಲಸಿಕೆ

By Kannadaprabha News  |  First Published Mar 12, 2021, 9:36 AM IST

ಕಿಡ್ನಿ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕುಂದಿರುವ ಕಾರಣ ಅವರಿಗೆ ಕೋವಿಡ್‌ ಹರಡುವ ಸಾಧ್ಯತೆ ಹೆಚ್ಚು|  ಕಿಡ್ನಿ ಸಮಸ್ಯೆಗಳಿಗೆ ತಮ್ಮಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಲಸಿಕೆ ಉಚಿತ| ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಮಲ್ಲೇಶ್ವರಂ, ವೈಟ್‌ಫೀಲ್ಡ್‌ ಕೇಂದ್ರಗಳಲ್ಲಿಯೂ ಈ ಕಾರ್ಯಕ್ರಮ ಜಾರಿ| 


ಬೆಂಗಳೂರು(ಮಾ.12): ವಿಶ್ವ ಕಿಡ್ನಿ ದಿನದ ಅಂಗವಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ಗೆ ಒಳಗಾಗಿರುವ ರೋಗಿಗಳಿಗೆ ಕೋವಿಡ್‌- 19ರ ಲಸಿಕೆಯನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮ ಗುರುವಾರ ಆರಂಭಗೊಂಡಿದೆ.

ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯಸ್ಥ ಡಾ. ಸುದರ್ಶನ್‌ ಬಲ್ಲಾಳ್‌ ಮತ್ತು ಆಸ್ಪತ್ರೆಯ ನಿರ್ದೇಶಕ ಡಾ. ಮನೀಷ್‌ ರೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Latest Videos

undefined

ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಿದ ಸೋಂಕು: 11 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೋನಾ

ಕಿಡ್ನಿ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕುಂದಿರುವ ಕಾರಣ ಅವರಿಗೆ ಕೋವಿಡ್‌ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಕಿಡ್ನಿ ಸಮಸ್ಯೆಗಳಿಗೆ ತಮ್ಮಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಉಚಿತವಾಗಿ ಲಸಿಕೆ ನೀಡಿ, ಲಸಿಕೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಣಿಪಾಲ ಆಸ್ಪತ್ರೆ ಈ ಕಾರ್ಯಕ್ರಮ ಆರಂಭಿಸಿದೆ. ಮಣಿಪಾಲ ಆಸ್ಪತ್ರೆಯ ಮಲ್ಲೇಶ್ವರಂ, ವೈಟ್‌ಫೀಲ್ಡ್‌ ಕೇಂದ್ರಗಳಲ್ಲಿಯೂ ಈ ಕಾರ್ಯಕ್ರಮ ಜಾರಿಯಲ್ಲಿರಲಿದೆ. ಡಯಾಲಿಸಿಸ್‌ ಪಡೆಯುತ್ತಿರುವ ಎಲ್ಲರಿಗೂ ಲಸಿಕೆ ನೀಡುವ ಗುರಿಯನ್ನು ಸಂಸ್ಥೆ ಹೊಂದಿದೆ.
 

click me!