ಬಿಎಂಟಿಸಿಯ 33 ಸಾವಿರ ನೌಕರರಿಗೆ ಉಚಿತ ಲಸಿಕೆ

By Kannadaprabha NewsFirst Published Mar 21, 2021, 7:11 AM IST
Highlights

ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕಿಸಿಕೊಳ್ಳಬೇಕಾಗಿದೆ| ಈ ನಿಟ್ಟಿನಲ್ಲಿ ಉಚಿತವಾಗಿ ಲಸಿಕೆ ನೀಡಲು ವ್ಯವಸ್ಥೆ| ಐಡಿ ಕಾರ್ಡ್‌ ತೋರಿಸಿ ಲಸಿಕೆ ಪಡೆಯಿರಿ| 

ಬೆಂಗಳೂರು(ಮಾ.21): ನಗರದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಎಂಟಿಸಿಯ 33 ಸಾವಿರ ಸಿಬ್ಬಂದಿಗೆ ಉಚಿತ ಕೋವಿಡ್‌ ಲಸಿಕೆ ನೀಡಲು ಸಂಸ್ಥೆ ನಿರ್ಧರಿಸಿದೆ.

ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕರು ಪ್ರತಿ ದಿನ ಸಾವಿರಾರು ಪ್ರಯಾಣಿಕರೊಂದಿಗೆ ಬೆರೆಯುತ್ತಿದ್ದಾರೆ. ಕೊರೋನಾ ವಾರಿಯರ್ಸ್‌ರಂತೆ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಉಚಿತವಾಗಿ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಸ್ಥೆಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಸಾರಿಗೆ ನೌಕರರಿಗೆ ಸಿಹಿಸುದ್ದಿ

ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ಇಚ್ಛೆಯಿರುವ ಎಲ್ಲ ವಯೋಮಾನದ ಸಿಬ್ಬಂದಿ, ಜಯನಗರದ ಸಾರ್ವಜನಿಕ ಆಸ್ಪತ್ರೆ, ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆ, ಇಂದಿರಾನಗರದ ಸಿ.ವಿ.ರಾಮನ್‌ ಸರ್ಕಾರಿ ಆಸ್ಪತ್ರೆ, ಶಿವಾಜಿನಗರ ಬೌರಿಂಗ್‌ ಆಸ್ಪತ್ರೆ, ಯಲಹಂಕದ ಸರ್ಕಾರಿ ಆಸ್ಪತ್ರೆಯಲ್ಲಿ ಬಿಎಂಟಿಸಿಯಿಂದ ನೀಡಿರುವ ಗುರುತಿನ ಚೀಟಿ, ಆಧಾರ್‌ ಕಾರ್ಡ್‌, ಪಾನ್‌ ಕಾರ್ಡನ್ನು ತೋರಿಸಿ ಲಸಿಕೆ ಪಡೆದುಕೊಳ್ಳುವಂತೆ ಅವರು ಸೂಚಿಸಿದ್ದಾರೆ.
 

click me!