ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ವತಿಯಿಂದ ರಾಷ್ಟ್ರೀಯ ಆಹಾರ ಭದ್ರತೆ ಹಾಗೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆಯಲ್ಲಿ ಬಿಡುಗಡೆಯಾದ ಆಹಾರಧಾನ್ಯಗಳನ್ನು ನವೆಂಬರ್-2022 ಮಾಹೆಯಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ವಿತರಿಸಲಾಗುತ್ತಿದೆ.
ಮೈಸೂರು (ನ.07): ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ವತಿಯಿಂದ ರಾಷ್ಟ್ರೀಯ ಆಹಾರ ಭದ್ರತೆ ಹಾಗೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆಯಲ್ಲಿ ಬಿಡುಗಡೆಯಾದ ಆಹಾರಧಾನ್ಯಗಳನ್ನು ನವೆಂಬರ್-2022 ಮಾಹೆಯಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ವಿತರಿಸಲಾಗುತ್ತಿದೆ.
ಅಂತೋದ್ಯಯ ಯೋಜನೆಯಡಿ ಉಚಿತವಾಗಿ (Free ) ಪ್ರತಿ ಪಡಿತರ ಚೀಟಿಗೆ 27 ಕೆ.ಜಿ ಅಕ್ಕಿ (Rice) ಮತ್ತು 8 ಕೆ.ಜಿ ರಾಗಿ ಹಾಗೂ ಪ್ರತಿ ಯೂನಿಟ್‌ಗೆ 5 ಕೆ.ಜಿ ಅಕ್ಕಿ ವಿತರಿಸಲಾಗುವುದು. ಪಿಎಚ್‌ಎಚ್‌ಯೋಜನೆಯಡಿ ಪ್ರತಿ ಯೂನಿಟ್‌ಗೆ 3 ಕೆ.ಜಿ ಅಕ್ಕಿ ಮತ್ತು 2 ಕೆ.ಜಿ ರಾಗಿ ಹಾಗೂ ಆದ್ಯತಾ ಅಡಿಯಲ್ಲಿ ಪ್ರತಿ ಯೂನಿಟ್ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುವುದು.
ಎನ್‌ಪಿಎಚ್‌ಎಚ್ ಯೋಜನೆಯಡಿ ಎಪಿಎಲ್ ಕಾರ್ಡ್‌ದಾರರಿಗೆ ಪ್ರತಿ ಕೆ.ಜಿ ಗೆ .15 ಗಳಂತೆ ಏಕಸದಸ್ಯ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ ಮತ್ತು 2 ಮತ್ತು ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ಅಂತರ್ ನ್ಯಾಯಬೆಲೆ ಅಂಗಡಿ/ ಅಂತರ್ ಜಿಲ್ಲೆ/ಅಂತರ್ ರಾಜ್ಯ ಪಡಿತರ ಚೀಟಿಗಳಿಗೆ ಪೋರ್ಟಬಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಜಿಲ್ಲೆಯ / ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ದಂಡ ವಸೂಲಿ
ಕನಕಪುರ(ನ.03): ಕಾನೂನು ಬಾಹಿರವಾಗಿ ಬಿಪಿಎಲ್ ಪಡಿತರ ಸೌಲಭ್ಯ ಪಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಅಚ್ಚಲು ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ ಅವರ ಕುಟುಂಬದಿಂದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ 49 ಸಾವಿರ ದಂಡ ವಸೂಲಿ ಮಾಡಿದೆ.
ತಾಲೂಕಿನ ಸಾತನೂರು ಹೋಬಳಿಯ ಗೊಲ್ಲರದೊಡ್ಡಿ ಗ್ರಾಮದ ವಾಸಿ ಹಾಗೂ ಅಚ್ಚಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಕೆಂಗೇಗೌಡ ಅವರ ಕುಟುಂಬ ನಿಯಮ ಬಾಹಿರವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದು ವಂಚಿಸಿರುವುದು ಅಧಿಕಾರಿಗಳ ಪರಿಶೀಲನೆಯಿಂದ ಬೆಳಕಿಗೆ ಬಂದಿತು.
ನಕಲಿ BPL Card ಹೊಂದಿರುವ ಸರಕಾರಿ ನೌಕರರಿಗೆ ಬಿಗ್ ಶಾಕ್!
ಈ ಹಿನ್ನೆಲೆಯಲ್ಲಿ ಅಚ್ಚಲು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶಿವಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅವರ ಪುತ್ರ ಅಜಯ್ ಕುಮಾರ್ ಯಾದವ್ ಪದವೀಧರನಾಗಿದ್ದು ಆರ್ಥಿಕವಾಗಿ ಸಬಲರಾಗಿದ್ದಾರೆ. ಸಾಕಷ್ಟುಆಸ್ತಿ ಹೊಂದಿದ್ದರೂ ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಮತ್ತು ಅದರ ಸೌಲಭ್ಯ ಪಡೆದು ಬಡವರಿಗೆ ಮತ್ತು ಸರ್ಕಾರಕ್ಕೆ ವಂಚಿಸುತ್ತಿದ್ದು ಇವರ ಪಡಿತರವನ್ನು ರದ್ದುಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿ ನಿಯಮ ಬಾಹಿರವಾಗಿ ಪಡೆದಿರುವ ಪಡಿತರಕ್ಕೆ ದಂಡ ವಿಧಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಪೊಲೀಸ್ ಇಲಾಖೆ ಮತ್ತು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.
ಜಿಲ್ಲಾಧಿಕಾರಿಗಳು ದೂರನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಗೆ ವರ್ಗಾಯಿಸಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿಗಳು ತನಿಖೆ ಕೈಗೊಂಡು ಗೊಲ್ಲರ ದೊಡ್ಡಿ ಗ್ರಾಮದ ವಾಸಿ ಹಾಗೂ ಅಚ್ಚಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಕೆಂಗೇಗೌಡ ಹಾಗೂ ಅವರ ಕುಟುಂಬದವರು 14 ಎಕರೆ ಜಮೀನು ಹೊಂದಿದ್ದು ಇದರಲ್ಲಿ ಜಲಮಂಡಳಿ ಹೋಸದಾಗಿ ಪೈಪ್‌ಲೈನ್ ಅಳವಡಿಸಲು ಗುತ್ತಿಗೆ ಪಡೆದಿರುವ ಖಾಸಗಿ ಕಂಪನಿಗೆ ಪೈಪ್ ತಯಾರಿಕೆಗೆ ಜಮೀನು ಬಾಡಿಗೆ ನೀಡಿ ವಾರ್ಷಿಕವಾಗಿ 5 ಲಕ್ಷ ಬಾಡಿಗೆಯನ್ನು ಪಡೆಯುತ್ತಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
'ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಕುಟುಂಬಕ್ಕೂ ಮನೆ'
ಪ್ರತಿ ಮಾಹೆಯ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ ಎನ್‌ಎಫ್‌ಎಸ್‌ಎ, ಪಿಎಂಜಿಕೆಎವೈಯಡಿ ಪಡಿತರ ವಿತರಣೆ ಕಾರ್ಯ ನಡೆಯುತ್ತದೆ. ಆದ್ದರಿಂದ, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಲು ತಿಳಿಸಿದೆ.
ಮಾಹೆಯ 1ನೇ ತಾರೀಖಿನಿಂದ 10 ನೇ ತಾರೀಖಿನವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ.
ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮ ವಹಿಸಲಾಗುವುದು. ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು/ ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಜರುಗಿಸಲಾಗುವುದು.
ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ, ಸಂಬಂಧಿಸಿದ ತಹಸೀಲ್ದಾರ ಕಚೇರಿ ಅಥವಾ ಆಹಾರ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಬಹುದು ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.