ಶೀಘ್ರದಲ್ಲೇ ಪೌರಕಾರ್ಮಿಕರಿಗೆ ಉಚಿತ ನಿವೇಶನ: ಬಾಲಕೃಷ್ಣ

By Kannadaprabha News  |  First Published Jan 4, 2025, 10:32 AM IST

ಪೌರಕಾರ್ಮಿಕರ ದಿನಾಚರಣೆ ಮೂಲಕ ಅವರನ್ನು ಗೌರವಿಸುವುದರ ಜತೆಗೆ ಅವರ ಬೇಡಿಕೆ ಈಡೇರಿಸಲಾಗುವುದು ಎಂದು ತಿಳಿಸಿದ ಶಾಸಕ ಎಚ್.ಸಿ.ಬಾಲಕೃಷ್ಣ


ಮಾಗಡಿ(ಜ.04): ಪೌರಕಾರ್ಮಿಕರ ಬೇಡಿಕೆಯಂತೆ ಶೀಘ್ರದಲ್ಲೆ 2 ಎಕರೆ ಜಾಗ ನಿಗದಿ ಮಾಡಿ ಉಚಿತ ನಿವೇಶನ ಹಂಚಿ ಮನೆಗಳ ನಿರ್ಮಾಣಕ್ಕೆ ನೆರವು ನೀಡಲಾಗುವುದು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಭರವಸೆ ನೀಡಿದರು. 

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಪುರಸಭೆ, ತಾಲೂಕು ಪೌರಸೇವಾ ನೌಕರರ ಸಂಘದ ಸಹಯೋಗದಲ್ಲಿ ಆಯೋಜಿಸಿದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣವನ್ನು ಸ್ವಚ್ಛ ಹಾಗೂ ಸುಂದರವಾಗಿ ಕಾಪಾಡುವಲ್ಲಿ ಪೌರಕಾರ್ಮಿಕರಕಾರ್ಯ ಶ್ಲಾಘನೀಯ. 

Tap to resize

Latest Videos

ದಲಿತರ ಸ್ಮಶಾನ, ನಿವೇಶನ ಸಮಸ್ಯೆ ಪರಿಹಾರಕ್ಕೆ ಆದ್ಯತೆ: ಶಾಸಕ ಸಿ.ಪಿ.ಯೋಗೇಶ್ವರ್

ಪೌರಕಾರ್ಮಿಕರ ದಿನಾಚರಣೆ ಮೂಲಕ ಅವರನ್ನು ಗೌರವಿಸುವುದರ ಜತೆಗೆ ಅವರ ಬೇಡಿಕೆ ಈಡೇರಿಸಲಾಗುವುದು ಎಂದು ತಿಳಿಸಿದರು. ಪೌರ ಕಾರ್ಮಿಕರಿಗಾಗಿ ಈಗಾಗಲೇ ತಿರುಮಲೆಯಲ್ಲಿ ಮನೆಗಳನ್ನು ನಿರ್ಮಿಸಿದ್ದು, ಪೌರ ಕಾರ್ಮಿಕರು ನಮಗೆ ಕಟ್ಟಡ ಬೇಡ ಜಾಗ ನೀಡಿದರೆ ಸಾಕು ಎಂದು ಹೇಳಿದ್ದರಿಂದ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ್‌ಅವರಿಗೆ ಎರಡು ಎಕೆರೆ ಜಾಗ ಗುರುತಿಸಲು ತಿಳಿಸಿದ್ದು, ಆದಷ್ಟು ಬೇಗ ನಿವೇಶನ ನೀಡಲಾಗುವುದು, ಹೊರಗುತ್ತಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪುರಸಭಾ ನೀರು ಸರಬರಾಜು ನೌಕರರನ್ನು ಹಾಗೂ ಪೌರ ಕಾರ್ಮಿಕರ ಕೆಲಸ ಕಾಯಂಗೊಳಿಸಲು ಸದನದಲ್ಲಿ ಚರ್ಚಿಸಲಾಗುವುದು ಎಂದು ಬಾಲಕೃಷ್ಣ ಭರವಸೆ ನೀಡಿದರು. 

ಜಿಲ್ಲಾ ಪೌರಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ನಾಗರಾಜು ಮಾತನಾಡಿ, ಪೌರ ಕಾರ್ಮಿಕರಿಗೆ ಸರ್ಕಾರದಿಂದ ಬರಬೇಕಾದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಶಾಸಕರಿಂದ ಆಗಬೇಕು. ಪ್ರತಿ 2 ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಬೇಕು. ಬೆಳಗಿನ ತಿಂಡಿ ಶುಚಿಯಾಗಿ ನೀಡಬೇಕು. ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಶಿಕ್ಷಣವನ್ನು ಕೊಡಿಸುವಂತೆ ಹಾಗೂ ತಮ್ಮ ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಕಾಯಂ ನೌಕರರನ್ನಾಗಿ ಮಾಡುವಂತೆ ಮನವಿ ಮಾಡಿದರು. 

ಪುರಸಭಾಧ್ಯಕ್ಷೆ ರಮ್ಯಾ ಮಾತನಾಡಿ, ನಗರದ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ. ರ್ವಜನಿಕರ ಆರೋಗ್ಯ ರಕ್ಷಣೆಗೆ ಬೀದಿಗಳಿದು ತಮ್ಮ ಪಾಲಿನ ಕರ್ತವ್ಯ ಪ್ರಾಮಾಣಿಕವಾಗಿ ಮಾಡುತ್ತಿರುವ ಪೌರಕಾರ್ಮಿಕರಿಗೆ ಜನರ ಪರವಾಗಿ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ. ಹೊರಗುತ್ತಿಗೆದಾರರ ಬದುಕಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಹಾಗೂ ಪೌರಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು. 

ಚನ್ನಪಟ್ಟಣ: ರೈತರ ಪಾಲಿಗೆ ಕಂಟಕಪ್ರಾಯವಾಗಿದ್ದ ಪುಂಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ

ಪುರಸಭಾ ಸದಸ್ಯ ಎಂ.ಎನ್.ಮಂಜುನಾಥ್ ಮಾತನಾಡಿ, ಹಬ್ಬ, ಉತ್ಸವ ಎನ್ನದೆ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ದೇವರ ಮಕ್ಕಳು ಎಂದರೆ ತಪ್ಪಾಗಲಾರದು. ಅವರು ಮಾಡುವ ಕೆಲಸಕ್ಕೆ ನ್ಯಾಯ ಒದಗಿಸಲು ಶಾಸಕರು ಪುರಸಭಾ ವ್ಯಾಪ್ತಿಯಲ್ಲಿ ಅರ್ಧ ನಿವೇಶನವನ್ನಾದರೂ ನೀಡಬೇಕು. ಎಲ್ಲಾ ಸದಸ್ಯರನ್ನು ಗಣನೆಗೆ `ತೆಗೆದುಕೊಂಡು ಕಾರ್ಯಕ್ರಮಗಳನ್ನು ರೂಪಿಸುವಂತೆ ಸಲಹೆ ನೀಡಿದರು. 

ಇದೇ ವೇಳೆ ಪೌರ ಕಾರ್ಮಿಕರನ್ನು ಸನ್ಮಾಸಲಾಯಿತು. ಕಾರ್ಮಿಕರಿಗಾಗಿ ಆಯೋಜಿಸಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಶಿವರುದ್ರಯ್ಯ ಉಪಾಧ್ಯಕ್ಷ ರಿಯಾಜ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುರ್ಮಾ, ಪುರಸಭಾ ಮಾಜಿ ಅಧ್ಯಕ್ಷ ರಂಗಹನುಮಯ್ಯ, ಪುರಸಭಾ ಸದಸ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

click me!