SSLC, PUC ಪರೀಕ್ಷೆ: ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ

By Kannadaprabha NewsFirst Published Feb 21, 2020, 8:31 AM IST
Highlights

ಪರೀಕ್ಷೆ ಹಿನ್ನೆಲೆ: ಎಸ್ಸೆಸ್ಸೆಲ್ಸಿ, ಪಿಯು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ|  ಹಾಲ್‌ ಟಿಕೆಟ್‌ ತೋರಿಸಿದರೆ ಸಂಚಾರಕ್ಕೆ ಅವಕಾಶ| ಮಾ.4ರಿಂದ ಮಾ.23ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ| ಮಾ.27ರಿಂದ ಏ.9ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ| 

ಬೆಂಗಳೂರು(ಫೆ.21): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷೆ ದಿನಗಳಂದು ವಿದ್ಯಾರ್ಥಿಗಳು ಮನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳುವಾಗ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿದೆ.

SSLC ಪೂರ್ವಸಿದ್ಧತಾ ಪರೀಕ್ಷೆ: ಮತ್ತೊಂದು ಪ್ರಶ್ನೆಪತ್ರಿಕೆಯೂ ಲೀಕ್!

ಮಾ.4ರಿಂದ ಮಾ.23ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಹಾಗೂ ಮಾ.27ರಿಂದ ಏ.9ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ವಿದ್ಯಾಸಂಸ್ಥೆಗಳ ಹೊರತಾಗಿ ಬೇರೆ ವಿದ್ಯಾಸಂಸ್ಥೆಗಳಲ್ಲೂ ಪರೀಕ್ಷಾ ಕೇಂದ್ರಗಳು ಇರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತದೆ. 

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ವಾಟ್ಸಪ್‌ನಲ್ಲಿ ಸೋರಿಕೆ

ಈ ಹಿನ್ನೆಲೆಯಲ್ಲಿ ಪರೀಕ್ಷಾ ದಿನ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ ತೋರಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಅಂತೆಯೇ ಬಸ್‌ ಸಂಚಾರ ಮಾರ್ಗದಲ್ಲಿ ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಪರೀಕ್ಷಾ ಕೇಂದ್ರಗಳ ಬಳಿ ನಿಲುಗಡೆ ಕಲ್ಪಿಸುವಂತೆ ಚಾಲನಾ ಸಿಬ್ಬಂದಿಗೆ ಸೂಚಿಸಲಾಗಿದೆ.
 

click me!