ಕ್ಷಯರೋಗಕ್ಕೆ ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿಯೂ ಉಚಿತ ಚಿಕಿತ್ಸೆ

By Kannadaprabha News  |  First Published Mar 26, 2024, 10:09 AM IST

ಸರ್ಕಾರಿ ಸೇರಿದಂತೆ ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿಯೂ ಉಚಿತ ಕ್ಷಯರೋಗದ ಪರೀಕ್ಷೆ ಮತ್ತು ಚಿಕಿತ್ಸೆ ಲಭ್ಯವಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಜಿ.ಕೆ.ಸನತ್ ಕುಮಾರ್ ತಿಳಿಸಿದರು.


  ತುಮಕೂರು :  ಸರ್ಕಾರಿ ಸೇರಿದಂತೆ ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿಯೂ ಉಚಿತ ಕ್ಷಯರೋಗದ ಪರೀಕ್ಷೆ ಮತ್ತು ಚಿಕಿತ್ಸೆ ಲಭ್ಯವಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಜಿ.ಕೆ.ಸನತ್ ಕುಮಾರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಸಹಯೋಗದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ಷಯರೋಗಿಯು ಚಿಕಿತ್ಸೆ ಪಡೆಯುವ ಅವಧಿಯಲ್ಲಿ ನಿಕ್ಷಯ್ ಪೋಷಣೆ ಯೋಜನೆಯಡಿ ಚಿಕಿತ್ಸೆ ಪೂರ್ಣಗೊಳ್ಳುವವರೆಗೆ ಮಾಸಿಕ ೫೦೦ ರೂ.ಗಳನ್ನು ರೋಗಿಯ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದರಲ್ಲದೆ, ಕ್ಷಯರೋಗದ ಲಕ್ಷಣಗಳುಳ್ಳ ರೋಗಿಗಳು ಹತ್ತಿರದ ಸರ್ಕಾರಿ/ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಟ್ಟು ಚಿಕಿತ್ಸೆ ಪಡೆಯಬೇಕೆಂದು ತಿಳಿಸಿದರು.

Tap to resize

Latest Videos

undefined

ಕ್ಷಯರೋಗವನ್ನು 2025ನೇ ಇಸವಿಗೆ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಈ ವರ್ಷ “ಹೌದು ನಾವು ಕ್ಷಯರೋಗವನ್ನು ಕೊನೆಗೊಳಿಸಬಹುದು” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರಲ್ಲದೆ, ಕ್ಷಯರೋಗವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ನಾಗರಿಕರು ಸಹಕರಿಸಬೇಕೆಂದು ಅವರು ಮನವಿ ಮಾಡಿದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

click me!