ಫೆ. 9 ರಿಂದ ರಾಷ್ಟ್ರ ಜಾಗೃತಿ ಅಬಿಯಾನ ಕುರಿತ ಕಾರ್ಯಕ್ರಮ

Published : Jan 21, 2024, 11:25 AM IST
 ಫೆ. 9 ರಿಂದ ರಾಷ್ಟ್ರ ಜಾಗೃತಿ ಅಬಿಯಾನ ಕುರಿತ ಕಾರ್ಯಕ್ರಮ

ಸಾರಾಂಶ

  ರಾಷ್ಟ್ರೀಯ ಮಾನವ-ಪರಿಸರ ಸಂರಕ್ಷಣಾ ಪಡೆ ತುಮಕೂರು ವತಿಯಿಂದ ರಾಷ್ಟ್ರ ಜಾಗೃತಿ ಅಭಿಯಾನ ಅಂಗವಾಗಿ ಫೆ. 9 ರಿಂದ 11 ರವರೆಗೆ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಮಾನವ-ಪರಿಸರ ಸಂರಕ್ಷಣಾ ಪಡೆಯ ಅಧ್ಯಕ್ಷ ಜಿ.ಎಸ್. ಬಸವರಾಜು ತಿಳಿಸಿದ್ದಾರೆ.

  ತುಮಕೂರು :  ರಾಷ್ಟ್ರೀಯ ಮಾನವ-ಪರಿಸರ ಸಂರಕ್ಷಣಾ ಪಡೆ ತುಮಕೂರು ವತಿಯಿಂದ ರಾಷ್ಟ್ರ ಜಾಗೃತಿ ಅಭಿಯಾನ ಅಂಗವಾಗಿ ಫೆ. 9 ರಿಂದ 11 ರವರೆಗೆ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಮಾನವ-ಪರಿಸರ ಸಂರಕ್ಷಣಾ ಪಡೆಯ ಅಧ್ಯಕ್ಷ ಜಿ.ಎಸ್. ಬಸವರಾಜು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮಾನವ-ಪರಿಸರ ಸಂರಕ್ಷಣಾ ಪಡೆ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ರಾಷ್ಟ್ರ ಜಾಗೃತಿಗೆ ಸಂಬಂಧಿಸದಿಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು, ಈ ಬಾರಿಯೂ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜನಪದ ಕಲಾತಂಡಗಳ ಸ್ಪರ್ಧೆ ಮತ್ತು ರಾಷ್ಟ್ರಭಕ್ತಿ ಗೀತೆಗಳ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ವಿಜೇತರಿಗೆ ಪ್ರಥಮ ಬಹುಮಾನವಾಗಿ 50 ಸಾವಿರ ರು., ದ್ವಿತಿಯ ಬಹುಮಾನವಾಗಿ 40 ಸಾವಿರ ರು. ಹಾಗೂ ತೃತೀಯ ಬಹುಮಾನವಾಗಿ 30 ಸಾವಿರ ರು. ಗಳನ್ನು ಎರಡು ಸ್ಪರ್ಧೆಗಳಿಗೆ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರವೇಶ ಶುಲ್ಕ 500 ರು. ಗಳನ್ನು ಪಾವತಿಸಬೇಕಾಗಿದೆ ಎಂದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಫೆ. 9 ರ ಶುಕ್ರವಾರ ಸಂಜೆ 5 ಗಂಟೆಗೆ ರಾಷ್ಟ್ರ ಜಾಗೃತಿ ಅಭಿಯಾನ ಅಧ್ಯಕ್ಷ ಎಸ್.ಪಿ. ಚಿದಾನಂದ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಜಿ. ಪ್ರಭು, ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಹಾಗೂ ನಗರಪಾಲಿಕೆ ಆಯುಕ್ತರಾದ ಅಶ್ವಿಜ ಭಾಗವಹಿಸಲಿದ್ದಾರೆ. ತದನಂತರ ಪ್ರಸಿದ್ದ ಗಾಯಕರಾದ ರಾಮಚಂದ್ರ ಹಡಪದ ಮತ್ತು ತಂಡದವರಿಂದ ಬಾವಲಹರಿ ಕಾರ್ಯಕ್ರಮ ಜರುಗಲಿದೆ ಎಂದರು.

PREV
click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ