ಕೊರೋನಾ ಕಾಟ: ಮಾಸ್ಕ್‌ ಧರಿಸದಿದ್ದರೆ 250 ರೂ. ದಂಡ..!

By Kannadaprabha NewsFirst Published May 6, 2020, 9:25 AM IST
Highlights

ಮನೆಯಿಂದ ಹೊರಗೆ ಬರುವ ಸಾರ್ವಜನಿಕರು, ಅಂಗಡಿ ಮಳಿಗೆ ಮಾಲೀಕರು ಹಾಗೂ ಕೆಸಲಗಾರರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್‌ ಧರಿಸುವುದು ಕಡ್ಡಾಯ| ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರು ಮಾಸ್ಕ್‌ ಧರಿಸದೇ ಇರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಂಡುಬಂದಲ್ಲಿ 250 ದಂಡ|

ಗದಗ(ಮೇ.06): ಕೋವಿಡ್‌-19 ಒಂದು ಮಾರಕ ಸಾಂಕ್ರಾಮಿಕ ರೋಗವಾಗಿದ್ದು ಮನುಷ್ಯರಿಂದ ಮನುಷ್ಯರಿಗೆ ತೀವ್ರಗತಿಯಲ್ಲಿ ಹರಡುತ್ತಿರುವುದರಿಂದ ಜನರು ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ ಎಂದು ಗದಗ- ಬೆಟಗೇರಿ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಮಂಗಳವಾರ ಈ ಸಂಬಂಧಬ ಪ್ರಕಟಣೆ ಹೊರಡಿಸಿರುವ ಅವರು, ಮಾರುಕಟ್ಟೆ ಪ್ರದೇಶ, ಅಂಗಡಿ ಮಳಿಗೆ, ಮೆಡಿಕಲ್‌ ಶಾಪ್‌, ಮಟನ್‌ ಶಾಪ್‌ ಹಾಗೂ ಇನ್ನಿತರೆ ಯಾವುದೇ ಕೆಲಸ ಕಾರ್ಯಗಳಿಗಾಗಿ ಮನೆಯಿಂದ ಹೊರಗೆ ಬರುವ ಸಾರ್ವಜನಿಕರು, ಅಂಗಡಿ ಮಳಿಗೆ ಮಾಲಿಕರು ಹಾಗೂ ಕೆಸಲಗಾರರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್‌ ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ಹೇಳಿದ್ದಾರೆ. 

ಗದಗ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಹರಡುವ ಭೀತಿ: ಆತಂಕದಲ್ಲಿ ಜನತೆ..!

ಒಂದು ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರು ಮಾಸ್ಕ್‌ ಧರಿಸದೇ ಇರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಂಡುಬಂದಲ್ಲಿ 250 ದಂಡ ವಿಧಿಸಲಾಗುವುದು ಹಾಗೂ ಕೋವಿಡ್‌-19 ಸಾಂಕ್ರಾಮಿಕ ರೋಗ ತಡೆ ನಿಯಮ-2020 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರಂತೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
 

click me!