ಗಾಂಧೀ ಜಯಂತಿ ಪ್ರಯುಕ್ತ ಅಕ್ಟೋಬರ್ 1ರ ಸಂಜೆ 5 ಗಂಟೆಯಿಂದ ಅ.2 ರ ಮಧ್ಯರಾತ್ರಿ 12 ಗಂಟೆಯವರೆಗೆ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆ ಹಾಗೂ ಎಲ್ಲಾ ರೀತಿಯ ಮಾಂಸ ಮಾರಾಟ ಮಳಿಗೆಗಳನ್ನು ಮುಚ್ಚುವುದು. ಈ ಅವಧಿಯಲ್ಲಿ ಮಾಂಸ ಮಾಟಾಟ ಮಾಡುವುದಾಗಲಿ, ಸಂಗ್ರಹಣೆ ಮಾಡುವುದಾಗಲಿ ನಿಷೇಧಿಸಿದೆ ಎಂದು ಪಾಲಿಕೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ತುಮಕೂರು: ಗಾಂಧೀ ಜಯಂತಿ ಪ್ರಯುಕ್ತ ಅಕ್ಟೋಬರ್ 1ರ ಸಂಜೆ 5 ಗಂಟೆಯಿಂದ ಅ.2 ರ ಮಧ್ಯರಾತ್ರಿ 12 ಗಂಟೆಯವರೆಗೆ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆ ಹಾಗೂ ಎಲ್ಲಾ ರೀತಿಯ ಮಾಂಸ ಮಾರಾಟ ಮಳಿಗೆಗಳನ್ನು ಮುಚ್ಚುವುದು. ಈ ಅವಧಿಯಲ್ಲಿ ಮಾಂಸ ಮಾಟಾಟ ಮಾಡುವುದಾಗಲಿ, ಸಂಗ್ರಹಣೆ ಮಾಡುವುದಾಗಲಿ ನಿಷೇಧಿಸಿದೆ ಎಂದು ಪಾಲಿಕೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಅ.3 ರಂದು ವಿದ್ಯುತ್ ವ್ಯತ್ಯಯ
undefined
ತುಮಕೂರು: ತುಮಕೂರು ನಗರ ಉಪವಿಭಾಗ-2ರ ಜಯನಗರ ಶಾಖಾ ವ್ಯಾಪ್ತಿಗೆ ಸಂಬಂಧಿಸಿದಂತೆ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಅಕ್ಟೋಬರ್ 3ರಂದು ಬೆಳಿಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ಜಯನಗರ ಪಶ್ಚಿಮ (ವೆಂಕಟೇಶ್ವರ ದೇವಸ್ಥಾನದ ಹತ್ತಿರ), ಜಯನಗರ ದಕ್ಷಿಣ, ಗಂಗಾನಗರದಲ್ಲಿ ಅನಿಯಮಿತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2293878, ಮೊ.ಸಂ.94498 44312 ಸಂಪರ್ಕಿಸಬಹುದಾಗಿದೆ.
ಇಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿರಿಯನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಇನ್ನರ್ ವ್ಹೀಲ್ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ೨೦೨೩ನೇ ಸಾಲಿನ ವಿಶ್ವ ಹಿರಿಯನಾಗರಿಕರ ದಿನಾಚರಣೆ ಯನ್ನು ಭಾನುವಾರ ಬೆಳಿಗ್ಗೆ 9.30 ಕ್ಕೆ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರ ಉಪಸ್ಥಿತಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಕಾರ್ಯಕ್ರಮ ಉದ್ಘಾಟಿಸುವರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸುವರು.
ಗಾಂಧೀ ಗ್ರಾಮ ಪುರಸ್ಕಾರ ದ ಗರಿ
ತುಮಕೂರು: ಗ್ರಾಮೀಣ ಪ್ರದೇಶದ ನಾಗರೀಕರ ಬೇಡಿಕೆಗಳನ್ನು ಸಂಗ್ರಹಿಸಿ ಅವುಗಳ ಆಧಾರದಲ್ಲಿ ಜನರಿಗೆ ಅತ್ಯವಶ್ಯಕವಾದ ಮೂಲ ಸೌಕರ್ಯ ಮತ್ತು ಸೇವೆಗಳನ್ನು ಒದಗಿಸಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ತುಮಕೂರು ಜಿಲ್ಲೆಯ 10 ಗ್ರಾಮಪಂಚಾಯತಿಗಳನ್ನು 2022-23ನೇ ಸಾಲಿನ ಗಾಂಧೀ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿ.ನಾ.ಹಳ್ಳಿ ತಾಲ್ಲೂಕಿನ ಕೋರಗೆರೆ ಗ್ರಾಮಪಂಚಾಯತಿ, ಗುಬ್ಬಿ ತಾಲ್ಲೂಕಿನ ಮೂಗನಾಯಕನಕೋಟೆ, ಕೊರಟಗೆರೆ ತಾಲ್ಲೂಕಿನ ಬೈಚಾಪುರ, ಕುಣಿಗಲ್ ತಾಲ್ಲೂಕಿನ ಕೊಪ್ಪ, ಮಧುಗಿರಿ ತಾಲ್ಲೂಕಿನ ಕಲಿದೇವಪುರ, ಪಾವಗಡ ತಾಲ್ಲೂಕಿನ ಅರಸೀಕೆರೆ, ಶಿರಾ ತಾಲ್ಲೂಕಿನ ತಾವರೆಕೆರೆ, ತುಮಕೂರು ತಾಲ್ಲೂಕಿನ ತಿಮ್ಮರಾಜನಹಳ್ಳಿ, ತುರುವೇಕೆರೆ ತಾಲ್ಲೂಕಿನ ಕಣತ್ತೂರು, ತಿಪಟೂರು ತಾಲ್ಲೂಕಿನ ನೆಲ್ಲಿಕೆರೆ ಗ್ರಾಮ ಪಂಚಾಯತಿಗಳನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿರುತ್ತದೆ. 2013 ರಿಂದಲೂ ಪ್ರತಿ ತಾಲ್ಲೂಕಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಒಂದು ಗ್ರಾಮಪಂಚಾಯತಿಯನ್ನು ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿರುತ್ತದೆ.
ಪ್ರತಿ ಗ್ರಾಮಪಂಚಾಯತಿಗಳಿಗೆ ಪ್ರಶಸ್ತಿ ಮೊತ್ತವಾಗಿ ರೂ.5ಲಕ್ಷಗಳನ್ನು ಪ್ರಧಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.