ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆ, ನಾಳೆ ಬೆಂಗಳೂರಿನ ಕೆಲ ಸಂಚಾರಿ ಮಾರ್ಗಗಳ ಬದಲಾವಣೆ

Published : Sep 03, 2022, 08:38 PM IST
ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆ, ನಾಳೆ ಬೆಂಗಳೂರಿನ ಕೆಲ ಸಂಚಾರಿ ಮಾರ್ಗಗಳ ಬದಲಾವಣೆ

ಸಾರಾಂಶ

ಸೆ.4 ರಂದು ಪೂರ್ವ ವಿಭಾಗದ ಕೆಲ ಸಂಚಾರಿ ಮಾರ್ಗಗಳ ಬದಲಾವಣೆ ಮಾಡಲಾಗಿದೆ. ಮದ್ಯಾಹ್ನ 2ರಿಂದ ರಾತ್ರಿ 10ರವರೆಗೂ‌ ಸಂಚಾರ ನಿರ್ಬಂಧ ವಿಧಿಸಲಾದ ರಸ್ತೆಗಳು‌. ನಾಗವಾರ ಜಂಕ್ಷನ್ ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಭಾಗಶಃ ಸಂಚಾರ ನಿರ್ಬಂಧ ಹೇರಲಾಗಿದೆ.

ಬೆಂಗಳೂರು (ಸೆ.3): ನಾಳೆ ಪೂರ್ವ ವಿಭಾಗದ ಕೆಲ ಸಂಚಾರಿ ಮಾರ್ಗಗಳ ಬದಲಾವಣೆ. ಮದ್ಯಾಹ್ನ 2ರಿಂದ ರಾತ್ರಿ 10ರವರೆಗೂ‌ ಸಂಚಾರ ನಿರ್ಬಂಧ ವಿಧಿಸಲಾದ ರಸ್ತೆಗಳು‌. ನಾಗವಾರ ಜಂಕ್ಷನ್ ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಭಾಗಶಃ ಸಂಚಾರ ನಿರ್ಬಂಧ. ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ. ಥಣಿಸಂದ್ರ ಕಡೆಯಿಂದ ಶಿವಾಜಿನಗರ ಜಂಕ್ಷನ್‌ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ನಾಗವಾರ ಜಂಕ್ಷನ್‌ನಿಂದ ಹೆಣ್ಣೂರು ಜಂಕ್ಷನ್-ಸಿದ್ದಪ್ಪ ರೆಡ್ಡಿ ಜಂಕ್ಷನ್-ಅಯೋಧ್ಯ ಜಂಕ್ಷನ್ ಲಿಂಗರಾಜಪುರಂ. ಐಟಿಸಿ ಫೈ ಓವರ್ ಮೂಲಕ ರಾಬರ್ಟ್‌ನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪುವುದು. ಶಿವಾಜಿನಗರದ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು ಸ್ಪೆನ್ಸರ್ ರಸ್ತೆ. ಕೋಲ್ಸ್ ರಸ್ತೆ,  ವೀಲರ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆಗೆ ಸಂಚರಿಸಲು ಅವಕಾಶ. ಆರ್.ಟಿ. ನಗರದಿಂದ ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳು ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್‌ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ರಸ್ತೆ ಕಡೆಗೆ ಸಂಚರಿಸಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಿರುವ ಸ್ಥಳಗಳು
ಪಾಟರಿ ಸರ್ಕಲ್ ನಿಂದ ನಾಗವಾರ ಸಿಗ್ನಲ್, ಗೋವಿಂದಪುರ ಜಂಕ್ಷನ್ ನಿಂದ ಗೋವಿಂದಪುರ ಪೊಲೀಸ್ ಠಾಣೆಯವರೆಗೆ ಹೆಚ್.ಬಿ.ಆರ್ ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್ ನಿಂದ ನರೇಂದ್ರ ಟೆಂಟ್, ಜಂಕ್ಷನ್‌ ವರೆಗೆ  ರಸ್ತೆಯ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್‌ ನಿರ್ಬಂಧ ವಿಧಿಸಲಾಗಿದೆ.

ಗಣೇಶ ವಿಸರ್ಜನೆಗೆ 458 ಸ್ಥಳ ವ್ಯವಸ್ಥೆ ಮಾಡಿದ ಬಿಬಿಎಂಪಿ

ಪೂರ್ವ ವಿಭಾಗದ ಪೊಲೀಸರಿಂದ ರೂಟ್ ಮಾರ್ಚ್
ನಾಳೆ ಗಣೇಶ ವಿಸರ್ಜನೆ ಹಿನ್ನಲೆ ಪೂರ್ವ ವಿಭಾಗದ ಪೊಲೀಸರಿಂದ ರೂಟ್ ಮಾರ್ಚ್. ಗೋವಿಂದಪುರ, ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೂಟ್ ಮಾರ್ಚ್. ಮುಖ್ಯವಾಗಿ ನಾಗವಾರ ಜಂಕ್ಷನ್‌ನಿಂದ ಕುಂಬಾರ ವೃತ್ತದವರೆಗೆ  ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ರಶಾದ್ ನಗರ, ಉಮರ್ ನಗರ, ಗಿವಿಂದಾಪುರ ಗ್ರಾಮ ಮತ್ತು ನಾಗವಾರ ಗ್ರಾಮ ರೂಟ್ ಮಾರ್ಚ್. ಭೀಮಾಶಂಕರ್ ಗುಳೇದ್ ನೇತೃತ್ವದಲ್ಲಿ ರೂಟ್ ಮಾರ್ಚ್. ರೂಟ್ ಮಾರ್ಚ ನಲ್ಲಿ RAF, KSRP,CAr ಕೂಡ ಭಾಗಿ. 

Ganesh Chaturthi: ಮಾದರಿಯಾಯ್ತು ಬಾಗಲಕೋಟೆಯ ಹಿಂದೂ-ಮುಸ್ಲಿಂ ಭಾವೈಕ್ಯತೆ ಗಣೇಶ

ನಾಳೆ ಗಣೇಶ ವಿಸರ್ಜನೆ ವೇಳೆ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ. ಮುಂಜಾಗೃತ ಕ್ರಮವಾಗಿ ನಾಳೆ 8 ಪೊಲೀಸ್ ಠಾಣಾ ವ್ಯಾಪ್ತಿ ಡ್ರೋಣ್ ಕ್ಯಾಮೆರಾ ಕಣ್ಗಾವಲು. 250 ಪೊಲೀಸ್ ಸಿಬ್ಬಂಧಿಗಳಿಗೆ ಬಾಡಿ ಕ್ಯಾಮೆರಾ ಅಳವಡಿಕೆ. ಮಫ್ತಿಯಲ್ಲಿಯೂ ಕೂಡಾ ಪೊಲೀಸರ ಬಂದೊಬಸ್ತ್

PREV
Read more Articles on
click me!

Recommended Stories

ಎಚ್‌ಡಿಕೆ ಮನುವಾದಿ ಆಗಿದ್ದಾರೆ ಎಂದ ಸಿದ್ದು: ಸಿದ್ದರಾಮಯ್ಯ ಮಜಾವಾದಿ ಎಂದ ಎಚ್‌ಡಿಕೆ
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ