ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಪತ್ತೆ| ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣ| ಅಪರಿಚಿತ ವ್ಯಕ್ತಿಯ ಬಗ್ಗೆ ವೈದ್ಯರು, ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು|
ಗಂಗಾವತಿ(ಮೇ.06): ನಗರದ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವನು ಪತ್ತೆಯಾಗಿದ್ದು, ಗಂಟಲು ದ್ರವ ಪರೀಕ್ಷೆಗೆ ವೈದ್ಯರು ದಾಖಲಿಸಿಕೊಂಡಿದ್ದಾರೆ. ಈ ವ್ಯಕ್ತಿಯ ಆಗಮನದಿಂದ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈತ ಬಸ್ ನಿಲ್ದಾಣದಲ್ಲಿ ಮಲಗಿಕೊಂಡಿರುವುದಕ್ಕೆ ಕೊರೋನಾ ವೈರಸ್ ಶಂಕೆಯ ಅನುಮಾನ ವ್ಯಕ್ತಪಡಿಸಿದ ಬಸ್ ನಿಲ್ದಾಣದ ಸಿಬ್ಬಂದಿಗಳು ಕೂಡಲೇ ವೈದ್ದರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವೈದ್ಯರು, ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದಾಗ ಅ ವ್ಯಕ್ತಿ ಮಂಗಳೂರು ನಗರದವನಾಗಿದ್ದು, ಮಂಜುನಾಥ ಎಂದು ಹೇಳಿದ್ದಾನೆ. ಈ ವ್ಯಕ್ತಿಗೆ 35 ವರ್ಷದವನಾಗಿದ್ದು, ಅನಾರೋಗ್ಯಕ್ಕೆ ಒಳಗಾಗಿದ್ದಾನೆ ಎಂದು ತಿಳಿದು ಬಂದಿದೆ.
ಆರೋಗ್ಯ ತಪಾಸಣೆಗೆ ಮುಗಿಬಿದ್ದ ಬಿದ್ದ ಜನತೆ: ಸಾಮಾಜಿಕ ಅಂತರಕ್ಕೆ ಡೋಂಟ್ ಕೇರ್..!
ಮಂಗಳೂರು, ಧಾರವಾಡ, ಹುಬ್ಬಳ್ಳಿ, ಕುಷ್ಟಗಿ ಮೂಲಕ ಗಂಗಾವತಿ ನಗರಕ್ಕೆ ಆಗಮಿಸಿದ್ದ ಈತ ಇಡಿ ರಾತ್ರಿ ಪೋಲಿಸ್ ಠಾಣೆಯಲ್ಲಿ ಸಮಯ ಕಳೆದಿದ್ದು, ಪೊಲೀಸರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ತಿಳಿದು ಬಂದಿದೆ. ಹಿಗಾಗಿ ಡಾ.ಗುರುರಾಜ್ ಅವರು ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.