ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಗ್ಯಾಂಗ್‌ಸ್ಟರ್ ತಮಿಳುನಾಡಿನಲ್ಲಿ ತಪ್ಪಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದೆ. ಕನ್ಯಾಕುಮಾರಿ ನಿವಾಸಿಗಳಾಗಿರುವ ಈ ಇಬ್ಬರು ಗ್ಯಾಂಗ್‌ಸ್ಟರ್‌ಗಳು ತಮಿಳುನಾಡಿನ ಕಾಲಿಕ್ಕವಿಲೈ ಪೊಲೀಸ್ ಠಾಣೆಯ ಎಎಸ್‌ಐ ವಿಲ್ಸನ್ ಅವರನ್ನು ಮಾರ್ತಾಂಡಂ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಶೂಟೌಟ್ ಮಾಡಿ ಕೊಲೆಗೈದಿದ್ದರು ಎಂದು ಆರೋಪಿಸಲಾಗಿದೆ.
ಮಂಗಳೂರು(ಜ.12): ಉಗ್ರರ ಜೊತೆ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಹಾಗೂ ಬಾಂಬ್ ತಯಾರಿಕೆಯಲ್ಲಿ ಪಳಗಿದ ಹಾಗೂ ಪೊಲೀಸ್ ಹಂತಕರಾದ ಇಬ್ಬರು ಗ್ಯಾಂಗ್‌ಸ್ಟರ್‌ಗಳು ತಮಿಳುನಾಡಿನಿಂದ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ಕೇರಳದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಕರ್ನಾಟಕದ ಮಂಗಳೂರಿನಲ್ಲಿ ಕೂಡಾ ಈ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕನ್ಯಾಕುಮಾರಿ ನಿವಾಸಿಗಳಾಗಿರುವ ಈ ಇಬ್ಬರು ಗ್ಯಾಂಗ್‌ಸ್ಟರ್‌ಗಳು ತಮಿಳುನಾಡಿನ ಕಾಲಿಕ್ಕವಿಲೈ ಪೊಲೀಸ್ ಠಾಣೆಯ ಎಎಸ್‌ಐ ವಿಲ್ಸನ್ ಅವರನ್ನು ಮಾರ್ತಾಂಡಂ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಶೂಟೌಟ್ ಮಾಡಿ ಕೊಲೆಗೈದಿದ್ದರು ಎಂದು ಆರೋಪಿಸಲಾಗಿದೆ.
ಕೋಲಾರ: ನೇಣು ಬಿಗಿದುಕೊಂಡು ನವ ದಂಪತಿ ಆತ್ಮಹತ್ಯೆ.
ಇದೀಗ ತಮಿಳುನಾಡಿನಿಂದ ತಪ್ಪಿಸಿಕೊಂಡ ಅವರು ಕೇರಳ ಅಥವಾ ಕರ್ನಾಟಕ ಪ್ರವೇಶಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮಂಗಳೂರಿನ ಗಡಿ ಭಾಗಗಳಲ್ಲಿ ವಿಶೇಷ ತಪಾಸಣೆ ನಡೆಸಲಾಗುತ್ತಿದ್ದು, ಎಚ್ಚರಿಕೆ ವಹಿಸಲಾಗಿದೆ.
ಕಲ್ಪವೃಕ್ಷದ ಕೆಳಗೆ ಗಾಂಜಾ ಬೆಳೆ: ರೈತ ಅರೆಸ್ಟ್