ಬೆಳಗಾವಿ: ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆ!

Suvarna News   | Asianet News
Published : Dec 25, 2019, 08:13 AM ISTUpdated : Dec 25, 2019, 10:22 AM IST
ಬೆಳಗಾವಿ: ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆ!

ಸಾರಾಂಶ

ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆ| ನಗರದ ಎಸ್‌ಪಿಎಂ ರಸ್ತೆಯಲ್ಲಿ ನಡೆದ ಘಟನೆ| ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್|    

ಬೆಳಗಾವಿ[ಡಿ.25]: ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆಯಾದ ಘಟನೆ ನಗರದ ಎಸ್‌ಪಿಎಂ ರಸ್ತೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. 

"

ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆ ಆಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸುಮಾರು ಅರ್ಧಗಂಟೆ ಕಾಲ ಅನಿಲ ಸೋರಿಕೆಯಾಗಿತ್ತು. ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ತಕ್ಷಣ ಸ್ಥಳಕ್ಕೆ ಆಗಮಿಸಿ ಸಿಬ್ಬಂದಿ ಗ್ಯಾಸ್ ಪೈಪ್‌ಲೈನ್ ದುರಸ್ತಿ ಮಾಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈ ಸ್ಥಳದಲ್ಲಿ ಎಂಟು ದಿನಗಳ ಹಿಂದೆಯಷ್ಟೇ ಗ್ಯಾಸ್ ಪೈಪ್‌ಲೈನ್ ಅಳವಡಿಕೆ ಮಾಡಲಾಗಿತ್ತು. ಸಿಸಿ ರಸ್ತೆ ಕಾಮಗಾರಿಗೂ ಮುನ್ನ ಗ್ಯಾಸ್ ಪೈಪ್‌ಲೈನ್ ಅಳವಡಿಸಲಾಗಿತ್ತು.  ಸ್ಮಾರ್ಟ್ ಸಿಟಿ ಯೋಜನೆಯಡಿ ಸಿಸಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಗ್ಯಾಸ್ ಪೈಪ್‌ಲೈನ್ ಅಳವಡಿಸಿದ ಕೇವಲ ಒಂದೇ ವಾರದಲ್ಲೇ ಗ್ಯಾಸ್ ಪೈಪ್‌ಲೈನ್‌ಗೆ ಹಾನಿಯಾಗಿದೆ. 

ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಸ್ಥಳೀಯರು ಇನ್ನಷ್ಟು ಭೂಮಿ ಆಳದಲ್ಲಿ‌ ಗ್ಯಾಸ್ ಪೈಪ್‌ಲೈನ್‌ ಅಳವಡಿಸಬೇಕು ಎಂದು ಒತ್ತಾಯಿಸಿದ್ದಾರೆ. 

PREV
click me!

Recommended Stories

ಅಪರೂಪದ ಕೋತಿ ಪ್ರಭೇದ ಬ್ಯಾಗ್‌ನಲ್ಲಿಟ್ಟು ವಿದೇಶದಿಂದ ಅಕ್ರಮ ಸಾಗಾಟ, ಬೆಂಗಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ!
Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!