ರಸ್ತೆಗೆ ಉರುಳಿದ ಗ್ಯಾಸ್‌ ಟ್ಯಾಂಕರ್‌: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

Suvarna News   | Asianet News
Published : Mar 28, 2020, 12:49 PM IST
ರಸ್ತೆಗೆ ಉರುಳಿದ ಗ್ಯಾಸ್‌ ಟ್ಯಾಂಕರ್‌: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಸಾರಾಂಶ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗ್ಯಾಸ್‌ ಟ್ಯಾಂಕರ್| ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿ ನಡೆದ ಘಟನೆ| ಗ್ಯಾಸ್ ಟ್ಯಾಂಕರ್ ಹೆದ್ದಾರಿಗೆ ಅಡ್ಡ ಬಿದ್ದಿದ್ದರಿಂದ ಗ್ಯಾಸ್ ಸೋರಿಕೆ|

ಉಪ್ಪಿನಂಗಡಿ(ಮಾ.28): ಗ್ಯಾಸ್ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿ ಇಂದು(ಶನಿವಾರ) ಬೆಳಗ್ಗೆ ನಡೆದಿದೆ. 

ಗ್ಯಾಸ್ ಟ್ಯಾಂಕರ್ ಹೆದ್ದಾರಿಗೆ ಅಡ್ಡ ಬಿದ್ದಿದ್ದರಿಂದ ಗ್ಯಾಸ್ ಸೋರಿಕೆ ಉಂಟಾಗಿದ್ದು, ಉಪ್ಪಿನಂಗಡಿಯಲ್ಲಿದ್ದ HPCL ಕಂಪೆನಿಯ ತುರ್ತು ಪರಿಸ್ಥಿತಿ ವಾಹನದವರು ಸ್ಥಳಕ್ಕೆ ಆಗಮಿಸಿ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲು ವ್ಯವಸ್ಥೆ ಮಾಡುತ್ತಿದ್ದಾರೆ‌. 

ಕೊರೋನಾ ಭೀತಿ: ಬೆಂಗ್ಳೂರು ಬಿಟ್ಟು ಹಳ್ಳಿಕಡೆ ಹೊರಟವರು ಮಸಣ ಸೇರಿದ್ರು...!

ಬಂದ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಬರುತ್ತಿಲ್ಲವಾದರೂ, ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. 
 

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ