ಕಲಾಸಿಪಾಳ್ಯ ಬಸ್‌ ನಿಲ್ದಾಣದಲ್ಲಿ ಜಿಲೆಟಿನ್ ರಾಡ್‌, ಡಿಟೋನೇಟರ್ ಪತ್ತೆ, ಬೆಂಗಳೂರು ಸ್ಪೋಟಕ್ಕೆ ಮತ್ತೆ ಸಂಚು?

Published : Jul 23, 2025, 04:34 PM ISTUpdated : Jul 23, 2025, 05:23 PM IST
Gelatin sticks found at Bengaluru bus stand

ಸಾರಾಂಶ

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಶಂಕಾಸ್ಪದ ವಸ್ತುಗಳು ಪತ್ತೆಯಾಗಿವೆ. 6 ಜಿಲೆಟಿನ್ ರಾಡ್‌ಗಳು ಮತ್ತು ಒಂದು ಡಿಟೋನೇಟರ್ ಪತ್ತೆಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಮತ್ತು ATS ತಂಡ ತನಿಖೆ ಆರಂಭಿಸಿದೆ.

ಬೆಂಗಳೂರು: ಸಿಲಿಕಾನ್‌ ಸಿಟಿಯ ಹೃದಯಭಾಗದಲ್ಲಿರುವ ಕಲಾಸಿಪಾಳ್ಯ (Kalasipalya) ಬಸ್ ನಿಲ್ದಾಣದಲ್ಲಿ ಬುಧವಾರ ಅತೀವ ಆತಂಕ ಸೃಷ್ಟಿಸಿದ ಘಟನೆಯೊಂದರಲ್ಲಿ, ಶಂಕಾಸ್ಪದ ಸ್ಪೋಟಕ (explosive) ವಸ್ತುಗಳು ಪತ್ತೆಯಾಗಿವೆ.  ಕಲಾಸಿಪಾಳ್ಯದ ಖಾಸಗಿ ಬಸ್ ನಿಲ್ದಾಣದ ಶೌಚಾಲಯದ ಹೊರಭಾಗದಲ್ಲಿ ಶಂಕಿತ ಬ್ಯಾಗ್‌ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಘಟನೆ ಭಯ ಹುಟ್ಟಿಸಿದೆ. ಶೌಚಾಲಯದ ಬಳಿ ಬಿಟ್ಟಿರುವ ಪ್ಲಾಸ್ಟಿಕ್ ಬ್ಯಾಗ್‌ ಪರಿಶೀಲನೆ ನಡೆಸಿದಾಗ ಆನರಲ್ಲಿ 6 ಜಿಲೆಟಿನ್ ಕಡ್ಡಿಗಳು ಮತ್ತು ಇನ್ನೊಂದು ಸ್ಥಳದಲ್ಲಿ ಡಿಟೋನೇಟರ್‌ಗಳು ಪತ್ತೆಯಾಗಿದೆ. 

ಈ ಸ್ಫೋಟಕ ಪತ್ತೆಯಾದ ಬೆನ್ನಲ್ಲೇ ಸ್ಥಳದಲ್ಲಿದ್ದ ಜನರಲ್ಲಿ ಆತಂಕವನ್ನು ಉಂಟುಮಾಡಿತು. ವಿಷ್ಯ ತಿಳಿದ ಕಲಾಸಿಪಾಳ್ಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಹೆಚ್ಚಿನ ತನಿಖೆಗಾಗಿ ಆಂಟಿ ಟೆರರಿಸ್ಟ್ ಸ್ಕ್ವಾಡ್ (ATS) ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಸುತ್ತಮುತ್ತಲ ವಸ್ತುಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆಯ ಮಾಹಿತಿ ತಿಳಿದ ನಂತರ, ಕಲಾಸಿಪಾಳ್ಯ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ ನಿಲ್ದಾಣದ ಎಲ್ಲ ಮೂಲೆ ಮೂಲೆಗಳನ್ನೂ ತಪಾಸಣೆ ಮಾಡುತ್ತಿದ್ದಾರೆ. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಕೂಡ ಸ್ಥಳಕ್ಕೆ ಆಗಮಿಸಿ, ಸ್ಪೋಟಕಗಳನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಿದ್ದಾರೆ. ಬಿಎಂಟಿಸಿ ಬಸ್ ನಿಲ್ದಾಣದಲ್ಲೂ ಭದ್ರತಾ ಕ್ರಮವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ.

ಈ ಬಗ್ಗೆ ಕಲಾಸಿಪಾಳ್ಯ ಪೊಲೀಸರು ಎಫ್‌ಐಆರ್ ದಾಖಲಿಸಿ, ಮುಂದಿನ ತನಿಖೆಯನ್ನು ಆರಂಭಿಸಿದ್ದಾರೆ. ಶಂಕಿತ ಸ್ಪೋಟಕಗಳು ಎಲ್ಲಿ ಇಡಲಾಯಿತು, ಯಾರು ಇಟ್ಟಿದ್ದರು ಎಂಬ ಬಗ್ಗೆ ಶೀಘ್ರವೇ ಮಾಹಿತಿ ಬಹಿರಂಗಗೊಳ್ಳುವ ನಿರೀಕ್ಷೆ ಇದೆ. ಪತ್ತೆಯಾದ ವಸ್ತುಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ, ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ವಿಸ್ತೃತ ತನಿಖೆ ಆರಂಭಿಸಲಾಗಿದೆ. 

 

 

PREV
Read more Articles on
click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?