‘ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಿರಿ’; ಡಿ.ಕೆ.ಶಿವಕುಮಾರ್‌

By Kannadaprabha News  |  First Published Mar 27, 2023, 8:01 AM IST

ರಾಜ್ಯದಲ್ಲಿರುವ ಭ್ರಷ್ಟಸರ್ಕಾರವನ್ನು ಕಿತ್ತೊಗೆಯಬೇಕು, ಉತ್ತಮ ಆಡಳಿತ ನೀಡಲು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದರೆ ಹೆಣ್ಣುಮಕ್ಕಳಿಗೆ 2000 ರು. ಸಹಾಯಧನ ಉಚಿತ, 10 ಕೆಜಿ ಅಕ್ಕಿ ಖಚಿತ, 200 ವ್ಯಾಟ್‌ ವಿದ್ಯುತ್‌ ನಿಶ್ಚಿತ, ನಿರುದ್ಯೋಗಿಗಳಿಗೆ 3000 ರು. ಖಂಡಿತ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.


  ಶಿರಾ :  ರಾಜ್ಯದಲ್ಲಿರುವ ಭ್ರಷ್ಟಸರ್ಕಾರವನ್ನು ಕಿತ್ತೊಗೆಯಬೇಕು, ಉತ್ತಮ ಆಡಳಿತ ನೀಡಲು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದರೆ ಹೆಣ್ಣುಮಕ್ಕಳಿಗೆ 2000 ರು. ಸಹಾಯಧನ ಉಚಿತ, 10 ಕೆಜಿ ಅಕ್ಕಿ ಖಚಿತ, 200 ವ್ಯಾಟ್‌ ವಿದ್ಯುತ್‌ ನಿಶ್ಚಿತ, ನಿರುದ್ಯೋಗಿಗಳಿಗೆ 3000 ರು. ಖಂಡಿತ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ತಾಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಹಳ ವರ್ಷಗಳಿಂದ ಕಾಂಗ್ರೆಸ್‌ ಪಕ್ಷ ಗೆದ್ದಿಲ್ಲ. ಈ ಬಾರಿ ಮತದಾರರು ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್‌ ಪಕ್ಷ ಒಳ್ಳೆಯ ಗ್ಯಾರಂಟಿ ಕಾರ್ಡುಗಳನ್ನು ಕೊಟ್ಟಿದೆ ಉತ್ತಮ ಆಡಳಿತ ನೀಡಿದ್ದೇವೆ ಎಂದ ಅವರು ಬಹಳ ದಿನಗಳಿಂದ ಕಿರಣ್‌ ಕುಮಾರ್‌ ಅವರಿಗೆ ಗಾಳ ಹಾಕುತ್ತಿದ್ದೆವು. ಈಗ ನಮ್ಮ ಗಾಳಕ್ಕೆ ಬಿದ್ದಿದ್ದಾರೆ. ಟಿಕೆಟ್‌ ಸಹ ನೀಡಿದ್ದೇವೆ ಗೆಲ್ಲಿಸುವ ಜವಾಬ್ದಾರಿ ನಿಮ್ಮದು. ಕಾಂಗ್ರೆಸ್‌ ಪಕ್ಷ ನೀಡಿರುವ ಗ್ಯಾರಂಟಿ ಕಾರ್ಡ್‌ಗಳ ಬಗ್ಗೆ ಜನರಿಗೆ ತಲುಪಿಸಿದರೆ ಗೆಲುವು ನಿಶ್ಚಿತ ಎಂದರು.

Tap to resize

Latest Videos

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಸ್‌.ಕಿರಣ್‌ಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಿಕ್ಕಣ್ಣ, ಮುಖಂಡರಾದ ಬಸವರಾಜು, ಡಾ.ಪರಮೇಶ್ವರಯ್ಯ, ಹೊಸಪಾಳ್ಯ ಲಿಂಗಪ್ಪ, ಪುಟ್ಟರಾಜು, ಸಿದ್ದಲಿಂಗಪ್ಪ, ಜಯಪ್ರಕಾಶ್‌, ಕರ್ನಾಟಕ ರಾಜ್ಯ ಬೀಜ ನಿಗಮದ ಮಾಜಿ ನಿರ್ದೇಶಕರು ನೇರಲಗುಡ್ಡ ಶಿವಕುಮಾರ್‌, ವಡ್ಡನಹಳ್ಳಿ ವಿಜಯಕುಮಾರ್‌, ಬುಕ್ಕಾಪಟ್ಟಣ ಪ್ರಭಾಕರ್‌, ಬೆಂಚೆ ಮಂಜು ಸೇರಿದಂತೆ ಹಲವರು ಹಾಜರಿದ್ದರು.

ನಮ್ಮದು ತಂದೆ ಮಗನ ಜಗಳ

ಬೆಂಗಳೂರು (ಮಾ.22): ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಾಬುರಾವ್‌ ಚಿಂಚನಸುರು ಅವರು ಮೊದಲ ಬಾರಿಗೆ ಬಹಿರಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ,.ಕೆ. ಶಿವಕುಮಾರ್‌ ಅವರ ಮನೆಯಲ್ಲಿ ಪ್ರತ್ಯಕ್ಷವಾಗಿ ಚರ್ಚೆ ನಡೆದಿದ್ದಾರೆ. ಈ ವೇಳೆ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಗೊಂಡ ಅವರು ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತೊಡೆ ತಟ್ಟೊರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಮುಂದುವರೆದು ನಮ್ಮದು ಮತ್ತು ಖರ್ಗೆ ಅವರದು ತಂದೆ- ಮಗನ ನಡುವಿನ ಜಗಳದಂತೆ ಎಂದು ಚಿಂಚನಸೂರ ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್‌ ಮನೆಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖರ್ಗೆ ಬೆಳೆದಿದ್ದಾರೆ. ಅವರು ದೇಶದಲ್ಲಿ ಹೆಸರು ಮಾಡಿದ್ದಾರೆ. ಅವರನ್ನು ಹಿನ್ನಡೆ ಮಾಡಲು ಬಿಜೆಪಿ ಪ್ರಯತ್ನ ಮಾಡಿದ್ದರು. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯಲಿದೆ ಎಂಬ ಅಭಿಪ್ರಾಯವನ್ನು ತಿಳಿಸಿದರು.

ಖರ್ಗೆ ಕುಟುಂಬ ಸೋಲಿಸೋದಾಗಿ ತೊಡೆ ತಟ್ಟಿದ್ದ ಚಿಂಚನಸೂರು ಮತ್ತೆ ಕಾಂಗ್ರೆಸ್ ಕದ ತಟ್ಟಿದ್ರಾ?!

ಖರ್ಗೆ ಅವರೊಂದಿಗೆ ಭಿನ್ನಾಭಿಪ್ರಾಯ ಇದ್ದುದು ನಿಜ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಇದ್ದ ಭಿನ್ನಾಭಿಪ್ರಾಯ ಇದ್ದುದು ನಿಜ. ನಮ್ಮದು ಮತ್ತು ಖರ್ಗೆ ನಡುವೆ ತಂದೆ ಮಗನ ಜಗಳವಾಗಿದೆ. ತಂದೆ ಮಕ್ಕಳ ಭಿನ್ನಾಭಿಪ್ರಾಯ ಈಗ ಮುಗಿದ ಅಧ್ಯಾಯವಾಗಿದೆ. ಖರ್ಗೆಯವರು ತಂದೆ ಸಮಾನರು. ಹಿಂದೆ ನಾನು ಮಲ್ಲಿಕಾರ್ಜುನ ಖರ್ಗೆ ವಿಚಾರದಲ್ಲಿ ತೊಡೆ ತಟ್ಟಿದ ವಿಚಾರವನ್ನೆಲ್ಲ ಮುನ್ನೆಲೆಗೆ ತರುವ ಅಗತ್ಯವಿಲ್ಲ, ಅದೆಲ್ಲಾ ಮುಗಿದ ಅಧ್ಯಾಯ. ಇನ್ನು ಮಕ್ಕಳು ಮನೆಯಲ್ಲಿ ಜಗಳ ಮಾಡಿ‌ಕೊಂಡು ಹೋದರೆ, ವಾಪಸ್‌ ಮೆನೆಗೆ ಬರೋದೆ ಇಲ್ವಾ.? ಮಾತು ಬೆಳ್ಳಿ - ಮೌನ ಬಂಗಾರ ಎಂದು ಹೇಳುತ್ತಾರೆ. ಆದ್ದರಿಂದ ಮಲ್ಲಿಕಾರ್ಜುನ ಖರ್ಗೆ ಅವರು ಏನೂ ಹೇಳಿಲ್ಲ ಎಂದು ತಿಳಿಸಿದರು.

ನಮ್ಮ ನಾಯಕರಾಗಿ ಚಿಂಚನಸೂರು ಮುಂದುವರಿಕೆ: ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಾತನಾಡಿ, ರಾಜ್ಯದಲ್ಲಿ ನಾವು ನುಡಿದಂತೆ ನಡೆಯುವ ಭರವಸೆಯನ್ನು ರಾಜ್ಯದ ಜನತೆಗೆ ಕೊಟ್ಟಿದ್ದೇವೆ. ನಮ್ಮ ಕಾರ್ಯಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ ಲಭ್ಯವಾಗುತ್ತಿದೆ. ಈಗಾಘಲೇ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ. ಈಗ ಮತ್ತೊರ್ವ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಸೇರಿದ್ದಾರೆ ಎಂದು ಮಾಹಿತಿ ನೀಡಿದರು.

click me!