ಸುಳ್ಳು ಭರವಸೆಗಳ ಸರ್ಕಾರವನ್ನು ಕಿತ್ತೊಗೆಯಿರಿ : ಕೆ. ಮರೀಗೌಡ ಕರೆ

By Kannadaprabha News  |  First Published Apr 1, 2023, 6:30 AM IST

ರಾಜ್ಯವನ್ನು ಲೂಟಿ ಮಾಡುತ್ತಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ ಕರೆ ನೀಡಿದರು.


  ಮೈಸೂರು: ರಾಜ್ಯವನ್ನು ಲೂಟಿ ಮಾಡುತ್ತಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ ಕರೆ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದ ಉದ್ಬೂರು ಗ್ರಾಮದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಅನ್ನು ಪ್ರತಿ ಮನೆಗೆ ತಲುಪಿಸಿ ಸಿದ್ದೇಗೌಡರು ಗೆಲ್ಲಲು ಎಲ್ಲರೂ ಶ್ರಮಿಸಬೇಕೆಂದು ಮನವಿ ಮಾಡಿದರು.

Latest Videos

undefined

ಚಾಮುಮಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿ ಎಸ್‌. ಸಿದ್ದೇಗೌಡ ಮಾತನಾಡಿ, ನಾನು 1983 ರಿಂದ 2013 ರವರೆಗೆ ಸಿದ್ದರಾಮಯ್ಯ ಅವರೊಂದಿಗೆ ಇದ್ದು ಕೆಲಸ ಮಾಡಿದ್ದೇನೆ. ನನ್ನನ್ನು ನಿಮ್ಮ ಮನೆಯ ಮಗನೆಂದು ತಿಳಿದು ಆಶೀರ್ವದಿಸಬೇಕೆಂದು ಮನವಿ ಮಾಡಿದರು.

ಗ್ರಾಪಂ ಅಧ್ಯಕ್ಷ ಕೃಷ್ಣನಾಯಕ, ಜಿಪಂ ಮಾಜಿ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಮಾದೇಗೌಡ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್‌ ಸಾಗರ್‌, ಬ್ಲಾಕ್‌ ಕ್ರಾಂಗ್ರೆಸ್‌ ಅಧ್ಯಕ್ಷ ಬಿ. ಗುರುಸ್ವಾಮಿ, ಕೆಂಪನಾಯ್ಕ, ದಾಸಪ್ಪ, ಗ್ರಾಪಂ ಸದಸ್ಯರಾದ ಸುಂದರ್‌, ಪರಶಿವ, ರುದ್ರ, ಕುಮಾರ್‌, ಗೋವಿಂದ, ರವಿಚಂದ್ರ, ಸೋಮಣ್ಣ, ಮಂಜು, ಯೋಗೇಂದ್ರ, ಶಂಕರ್‌, ರವೀಂದ್ರ, ವೆಂಕಟೇಶ್‌, ಸಿದ್ದರಾಜು, ಮಹಾದೇವ ಇದ್ದರು.

ಕ್ಷೇತ್ರದ ವಿಚಾರ ಹೈ ಕಮಾಂಡ್‌ಗೆ ಬಿಟ್ಟಿದ್ದು

ಮೈಸೂರು (ಏ.01): ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದು ಹೈಕಮಾಂಡ್‌ಗೆ ಬಿಟ್ಟನಿರ್ಧಾರ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು. ನಾನು ಚುನಾವಣೆಯಲ್ಲಿ ನಿಲ್ಲಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್‌ ತೀರ್ಮಾನಿಸುತ್ತದೆ. ರಾಜ್ಯದ 224 ಕ್ಷೇತ್ರಗಳಲ್ಲೂ ಚುನಾವಣ ಪ್ರಕ್ರಿಯೆ ನಡೆಯುತ್ತಿದೆ. ವರುಣ ಕ್ಷೇತ್ರದ ಬಗ್ಗೆ ಹೆಚ್ಚ ಚರ್ಚೆಯಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವ ಬಗ್ಗೆ ಘೋಷಿಸಿದ್ದಾರೆ ಎಂದರು. ಶಿಕಾರಿಪುರ ತಾಲೂಕಿನ ಜನತೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ರಾಜ್ಯ ಮಾತ್ರವಲ್ಲ ದೇಶಕ್ಕೆ ಪರಿಚಯಿಸಿದರು. 

ಅದೇ ರೀತಿ ವರುಣ ಕ್ಷೇತ್ರದ ಪಕ್ಷದ ಕಾರ್ಯಕರ್ತರು, ಮತದಾರರು ನನ್ನನ್ನು ರಾಜ್ಯಾದ್ಯಂತ ಪರಿಚಯಿಸಿದ್ದಾರೆ. ನನ್ನ ಮೇಲೆ ಪ್ರೀತಿ ತೋರಿಸಿದ್ದಾರೆ. ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಸಾಧ್ಯವೇ ಎಂಬ ಪ್ರಶ್ನೆಗೆ, ಯಾವುದು ಕೂಡ ಅಸಾಧ್ಯವಲ್ಲ. ಕೆ.ಆರ್‌.ಪೇಟೆಯಲ್ಲಿ ಗೆಲ್ಲುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಅದೇ ರೀತಿ ಶಿರಾ ಉಪ ಚುನಾವಣೆಯಲ್ಲೂ ಮತದಾರರು ಬಿಜೆಪಿ ಕೈ ಹಿಡಿದರು ಎಂದರು. ವರುಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ಗೆಲ್ಲುವ ಅವಕಾಶ ಇದೆ. ವಿಜಯೇಂದ್ರ ಅಪ್ರಸ್ತುತ. ಬಿಜೆಪಿ ಗೆಲ್ಲುವುದು ನಮ್ಮ ಗುರಿ. ವರುಣ ಜನರ ಋುಣವನ್ನು ಯಾವ ರೀತಿ ತೀರಿಸಲಾಗುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. 

ದಾವಣಗೆರೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಆಧರಿಸಿ, ಟಿಕೆಟ್‌ ಹಂಚಿಕೆ: ಶೋಭಾ ಕರಂದ್ಲಾಜೆ

ವರುಣ ಮಾತ್ರವಲ್ಲ ರಾಜ್ಯದ 224 ಕ್ಷೇತ್ರಗಳ ಎಲ್ಲರ ಬಗ್ಗೆಯೂ ಉತ್ಸಾಹ ಇದೆ. ಮತ್ತೊಮ್ಮೆ ಬಿಜೆಪಿ ಸ್ಪಷ್ಟಬಹುಮತದೊಂದಿಗೆ ಅಧಿಕಾರ ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ಒಂದು ಕಡೆ ಟಿಕೆಟ್‌ ಅಂತಿಮವಾಗಿಲ್ಲ. ಎರಡು ಕಡೆ ಸ್ಪರ್ಧೆಯ ಪ್ರಶ್ನೆಯೇ ಇಲ್ಲ. ಶಿಕಾರಿಪುರ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಒಂದು ಬಾರಿ ಭೇಟಿ ನೀಡಿದ್ದೇನೆ. ಏ. 3 ರಿಂದ ಮತ್ತೊಮ್ಮೆ ಪ್ರಚಾರ ಆರಂಭಿಸುತ್ತಿದ್ದೇನೆ ಎಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!