ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

Suvarna News   | Asianet News
Published : Feb 03, 2020, 03:12 PM IST
ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಸಾರಾಂಶ

ವಸತಿ ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ| ಬೀದರ್‌ ನಗರದಲ್ಲಿ ನಡೆದ ಘಟನೆ| ಸುಪ್ರಿಯಾ(15) ಆತ್ಮಹತ್ಯೆಗೆ ಶರಣಾದ ಬಾಲಕಿ| ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಪೋಷಕರ ಆರೋಪ| 

ಬೀದರ್(ಫೆ.03): ವಿದ್ಯಾರ್ಥಿನಿಯೊಬ್ಬಳು ವಸತಿ ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. ಸುಪ್ರಿಯಾ(15) ಆತ್ಮಹತ್ಯೆಗೆ ಶರಣಾದ ಬಾಲಕಿಯಾಗಿದ್ದಾಳೆ.

ಸುಪ್ರಿಯಾ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಮೃತ ಸುಪ್ರಿಯಾ ಬೀದರ್ ತಾಲೂಕಿನ ಕೊಳಾರ ಗ್ರಾಮದವಳಾಗಿದ್ದಾಳೆ. ಶ್ರಮಜೀವಿ ವಸತಿ ಶಾಲೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾಳೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗ್ಲೋಬಲ್ ಮಲ್ಟಿ ಡೆವಲಪ್ಮೆಂಟ್ ಟ್ರಸ್ಟ್ ಅಡಿ ಶ್ರಮಜೀವಿ ಶಾಲೆ ನಡೆಯುತ್ತಿದೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಮಾಡಲಾಗಿದೆ ಎಂದು ಮೃತ ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ನ್ಯೂ ಟೌನ್ ಪೊಲೀಸರು  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

PREV
click me!

Recommended Stories

ಸಿದ್ದರಾಮಯ್ಯ ಹೆಲಿಕಾಪ್ಟರ್‌ ಪ್ರಯಾಣಕ್ಕೆ ರಾಜ್ಯದ ಬೊಕ್ಕಸದಿಂದ ಕೋಟ್ಯಂತರ ಖರ್ಚು!
ಬಸವತತ್ವ ಪ್ರಚಾರಕ, ವಚನ ಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀಗಳು ಲಿಂಗೈಕ್ಯ