ಪರೀಕ್ಷೆಯಲ್ಲಿ ಕಡಿಮೆ ಅಂಕ: ವಿದ್ಯಾರ್ಥಿನಿ ಆತ್ಮಹತ್ಯೆ

Suvarna News   | Asianet News
Published : Mar 14, 2020, 03:16 PM IST
ಪರೀಕ್ಷೆಯಲ್ಲಿ ಕಡಿಮೆ ಅಂಕ: ವಿದ್ಯಾರ್ಥಿನಿ ಆತ್ಮಹತ್ಯೆ

ಸಾರಾಂಶ

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಬಂಟ್ವಾಳದಲ್ಲಿ ನಡೆದಿದೆ.    

ಮಂಗಳೂರು(ಮಾ.04): ಸೆಮಿಸ್ಟರ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಬಂಟ್ವಾಳದಲ್ಲಿ ನಡೆದಿದೆ.  

ಪರೀಕ್ಷೆಯಲ್ಲಿ ಗಳಿಸಿದ ಅಂಕ ಕಡಿಮೆಯಾಯಿತು ಎಂದು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿ ಮೇಲಿನ ಏರಿಯಾ ಎಂಬಲ್ಲಿ ನಡೆದಿದೆ. ಸಹ್ಯಾದ್ರಿ ಕಾಲೇಜಿನ ಪ್ರಥಮ ಎಂ.ಬಿ.ಎ. ವಿದ್ಯಾರ್ಥಿನಿ ರಕ್ಷಿತಾ( 23) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಎಣ್ಣೆ ಏಟು... ಸ್ನೇಹಿತನನ್ನೇ ಕೊಂದು ಶವದೊಂದಿಗೆ ಸಂಭೋಗ ನಡೆಸಿದ್ದ ವಿಕೃತಕಾಮಿಗಳು!

ಅಮ್ಟಾಡಿ ನಿವಾಸಿ ಯಾದವ ಎಂಬವರ ಮಗಳು ರಕ್ಷಿತಾ ಪ್ರಥಮ ಸೆಮಿಸ್ಟರ್ ನಲ್ಲಿ ಅಂಕ ಕಡಿಮೆಯಾಗಿದೆ ಎಂಬ ಕಾರಣಕ್ಕಾಗಿ ಮನೆಯ ಅಡುಗೆ ಕೋಣೆಯಲ್ಲಿ ಚೂಡಿದಾರ್‌ ಶಾಲು ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ. ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

PREV
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ