ಕೊಬ್ಬರಿಗೆ ಬೆಂಬಲ ಬೆಲೆ ನೀಡಿ: ಕಾಂಗ್ರೆಸ್‌ ಮುಖಂಡರ ಒತ್ತಾಯ

By Kannadaprabha News  |  First Published Jun 12, 2023, 6:06 AM IST

: ಕಲ್ಪತರು ನಾಡಿನ ರೈತರ ಪ್ರಮುಖ ಜೀವನಾಧಾರ ವಾಣಿಜ್ಯ ಬೆಳೆಯಾದ ಕೊಬ್ಬರಿ ಬೆಲೆÜ ತೀವ್ರ ಕುಸಿತವಾಗಿದ್ದು ತೆಂಗು ಬೆಳೆಗಾರರು ಆತಂಕದ ಜೀವನ ನಡೆಸುತ್ತಿರುವುದರಿಂದ ಕೇಂದ್ರ ಸರ್ಕಾರ ಕೂಡಲೇ ಹಾಲಿ ಇರುವ 11750 ರು. ಬೆಂಬಲ ಬೆಲೆಯನ್ನು 15 ರು. ಸಾವಿರಕ್ಕಾದರೂ ಏರಿಸುವ ಮೂಲಕ ತೆಂಗು ಬೆಳೆಗಾರರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕೆಂದು ಕಾಂಗ್ರೆಸ್‌ ಮುಖಂಡರಾದ ಲೋಕೇಶ್ವರ ಒತ್ತಾಯ ಮಾಡಿದ್ದಾರೆ.


ತಿಪಟೂರು: ಕಲ್ಪತರು ನಾಡಿನ ರೈತರ ಪ್ರಮುಖ ಜೀವನಾಧಾರ ವಾಣಿಜ್ಯ ಬೆಳೆಯಾದ ಕೊಬ್ಬರಿ ಬೆಲೆÜ ತೀವ್ರ ಕುಸಿತವಾಗಿದ್ದು ತೆಂಗು ಬೆಳೆಗಾರರು ಆತಂಕದ ಜೀವನ ನಡೆಸುತ್ತಿರುವುದರಿಂದ ಕೇಂದ್ರ ಸರ್ಕಾರ ಕೂಡಲೇ ಹಾಲಿ ಇರುವ 11750 ರು. ಬೆಂಬಲ ಬೆಲೆಯನ್ನು 15 ರು. ಸಾವಿರಕ್ಕಾದರೂ ಏರಿಸುವ ಮೂಲಕ ತೆಂಗು ಬೆಳೆಗಾರರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕೆಂದು ಕಾಂಗ್ರೆಸ್‌ ಮುಖಂಡರಾದ ಲೋಕೇಶ್ವರ ಒತ್ತಾಯ ಮಾಡಿದ್ದಾರೆ.

ಕಳೆದ ವರ್ಷ ಒಂದು ಕ್ವಿಂಟಲ್‌ ಕೊಬ್ಬರಿ ಬೆಲೆ 18 ರು. ಸಾವಿರದ ತನಕ ಇದ್ದು ಇತ್ತೀಚಿನ 5-6 ತಿಂಗಳುಗಳಿಂದ ಗಣನೀಯವಾಗಿ ಇಳಿಕೆಯಾಗುವ ಮೂಲಕ ಹಾಲಿ 8500 ರು. ಗೆ ಕುಸಿದಿದ್ದು ತೆಂಗು ಬೆಳೆಗಾರರಿಗೆ ದೊಡ್ಡಮಟ್ಟದ ನಷ್ಟಉಂಟಾಗುತ್ತಿದೆ. ಬೆಲೆ ತೀವ್ರ ಕುಸಿತವಾಗಿರುವುದರಿಂದ ದಿನನಿತ್ಯದ ಜೀವನ ನಡೆಸುವುದು ಕಷ್ಟಕರವಾಗಿದೆ. ಕಳೆದ 4-5 ದಿನಗಳ ಹಿಂದೆ ಕೇಂದ್ರ ಸರ್ಕಾರ ರಾಗಿ ಸೇರಿದಂತೆ 10ಕ್ಕೂ ಹೆಚ್ಚು ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ಹೆಚ್ಚಳ ಮಾಡಿದ್ದು ಸ್ವಾಗತವಾಗಿದ್ದು, ಕೊಬ್ಬರಿ ಬೆಂಬಲ ಬೆಲೆ ಮಾತ್ರ ಹೆಚ್ಚಿಸಿಲ್ಲದಿರುವುದು ತುಂಬಾ ನೋವಿನ ಸಂಗತಿಯಾಗಿದೆ. ಕಲ್ಪತರು ನಾಡು ತಿಪಟೂರಿನ ಕೊಬ್ಬರಿಗೆ ದೇಶಾದ್ಯಂತ ಬೇಡಿಕೆ ಇದ್ದು, ಈ ಭಾಗದ ಕೊಬ್ಬರಿಯು ರುಚಿ ಮತ್ತು ಗುಣಮಟ್ಟದಲ್ಲಿ ಅತ್ಯುತ್ತಮ ದರ್ಜೆಯಾಗಿದ್ದು ಕೊಬ್ಬರಿ ಬೆಲೆ ಪ್ರಸ್ತುತ 8500 ರು.ಕ್ಕೆ ಕುಸಿದಿರುವುದು ತೆಂಗು ಬೆಳೆಗಾರರಲ್ಲಿ ಆಘಾತವುಂಟುಮಾಡಿದೆ. 1 ಕ್ವಿಂಟಲ್‌ ಕೊಬ್ಬರಿ ಬೆಳೆಯಲು 15 ಸಾವಿರಕ್ಕೂ ಹೆಚ್ಚು ಖರ್ಚು ಬರುತ್ತಿದ್ದು, ಬೆಳೆಗಾರರಿಗೆ ಕನಿಷ್ಠವೆಂದರೂ 15 ಸಾವಿರವಾದರೂ ಬೆಂಬಲ ಬೆಲೆ ಸಿಕ್ಕರೆ ಮಾತ್ರ ತುಸು ವೈಜ್ಞಾನಿಕ ಬೆಲೆ ಸಿಕ್ಕಿದಂತಾಗುತ್ತದೆ. ಆದರೆ ಸದ್ಯದ ಮಾರುಕಟ್ಟೆಹರಾಜು ಧಾರಣೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಮುಂದೆ ಮತ್ತಷ್ಟುದರ ಕುಸಿಯುವ ಸಾಧ್ಯತೆಯೇ ಹೆಚ್ಚು ಇರುವಂತೆ ಕಾಣುತ್ತಿದೆ. ಕಳೆದ 6 ತಿಂಗಳುಗಳಿಂದ ತೆಂಗು ಬೆಳೆಗಾರರು ಸೇರಿದಂತೆ ಕಾಂಗ್ರೆಸ್‌ ಹಾಗೂ ವಿವಿಧ ರೈತ ಸಂಘಟನೆಗಳು ಬೆಂಬಲ ಬೆಲೆ ಹೆಚ್ಚಿಸುವಂತೆ ಸಾಕಷ್ಟುಹೋರಾಟಗಳ ಮೂಲಕ ಮನವಿ ಪತ್ರಗಳನ್ನು ಸಲ್ಲಿಸಿದ್ದರೂ ಬೆಂಬಲ ಬೆಲೆ ಸಿಗಲೇ ಇಲ್ಲ.

Tap to resize

Latest Videos

ತಿಪಟೂರು ಬಂದ್‌ ನಡೆಸಿದ್ದಲ್ಲದೆ ಜಿಲ್ಲೆಯ ಹಲವು ಭಾಗಗಳಲ್ಲಿಯೂ ಬೆಂಬಲ ಬೆಲೆ ಹೆಚ್ಚಿಸಲು ನಿರಂತರ ಹೋರಾಟಗಳು ನಡೆಯುತ್ತಲೇ ಇದ್ದರೂ ಕೇಂದ್ರ ಸರ್ಕಾರ ಮಾತ್ರ ಕೊಬ್ಬರಿ ಬೆಳೆಗಾರರ ರಕ್ಷಣೆಗೆ ಮುಂದಾಗುತ್ತಲೇ ಇಲ್ಲ. ಆದರೆ ಕೇಂದ್ರ ಸರ್ಕಾರ ವೈಜ್ಞಾನಿಕ ಬೆಲೆಗೆ ಕೊಬ್ಬರಿ ಖರೀದಿಸಲು ತಮ್ಮ ಇಚ್ಚಾಶಕ್ತಿಯ ಕೊರತೆಯನ್ನು ತೋರಿಸುತ್ತಿದ್ದು, ಇತರ ಬೆಳೆಗಳಿಗೆ ಮಾತ್ರ ಬೆಂಬಲ ಬೆಲೆ ಘೋಷಣೆ ಮಾಡಿ ರೈತರ ಜೀವನಾಧಾರ ಬೆಳೆ ಕೊಬ್ಬರಿಗೆ ಘೋಷಿಸದಿರುವುದು ಸರಿಯಲ್ಲ. ಹಾಗಾಗಿ ಕೂಡಲೇ ತೆಂಗು ಬೆಳೆಗಾರರ ಸಹಾಯಕ್ಕೆ ಕೇಂದ್ರ ಬರದಿದ್ದರೆ ತೆಂಗು ಸಂಪೂರ್ಣ ನಾಶವಾಗಲಿದೆ. ಈಗಾಗಲೇ ತೆಂಗಿನ ಮರಗಳು ಹಲವು ರೋಗರುಜಿನಗಳಿಗೆ ತುತ್ತಾಗಿದ್ದು ರೈತರನ್ನು ಮತ್ತಷ್ಟುಕಂಗಾಲಾಗುವಂತೆ ಮಾಡಿದ್ದು, ಕೂಡಲೇ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ತೆಂಗು ಬೆಳೆಗಾರರಿಗೆ ನ್ಯಾಯ ಒದಗಿಸಬೇಕೆಂದು ಲೋಕೇಶ್ವರ ಒತ್ತಾಯಿಸಿದ್ದಾರೆ.

click me!