ಕ್ಯಾನ್ಸರ್‌ ಪೀಡಿತರಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಿ: ರಾಷ್ಟ್ರಪತಿ ದ್ರೌಪದಿ ಮುರ್ಮು

By Kannadaprabha News  |  First Published Jan 4, 2025, 7:37 AM IST

ಕೆಎಲ್‌ಇ ಸಂಸ್ಥೆ ಅತ್ಯಾಧುನಿಕವಾದ ಕ್ಯಾನ್ಸರ್ ಆಸ್ಪತ್ರೆ ಜನಸೇವೆಗೆ ಅರ್ಪಿಸಿರುವುದನ್ನು ಮುಕ್ತಕಂಠ ದಿಂದ ಶ್ಲಾಘಿಸಿದ ರಾಷ್ಟ್ರಪತಿ, ಭಾರತದಲ್ಲಿ ಎಲ್ಲರಿಗೂ ಆರೋಗ್ಯ ವ್ಯವಸ್ಥೆ ಕಲ್ಪಿಸುವುದು ಅತ್ಯಗತ್ಯ. ಆದ್ದರಿಂದಲೇ ಕೇಂದ್ರ ಸರ್ಕಾರ ಆಯುಷ್ಠಾನ್ ಭಾರತದಂತಹ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು 


ಬೆಳಗಾವಿ(ಜ.04): ಐಸಿಎಂಆರ್‌ ಸಮೀಕ್ಷೆಯಂತೆ ದೇಶದಲ್ಲಿ ಸುಮಾರು 20 ಮಿಲಿಯನ್‌ಗೂ ಅಧಿಕ ಜನ ಪ್ರತಿವರ್ಷ ಕ್ಯಾನ್ಸರ್ ಪೀಡಿತರಾಗುತ್ತಿದ್ದು, ಸುಮಾರು 7 ಮಿಲಿಯನ್‌ಗೂ ಅಧಿಕ ಜನರು ಪ್ರತಿವರ್ಷ ಸಾವಿಗೀಡಾಗುತ್ತಿದ್ದಾರೆ. ಆದರಿಂದ ದೇಶದಲ್ಲಿ ಕ್ಯಾನ್ಸರ್ ಆಸತ್ರೆಗಳು ಹೆಚ್ಚಾಗಬೇಕು ಮತ್ತು ಉಚಿತ ಹಾಗೂ ಕೈಗೆಟಕುವ ದರದಲ್ಲಿ ಚಿಕಿತ್ಸೆ ಲಭ್ಯವಾಗಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯಪಟ್ಟಿದ್ದಾರೆ. 

ಕೆಎಲ್‌ಇ ಸಂಸ್ಥೆ ನೂತನವಾಗಿ ಪ್ರಾರಂಭಿಸಿರುವ ಕೆಎಲ್‌ಇ ಡಾ.ಸಂಪತಕುಮಾರ ಹಾಗೂ ಡಾ. ಉದಯಾ ಶಿವಣಗಿ ಕ್ಯಾನ್ಸ‌ರ್ ಆಸ್ಪತ್ರೆಯನ್ನು ಶುಕ್ರವಾರ ಜನಸೇವೆಗೆ ಅರ್ಪಿಸಿ ಮಾತನಾಡಿದ ಅವರು, ದೇಶದಲ್ಲಿ ಹಿರಿಯ ನಾಗರಿಕರಿಗೆ ಕ್ಯಾನ್ಸರ್‌ ಅತೀ ಹೆಚ್ಚು ಬಾಧಿಸುತ್ತಿದೆ. ಹಾಗಾಗಿ ಕ್ಯಾನ್ಸರ್ ಕುರಿತು ಜಾಗೃತಿ ಕಾರ್ಯನಡೆಯಬೇಕು ಎಂದರು. 

Tap to resize

Latest Videos

ಕೆಪಿಸಿಸಿ ಅಧ್ಯಕ್ಷರ ನೇಮಕ ಹೈಕಮಾಂಡ್‌ಗೆ ಬಿಟ್ಟದ್ದು: ಸಚಿವ ಸತೀಶ್‌ ಜಾರಕಿಹೊಳಿ

ಕೆಎಲ್‌ಇ ಸಂಸ್ಥೆ ಅತ್ಯಾಧುನಿಕವಾದ ಕ್ಯಾನ್ಸರ್ ಆಸ್ಪತ್ರೆ ಜನಸೇವೆಗೆ ಅರ್ಪಿಸಿರುವುದನ್ನು ಮುಕ್ತಕಂಠ ದಿಂದ ಶ್ಲಾಘಿಸಿದ ರಾಷ್ಟ್ರಪತಿ, ಭಾರತದಲ್ಲಿ ಎಲ್ಲರಿಗೂ ಆರೋಗ್ಯ ವ್ಯವಸ್ಥೆ ಕಲ್ಪಿಸುವುದು ಅತ್ಯಗತ್ಯ. ಆದ್ದರಿಂದಲೇ ಕೇಂದ್ರ ಸರ್ಕಾರ ಆಯುಷ್ಠಾನ್ ಭಾರತದಂತಹ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈ ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆ ವ್ಯಾಪಕ ವ್ಯಾಪ್ತಿ ಮತ್ತು ಬೃಹತ್ ಪರಿಣಾಮ ಹೊಂದಿರುವ ಲಕ್ಷಾಂತರ ಜನರ ಜೀವನದ ಗುಣಮಟ್ಟ ಸುಧಾರಿಸುವಲ್ಲಿ ಗಮನಾರ್ಹ ಕೊಡುಗೆ ನೀಡಿದೆ ಎಂದರು. 

ವೈದ್ಯಕೀಯ ಜರ್ನಲ್ ಪ್ರಕಾರ, ಆಯುಷ್ಮಾನ್ ಭಾರತ್ ಜನ ಆರೋಗ್ಯ ಯೋಜನೆಯಿಂದಾಗಿ ಕ್ಯಾನ್ಸ‌ರ್ ಚಿಕಿತ್ಸೆ ಸಮಯೋಚಿತವಾಗಿ ಪ್ರಾರಂಭಿಸುವಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ. ಈ ಯೋಜನೆ ಪ್ರಾರಂಭದ ಹಿಂದಿನ ಅವಧಿಗೆ ಹೋಲಿಸಿದರೆ ಕ್ಯಾನ್ಸರ್‌ ರೋಗ ನಿರ್ಣಯ ಮತ್ತು ಚಿಕಿತ್ಸೆಯ ಪ್ರಾರಂಭದ ನಡುವಿನ ಅವಧಿ ಕಡಿಮೆ ಮಾಡಲಾಗಿದೆ. ಇದು ಮುಖ್ಯವಾಗಿ ಕಡಿಮೆ ಆದಾಯದ ಗುಂಪುಗಳಿಗೆ ಅನುಕೂಲವಾಗಿದೆ. ಈಗ ಈ ಯೋಜನೆ ವ್ಯಾಪ್ತಿಯನ್ನು 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರನ್ನು ಸೇರಿಸಲು ವಿಸ್ತರಿಸಲಾಗಿದೆ. ಇದು ಹಿರಿಯ ನಾಗರಿಕರು ಕ್ಯಾನ್ಸರ್‌ ಸೇರಿ ಹಲವಾರು ಕಾಯಿಲೆಗಳಿಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆ ಪಡೆಯಲು ಸಹಕಾರಿಯಾಗಿದೆ ಎಂದರು.

ಪ್ರಿಯಾಂಕ್ ಖರ್ಗೆ ದುರಂಹಕಾರ ಮಾತಿನಲ್ಲೇ ಗೊತ್ತಾಗುತ್ತದೆ: ಜಗದೀಶ್‌ ಶೆಟ್ಟರ್‌

ಕೇಂದ್ರ ಸಚಿವ ಪ್ರಹ್ಲಾದ ಜೋತಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜೀವನಶೈಲಿ ಹಾಗೂ ಆಹಾರ ಪದ್ದತಿಯಿಂದಾಗಿ ಕ್ಯಾನ್ಸರ್ ರೋಗ ಅತ್ಯಧಿಕವಾಗಿ ಕಂಡು ಬರುತ್ತಿದೆ. ಆರಂಭಿಕವಾಗಿ ಕಂಡು ಹಿಡಿದು ಚಿಕಿತ್ಸೆ ನೀಡಬೇಕಾಗಿದೆ. ಅದಕ್ಕಾಗಿ ಗ್ರಾಮೀಣ ಪ್ರದೇಶ ಜನರ ಆರೋಗ್ಯ ಸುಧಾರಿಸಲು ಅತೀ ಹೆಚ್ಚು ಅನು ದಾನ ನೀಡಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಕೆಎಲ್‌ಇ ಸಂಸ್ಥೆಯು ಜನರ ಅನಾರೋಗ್ಯವನ್ನು ಹೋಗಲಾಡಿಸಲು ಉತ್ತಮವಾಗಿ ಕಾರ್ಯನಿರ್ವ ಹಿಸುತ್ತಿದೆ ಎಂದರು. 

ಕೆಎಲ್‌ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಮಾತನಾಡಿ, ದಾನಿಗಳಿಂದಲೇ ಕೆಎಲ್‌ಇ ಸಂಸ್ಥೆಯು ಬೆಳೆದು ಬಂದಿದೆ. ಈ ಭಾಗದಲ್ಲಿ ಕ್ಯಾನ್ಸರ್ ಹೆಚ್ಚು ಕಂಡು ಬರುತ್ತಿದ್ದು, ಅದರ ನಿರ್ಮೂಲನೆಗಾಗಿ ಸುಮಾರು 300 ಹಾಸಿಗೆಗಳ ಆಸ್ಪತ್ರೆ ಜನಸೇವೆಗೆ ನೀಡಲಾಗಿದೆ ಎಂದರು.

click me!