
ಬಳ್ಳಾರಿ (ಜೂ.02): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 9 ವರ್ಷಗಳಾಗಿದ್ದು, ಈ ಅವಧಿಯಲ್ಲಿ ಇಡೀ ವಿಶ್ವವೇ ಮೆಚ್ಚುವಂತೆ ಪ್ರಗತಿದಾಯಿಕ ಕೆಲಸಗಳಾಗಿವೆ. ಭಾರತದ ಆರ್ಥಿಕ ಪ್ರಗತಿಯ ವೇಗ ಭವಿಷ್ಯದಲ್ಲಿ ಭಾರತ ಇಡೀ ವಿಶ್ವಕ್ಕೆ ದೊಡ್ಡ ಶಕ್ತಿಯಾಗುವ ಸೂಚನೆ ನೀಡಿದೆ ಎಂದು ಸಂಸದ ವೈ. ದೇವೇಂದ್ರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಆಗಿರುವ ಅನೇಕ ಪ್ರಗತಿದಾಯಿಕ ಕಾರ್ಯಗಳ ಕುರಿತು ಮಾಹಿತಿ ನೀಡಿದರು.
2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಭಾರತದ ಪ್ರಗತಿಗಾಗಿ ಶ್ರಮಿಸುತ್ತಿದ್ದಾರೆ. ದೇಶದ ಆಂತರಿಕ ಭದ್ರತೆ, ಆರ್ಥಿಕ ನಿರ್ವಹಣೆ, ಸಬಲೀಕರಣ ಯೋಜನೆಗಳ ಕಡೆ ಪ್ರಧಾನಮಂತ್ರಿಗಳು ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಪ್ರಗತಿ, ರೈಲ್ವೆ ಯೋಜನೆಗಳ ಅಭಿವೃದ್ಧಿಗೆ ವೇಗ ನೀಡಲಾಗಿದೆ. ಮೋದಿಯವರು ಪ್ರಧಾನಿಯಾದ ಬಳಿಕ ದೇಶದಲ್ಲಿ ಸಾರಿಗೆ ಸಂಪರ್ಕದ ಕ್ರಾಂತಿಯಾಗಿದೆ. ಭಾರತದ ಆರ್ಥಿಕ ಬೆಳವಣಿಗೆಯಿಂದಾಗಿ ಜಾಗತಿಕ ಮನ್ನಣೆ ಸಿಕ್ಕಿದೆ. ವಿಶ್ವದೆಲ್ಲೆಡೆ ಭಾರತದ ಕುರಿತು ಚರ್ಚಿಸುವಂತಾಗಿದೆ. ಮುಂದುವರಿದ ರಾಷ್ಟ್ರಗಳು ಭಾರತದ ಕಡೆ ನೋಡುವಂತಾಗಿದೆ ಎಂದರು.
ವಿಪಕ್ಷಗಳಿಗೆ ಗ್ಯಾರಂಟಿ ಬಗ್ಗೆ ಅನವಸರ ಗೊಂದಲ: ಸಂಸದ ಡಿ.ಕೆ.ಸುರೇಶ್
ಪ್ರಧಾನಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ 80 ಕೋಟಿ ಜನರು ಉಚಿತ ಆಹಾರ ಧಾನ್ಯಗಳನ್ನು ಪಡೆಯುತ್ತಿದ್ದಾರೆ. ದೇಶದಲ್ಲಿ ಸ್ವಚ್ಛ ಭಾರತ ಯೋಜನೆಯಡಿ 11.72 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಪ್ರಸ್ತುತ ಕೇಂದ್ರದ ಶೇ. 60 ಮಂತ್ರಿಗಳು ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಮೂಲಕ ಹಿಂದುಳಿದ ಸಮುದಾಯಕ್ಕೆ ರಾಜಕೀಯ ನೆಲೆಯಲ್ಲಿ ಆದ್ಯತೆ ನೀಡಲಾಗಿದೆ. ಕೋವಿಡ್ ಸಂದರ್ಭದಲ್ಲಿ 20 ಕೋಟಿ ಮಹಿಳೆಯರು ನೇರ ನಗದು ವರ್ಗಾವಣೆ ಪ್ರಯೋಜನ ಪಡೆದಿದ್ದಾರೆ.
2014ರಿಂದ ಹಿಂದಿನ ದಿನಗಳಿಗೆ ಹೋಲಿಸಿದರೆ ಐದು ಪಟ್ಟು ಹೆಚ್ಚು ಏಕಲವ್ಯ ವಸತಿ ಶಾಲೆಗಳನ್ನು ಮಂಜೂರು ಮಾಡಲಾಗಿದೆ. ಸ್ಟಾ್ಯಂಡ್‌ಅಪ್ ಇಂಡಿಯಾ ಅಡಿಯಲ್ಲಿ ಎಸ್ಸಿ- ಎಸ್ಟಿಸಮುದಾಯದ ಫಲಾನುಭವಿಗಳಿಗೆ 7351 ಕೋಟಿಗೂ ಹೆಚ್ಚು ಸಾಲ ನೀಡಲಾಗಿದೆ. ಪ್ರಧಾನಮಂತ್ರಿ ಸ್ವನಿಧಿ ಅಡಿಯಲ್ಲಿ .39.65 ಕೋಟಿ ಸಾಲ ನೀಡಲಾಗಿದೆ. ಕಳೆದ 9 ವರ್ಷಗಳ ಅವಧಿಯಲ್ಲಿ 11.88 ಕೋಟಿ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕೊಡಲಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 3 ಕೋಟಿಗೂ ಅಧಿಕ ಮನೆಗಳನ್ನು ನಿರ್ಮಿಸಿಕೊಡಲಾಗಿದೆ ಎಂದರು.
ಪ್ಲಾಸ್ಟಿಕ್ ಮುಕ್ತ ಚಿಕ್ಕಬಳ್ಳಾಪುರ ಮಾಡುವುದೇ ನನ್ನ ಗುರಿ: ಶಾಸಕ ಪ್ರದೀಪ್ ಈಶ್ವರ್
ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್, ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ, ಎಂ.ಎಸ್. ಸೋಮಲಿಂಗಪ್ಪ, ಡಾ. ಬಿ.ಕೆ. ಸುಂದರ್, ಡಾ. ಅರುಣಾ ಕಾಮಿನೇನಿ, ಅನಿಲ್‌ನಾಯ್ಡು ಮೋಕಾ ಸುದ್ದಿಗೋಷ್ಠಿಯಲ್ಲಿದ್ದರು.