Bengaluru ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್‌ ನ್ಯೂಸ್‌! ಶೇ.5 ರಿಯಾಯಿತಿ ವಿಸ್ತರಣೆ ಸಾಧ್ಯತೆ

Published : May 17, 2023, 04:21 PM ISTUpdated : May 17, 2023, 05:19 PM IST
Bengaluru ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್‌ ನ್ಯೂಸ್‌! ಶೇ.5 ರಿಯಾಯಿತಿ ವಿಸ್ತರಣೆ ಸಾಧ್ಯತೆ

ಸಾರಾಂಶ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಸ್ತಿ ತೆರಿಗೆ ಪಾವತಿಸುತ್ತಿರುವ ತೆರಿಗೆದಾರರಿಗೆ  ಶೇ.5%ರಷ್ಟು ರಿಯಾಯಿತಿಗೆ ಜೂನ್ ವರಗೆ ವಿಸ್ತರಿಸಲು ಮನವಿ ಸಲ್ಲಿಕೆ ಮಾಡಲಾಗಿದೆ.

ಬೆಂಗಳೂರು (ಮೇ 17): ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಸ್ತಿ ತೆರಿಗೆ ಪಾವತಿಸುತ್ತಿರುವ ತೆರಿಗೆದಾರರಿಗೆ  ಶೇ.5%ರಷ್ಟು ರಿಯಾಯಿತಿಗೆ ಜೂನ್ ವರಗೆ ವಿಸ್ತರಿಸಲು ಮನವಿ ಸಲ್ಲಿಕೆ ಮಾಡಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮಾಜಿ ಆಡಳಿತ ಪಕ್ಷದ ನಾಯಕ ಎಮ್.ಶಿವರಾಜು (M Shivaraju) ಹಾಗೂ ಮಾಜಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್‌ (Abdul Wajid) ಹಾಗೂ ಮಹಾನಗರ ಪಾಲಿಕೆ ಮಾಜಿ  ಸದಸ್ಯ ಮೋಹನ್ ಕುಮಾರ್ ಮನವಿ ಪತ್ರ ಸಲ್ಲಿಕೆ ಮಾಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವತ್ತುಗಳಿಗೆ ಆಸ್ತಿ ತೆರಿಗೆ ಪಾವತಿಸುತ್ತಿರುವ (BBMP Property Tax payers)  ತೆರಿಗೆದಾರರಿಗೆ ಮೊದಲ ತಿಂಗಳ ಅವಧಿಯಲ್ಲಿ (ಏಪ್ರಿಲ್‌  ತಿಂಗಳು) ಶೇ 5% ರಷ್ಟು ರಿಯಾಯಿತಿ (5 Percent discount) ಅನ್ನು ನೀಡಲಾಗುತ್ತದೆ. ಆದರೆ, ಕಳೆದ ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ.5 ರಿಯಾಯಿತಿಯನ್ನು ಜೂನ್‌ ತಿಂಗಳವರೆಗೂ ವಿಸ್ತರಣೆ ಮಾಡಲಾಗುತ್ತಿತ್ತು. ಈ ವರ್ಷವೂ ಕೂಡ ಏಪ್ರಿಲ್‌ ಮತ್ತು ಮೇ ತಿಂಗಳು ಸೇರಿ ಎರಡು ತಿಂಗಳು ಆಸ್ತಿ ತೆರಿಗೆ ಮೇಲಿನ ಶೇ.5 ರಿಯಾಯಿತಿ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು.

Karnataka CM Announcement: ಸಿಎಂ ಹುದ್ದೆ ಪಟ್ಟು ಹಿಡಿದ ಡಿಕೆಶಿ-ಸಿದ್ದು ಶಮನಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ!

ಬಿಬಿಎಂಪಿ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ, ಏಪ್ರಿಲ್ ತಿಂಗಳಿನಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿದ ತೆರಿಗೆದಾರರಿಗೆ ಮಾತ್ರ ಶೇ.5 ರಷ್ಟು ರಿಯಾಯಿತಿಯನ್ನು ನೀಡಲಾಗಿರುತ್ತದೆ. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಕೆಲಸಗಳು ಚಾಲ್ತಿಯಲ್ಲಿದ್ದ ಕಾರಣ ಕಂದಾಯ ವಿಭಾಗದ ಎಲ್ಲಾ ಸಿಬ್ಬಂಧಿಗಳು ಚುನಾವಣಾ ಕೆಲಸ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದಾರೆ. ಆದ್ದರಿಂದ ನಗರದ ಬಹುತೇಕ ಆಸ್ತಿಗಳ ಮಾಲೀಕರು ತಮ್ಮ ವಾರ್ಷಿಕ ಆಸ್ತಿ ತೆರಿಗೆ ಪಾವತಿಸುವಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಹೀಗಾಗಿ, ಈ ವರ್ಷವೂ ಕೂಡ ಆಸ್ತಿ ತೆರಿಗೆ ಪಾವತಿಗೆ ಶೇ.5 ರಿಯಾಯಿತಿ ವಿಸ್ತರಣೆ ಮಾಡಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಕೌನ್ಸಿಲ್‌ ಅಧಿಕಾರ ಹೊಂದಿರುವ ಆಡಳಿತಾಧಿಕಾರಿ ನಿರ್ಣಯ ಕೈಗೊಳ್ಳಲಿ:  ಬಿಬಿಎಂಪಿಯಲ್ಲಿ ಪಾಲಿಕೆ ಸದಸ್ಯರು ಇಲ್ಲದೇ ಸರ್ಕಾರದಿಂದಲೇ (ಆಡಳಿತಾಧಿಕಾರಿ ಮತ್ತು ಮುಖ್ಯ ಆಯುಕ್ತರು) ಆಡಳಿತ ಮಾಡಲಾಗುತ್ತಿದೆ. ಪಾಲಿಕೆಯ ಕೌನ್ಸಿಲ್‌ ಅಧಿಕಾರ ಹೊಂದಿರುವ ಆಡಳಿತಾಧಿಕಾರಿ ಅವರಿಗೆ ಆಸ್ತಿ ತೆರಿಗೆ ಪಾವತಿಗೆ ರಿಯಾಯಿತಿ ನೀಡುವ ಅಧಿಕಾರವಿದೆ. ಕೂಡಲೇ ಸಾರ್ವಜನಿಕರಿಗೆ ಶೇ.5 ರಿಯಾಯಿತಿ ಘೋಷಣೆ ಮಾಡಬೇಕು. ಪ್ರಸುತ್ತ ಚುನಾವಣೆ ಕೆಲಸ ಕಾರ್ಯಗಳು ಮುಕ್ತಾಯಗೊಂಡಿರುವುದರಿಂದ ಹಾಗೂ ಸಾರ್ವಜನಿಕರ ಆರ್ಥಿಕ ಹಿತದೃಷ್ಟಿಯಿಂದ ಪ್ರತಿ ವರ್ಷದಂತೆ ನಿಗದಿತ ಸಮಯದಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸುವ ತೆರಿಗೆದಾರರಿಗೆ ಶೇಕಡ 5 ರಷ್ಟು ರಿಯಾಯಿತಿಯನ್ನು 1 ತಿಂಗಳು ವಿಸ್ತರಿಸಬೇಕೆಂದು ಮನವಿ ಸಲ್ಲಿಕೆ ಮಾಡಿದರು.

KARNATAKA GOVT FORMATION: ಕರ್ನಾಟಕ ಸಿಎಂ ಆಯ್ಕೆಯಾಗಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ : ಸುರ್ಜೇವಾಲಾ

ದಾಖಲೆಯ ಆಸ್ತಿ ತೆರಿಗೆ ಸಂಗ್ರಹ: 2022-23ನೇ ಸಾರ್ಥಿಕ ಸಾಲಿನ ಮುಕ್ತಾಯಕ್ಕೆ ಬಿಬಿಎಂಪಿಯ ಆಸ್ತಿ ತೆರಿಗೆ ಸಂಗ್ರಹ ಪ್ರಮಾಣ 3,332.72 ಕೋಟಿಗೆ ಏರಿಕೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 250 ಕೋಟಿ ರೂ. ಹೆಚ್ಚು ಸಂಗ್ರಹವಾಗಿದೆ. ಕಳೆದ 2021-22ನೇ ಸಾಲಿನಲ್ಲಿ 3,088 ಕೋಟಿ ಸಂಗ್ರಹವಾಗಿತ್ತು. 2022-23ನೇ ಸಾಲಿನಲ್ಲಿ 3,332.72 ಕೋಟಿ ಸಂಗ್ರಹವಾಗಿದೆ. ನಗರದಲ್ಲಿ ಅಧಿಕ ಮೊತ್ತದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿತಯಾರಿಸಿ ವಸೂಲಿ ಮಾಡಲು ಯೋಜನೆ ರೂಪಿಸಲಾಗಿತ್ತು. ಬೆಸ್ಕಾಂ ಸೇರಿದಂತೆ ವಿವಿಧ ಸಾರ್ವಜನಿಕ ಇಲಾಖೆಗೆ ನೀಡಿದ ದಾಖಲೆ ಆಧರಿಸಿ ಪರಿಶೀಲಿಸುವುದು ಸೇರಿದಂತೆ ವಿವಿಧ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ವಸೂಲಿ ಹೆಚ್ಚಳವಾಗಿದೆ. ಜತೆಗೆ, ಆನ್‌ಲೈನ್‌ ಮೂಲಕ ಆಸ್ತಿ ತೆರಿಗೆ ಪಾವತಿಗೆ ಇರುವ ವ್ಯವಸ್ಥೆಯ ಸುಧಾರಣೆಯಾಗಿದೆ ಎಂದು ಕಂದಾಯ ವಿಭಾಗದ ಆಯುಕ್ತರು ತಿಳಿಸಿದ್ದರು. 

PREV
Read more Articles on
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ