ವೀರ ಸೇನಾನಿಗಳಿಗೆ ಅಪಮಾನ ಖಂಡಿಸಿ ಕೊಡಗು ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಸಾವರ್ಜನಿಕರ ಪರದಾಟ

By Girish Goudar  |  First Published Dec 12, 2024, 4:12 PM IST

ಕೊಡಗು ಜಿಲ್ಲೆಯಲ್ಲಿ ಎಲ್ಲೆಡೆ ಬಂದ್ ಇದ್ದರಿಂದ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಆಗಿತ್ತು. 12 ಗಂಟೆಯವರೆಗೆ ಬಂದ್ ಕರೆ ನೀಡಿದ್ದರಿಂದ ಎಲ್ಲಾ ವ್ಯಾಪಾರ ವಹಿವಾಟುಗಳು ಬಂದ್ ಆಗಿದ್ದವು. ಸರ್ವ ಜನಾಂಗಗಳ ಒಕ್ಕೂಟದಿಂದ ಕೊಡಗು ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ನಡೆದ ಬಂದ್ ಮಧ್ಯಾಹ್ನದ ಬಳಿಕ ತೆರವಾಯಿತು. 


ವರದಿ : ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್

ಕೊಡಗು(ಡಿ.12): ದೇಶದ ವೀರ ಸೇನಾನಿಗಳಾದ ಜನರಲ್ ತಿಮ್ಮಯ್ಯ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನಿಸಿ ಪೋಸ್ಟ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ವಕೀಲ ವಿದ್ಯಾಧರ್ ಎಂಬಾತನನ್ನು ಕನಿಷ್ಠ 6 ತಿಂಗಳಾದರೂ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಇಂದು(ಗುರುವಾರ) ಕರೆ ನೀಡಿದ್ದ ಕೊಡಗು ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

Tap to resize

Latest Videos

ಜಿಲ್ಲಾ ಕೇಂದ್ರ ಮಡಿಕೇರಿ, ನಾಲ್ಕು ತಾಲ್ಲೂಕು ಕೇಂದ್ರಗಳಾದ ವಿರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕು ಕೇಂದ್ರಗಳಲ್ಲಿ ಬಂದ್‌ಗೆ ಉತ್ತಮ ಸ್ಪಂದನೆ ದೊರೆತಿದೆ. ಎಲ್ಲೆಡೆ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದರಿಂದ ಯಾವುದೇ ವ್ಯಾಪಾರ ವಹಿವಾಟು ನಡೆಯಲಿಲ್ಲ. ಸರ್ವ ಜನಾಂಗಗಳ ಒಕ್ಕೂಟದಿಂದ ಕರೆ ನೀಡಲಾಗಿದ್ದ ಬಂದ್‌ಗೆ ಜಿಲ್ಲೆಯ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿರುವ ಖಾಸಗಿ ಬಸ್ಸುಗಳ ಮಾಲೀಕರ ಸಂಘವು ಸಂಪೂರ್ಣ ಬೆಂಬಲ ನೀಡಿದ್ದರಿಂದ ಜಿಲ್ಲೆಯಲ್ಲಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸಾರಿಗೆ ವ್ಯವಸ್ಥೆ ಸಂಪೂರ್ಣ ಬಂದ್ ಆಗಿತ್ತು. ಒಂದೇ ಒಂದು ಖಾಸಗಿ ಬಸ್ಸಿನ ಓಟಾಟವೂ ಇಲ್ಲದೆ ಗ್ರಾಮೀಣ ಭಾಗದ ಜನತೆ ಸಮಸ್ಯೆ ಅನುಭವಿಸಬೇಕಾಯಿತು. 

ಸಹೋದ್ಯೋಗಿಗೆ ಜಾತಿನಿಂದನೆ ಮಾಡಿದ ಇಬ್ಬರು ಯುವತಿಯರು! ದೂರು ಕೊಟ್ಟರೂ ಕ್ರಮ ಇಲ್ಲ!

undefined

ತಮ್ಮ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳಬೇಕಾಗಿದ್ದ ಜನರು ಸಾರಿಗೆ ಸಂಪರ್ಕವಿಲ್ಲದೆ ಪರದಾಡಬೇಕಾಯಿತು. ಇನ್ನು ಆಟೋ, ಕ್ಯಾಬ್ ಗಳ ಮಾಲೀಕರು ಮತ್ತು ಚಾಲಕರ ಸಂಘವೂ ಬಂದ್ಗೆ ಬೆಂಬಲ ಸೂಚಿಸಿದ್ದವು. ಹೀಗಾಗಿ ಅವುಗಳ ಓಡಾಟವೂ ತೀರಾ ವಿರಳವಾಗಿತ್ತು. ಇದರಿಂದಲೂ ಸಾರ್ವಜನಿಕರು ಓಡಾಡಲು ಸಾರಿಗೆ ವ್ಯವಸ್ಥೆಯಿಲ್ಲದೆ ಸಂಕಷ್ಟ ಅನುಭವಿಸಬೇಕಾಯಿತು. 

ಜಿಲ್ಲಾ ಕೇಂದ್ರ ಮಡಿಕೇರಿಯಿಂದ ಬೇರೆಡೆಗೆ ತಮ್ಮ ಕರ್ತವ್ಯಗಳಿಗೆ ತೆರಳಲು ಟೋಲ್ ಗೇಟಿನಲ್ಲಿ ಜನರು ಕಾದು ನಿಂತರೂ ಖಾಸಗಿ ಬಸ್ಸುಗಳ ಸಂಚಾರವಿಲ್ಲದೆ ತೆರಳಲು ಸಮಸ್ಯೆ ಎದುರಿಸುವಂತೆ ಆಯಿತು. ಅದರಲ್ಲೂ ಮಾದಾಪುರ, ಸೋಮವಾರಪೇಟೆ, ವಿರಾಜಪೇಟೆ ಮತ್ತು ಸಂಪಾಜೆ ಮುಂತಾದೆಡೆಗೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದೆ ಕಾದು ನಿಂತು ಬಸವಳಿಯಬೇಕಾಯಿತು. ಆದರೆ ಸರ್ಕಾರಿ ಸಾರಿಗೆಯಲ್ಲಿ ಯಾವುದೇ ವ್ಯತ್ಯಾಸ ಇಲ್ಲದೆ ಎಂದಿನಂತೆ ಸಂಚಾರ ಇದ್ದಿದ್ದರಿಂದ ಕುಶಾಲನಗರ ಮತ್ತು ಸುಳ್ಯಭಾಗಗಳಿಗೆ ಯಾವುದೇ ಸಮಸ್ಯೆ ಇಲ್ಲದೆ ಜನರು ಸಂಚರಿಸಿದರು. 

ಫೆಂಗಲ್ ಎಫೆಕ್ಟ್ ಕೊಡಗು ಜಿಲ್ಲೆಯಾದ್ಯಂತ ಜಿಟಿಜಿಟಿ ಮಳೆ ; ಆತಂಕದಲ್ಲಿ ಕಾಫಿ ಬೆಳೆಗಾರರು!

ಜಿಲ್ಲೆಯಲ್ಲಿ ಎಲ್ಲೆಡೆ ಬಂದ್ ಇದ್ದರಿಂದ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಆಗಿತ್ತು. 12 ಗಂಟೆಯವರೆಗೆ ಬಂದ್ ಕರೆ ನೀಡಿದ್ದರಿಂದ ಎಲ್ಲಾ ವ್ಯಾಪಾರ ವಹಿವಾಟುಗಳು ಬಂದ್ ಆಗಿದ್ದವು. ಸರ್ವ ಜನಾಂಗಗಳ ಒಕ್ಕೂಟದಿಂದ ಕೊಡಗು ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ನಡೆದ ಬಂದ್ ಮಧ್ಯಾಹ್ನದ ಬಳಿಕ ತೆರವಾಯಿತು. 

ಮಧ್ಯಾಹ್ನ 12 ಗಂಟೆಯ ಬಳಿಕ ಎಂದಿನಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆದವು. ಜೊತೆಗೆ ಆಟೋ, ಕ್ಯಾಬ್ ಸೇರಿದಂತೆ ಎಲ್ಲಾ ವಾಹನಗಳ ಸಂಚಾರವೂ ಎಂದಿನಂತೆ ಆರಂಭವಾಯಿತು. ಆದರೆ ಕೊಡಗಿನ ಗ್ರಾಮೀಣ ಪ್ರದೇಶಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಖಾಸಗಿ ಬಸ್ಸುಗಳ ಸಂಚಾರ ಮಾತ್ರ ಮಧ್ಯಾಹ್ನದ ಬಳಿಕವೂ ಆರಂಭವಾಗಲಿಲ್ಲ. ಆದರೆ ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆದು ವ್ಯಾಪಾರ ವಹಿವಾಟುಗಳು ಎಂದಿನಂತೆ ನಡೆದವು.  ಬೆಳಿಗ್ಗೆಯಿಂದ ಖಾಸಗಿ ಬಸ್ಸುಗಳ ಸಂಚಾರ ಸ್ಥಗಿತ, ಆಟೋ, ಕ್ಯಾನಬ್‌ಗಳ ಸಂಚಾರ ಸ್ಥಗಿತವಾಗಿದ್ದರಿಂದ ಸಾಕಷ್ಟು ಜನರು ಸಂಕಷ್ಟ ಅನುಭವಿಸಿದ್ದಂತು ಸತ್ಯ.

click me!