7th Pay Commission: ಮಾರ್ಚ್ 1ರಿಂದ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು!

By Kannadaprabha NewsFirst Published Feb 25, 2023, 8:06 AM IST
Highlights

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಬರುವ ಮಾ. 1ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿ​ರ್‍ಷ್ಟಾವ​ಧಿ ಮುಷ್ಕರ ಮಾಡಲಿದ್ದೇವೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್‌.ಎಫ್‌. ಸಿದ್ದನಗೌಡರ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಧಾರವಾಡ (ಫೆ.25) : ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಬರುವ ಮಾ. 1ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿ​ರ್‍ಷ್ಟಾವ​ಧಿ ಮುಷ್ಕರ ಮಾಡಲಿದ್ದೇವೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್‌.ಎಫ್‌. ಸಿದ್ದನಗೌಡರ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು(Government employees) ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಬರುವ ಮಾಚ್‌ರ್‍ 1ರಿಂದ ಅನಿ​ರ್‍ಷ್ಠಾವ​ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದರು.

ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಜಾರಿಗೊಳಿಸಲು ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ

ಕಳೆದ ಬಜೆಟ್‌ನಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿ​ಸಿದಂತೆ ಮುಖ್ಯಮಂತ್ರಿಗಳು ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು 2022ರ ಜುಲೈ 1ರಿಂದ ಜಾರಿಗೊಳಿಸಬೇಕಾಗಿತ್ತು. ಜೊತೆಗೆ ಹಳೇ ಪಿಂಚಣಿ ಯೋಜನೆ(Old Pension Scheme) ಜಾರಿಯ ಬೇಡಿಕೆಯನ್ನೂ ಹೊಂದಲಾಗಿದೆ. ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರ ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್‌ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿದ್ದು, ಆಯೋಗದ ಮುಂದೆ ಸಂಘ ವಿಸ್ತೃತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿತ್ತು ಎಂದರು.

ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷÜ್ಕರಣೆ ಮಾಡಿ ಅರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮುಷ್ಕರಕ್ಕೆ ಕೂರಬೇಕಾಗಿದೆ. ಸರ್ಕಾರಿ ನೌಕರರ ಸಂಘದ ಆ​ಧೀನಕ್ಕೊಳಪಡುವ ಎಲ್ಲ ಇಲಾಖೆಯ ವೃಂದ ಸಂಘಗಳು ಹಾಗೂ ಕವಿವಿ ಭೋದಕೇತರ ನೌಕರರ ಸಂಘ, ಕೃಷಿ ವಿಶ್ವವಿದ್ಯಾಲಯ ಭೋದಕೇತರ ನೌಕರರ ಸಂಘ, ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಸರ್ಕಾರಿ ಸ್ವಾಮ್ಯದ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಾ. 1ರೊಳಗೆ ಸರ್ಕಾರ ನೌಕರರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಮಾ.1ರಿಂದ ಮುಷ್ಕರಕ್ಕೆ ಸರ್ಕಾರಿ ನೌಕರರ ಸಿದ್ಧತೆ

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಯಡಳ್ಳಿ, ಗೌರವಾಧ್ಯಕ್ಷ ಆರ್‌.ಬಿ. ಲಿಂಗದಾಳ, ಹಿರಿಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸೊಲಗಿ, ದೇವಿದಾಸ ಶಾಂತಿಕರ್‌, ರಾಜಶೇಖರ ಬಾಣದ, ಗಿರೀಶ ಚೌಡಕಿ ಇತರರು ಇದ್ದರು.

click me!