ಸರ್ಕಾರದ ತಪ್ಪಿನಿಂದ ಸಾವಾದರೆ 2 ಲಕ್ಷ ರೂ. ಪರಿಹಾರ, ಆನೆ ತುಳಿದರೆ 15 ಲಕ್ಷ ರೂ. ಪರಿಹಾರ: ಇದೆಂಥಾ ತಾರತಮ್ಯ

By Sathish Kumar KH  |  First Published Jun 11, 2023, 7:39 PM IST

ಕೊಪ್ಪಳದಲ್ಲಿ ಸರ್ಕಾರದಿಂದ ಪೂರೈಕೆ ಮಾಡಲಾದ ಕಲುಷಿತ ಕುಡಿಯುವ ನೀರು ಸೇವಿಸಿ ಸಾವನ್ನಪ್ಪಿದ ಮೂವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಿದೆ.


ಕೊಪ್ಪಳ (ಜೂ.11): ಕೊಪ್ಪಳದಲ್ಲಿ ಸರ್ಕಾರದಿಂದ ಪೂರೈಕೆ ಮಾಡಲಾದ ಕಲುಷಿತ ಕುಡಿಯುವ ನೀರು ಸೇವಿಸಿ ಸಾವನ್ನಪ್ಪಿದ ಮೂವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಿ ಸರ್ಕಾರ ಕೈತೊಳೆದುಕೊಂಡಿದೆ. ಇದು ಸರ್ಕಾರದಿಂದ ಆಗಿರುವ ತಪ್ಪಾದರೂ ಸಾರ್ವಜನಿಕರ ಪ್ರಾಣಕ್ಕೆ ಬೆಲೆಯೇ ಇಲ್ಲದಂತಾಗಿದೆ. ಆದರೆ, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ತವರು ಜಿಲ್ಲೆಯಾದ ರಾಮನಗರ ಜಿಲ್ಲೆಯಲ್ಲಿ ಆನೆ ತುಳಿದು ಸಾವನ್ನಪ್ಪಿದ ಸಂತ್ರಸ್ತ ಕುಟುಂಬಗಳಿಗೆ ತಲಾ 15 ಲಕ್ಷ ರೂ. ಪರಿಹಾರ ನೀಡಲಾಗಿದೆ.

ರಾಜ್ಯದ ಜನತೆಗೆ ಮೂಲಸೌಕರ್ಯಗಳನ್ನು ಕೊಡಬೇಕಾಗಿರುವುದು ಸರ್ಕಾರದ ಕರ್ತವ್ಯವಾಗಿದೆ. ಅದರಲ್ಲಿ ಶುದ್ಧ ಕುಡಿಯುವ ನೀರಿನ ಸರಬರಾಜು ಮಾಡುವ ಬದಲು ಕಲುಷಿತ ನೀರನ್ನು ಪೂರೈಕೆ ಮಾಡಿ ಜನರ ಸಾವಿಗೆ ಕಾರಣವಾಗಿದ್ದರೂ ಕೇವಲ 2 ಲಕ್ಷ ರೂ. ಪರಿಹಾರ ಕೊಟ್ಟು ಸರ್ಕಾರ ಕೈತೊಳೆದುಕೊಂಡಿದೆ. ಮತ್ತೊಂದೆಡೆ ರಾಮನಗರ ಜಿಲ್ಲೆಯ ಆನೆ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಮೃತರ ಸಂತ್ರಸ್ತ ಕುಟುಂಬಗಳಿಗೆ ತಲಾ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. ಮತ್ತೊಂದೆಡೆ ಮೈಸೂರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರಿಗೂ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಆದರೆ, ಇಲ್ಲಿ ಸರ್ಕಾರ ಮಾಡಿದ ತಪ್ಪಿನಿಂದಲೇ ಆದ ತಪ್ಪಿಗೆ ಸಾವು ಸಂಭವಿಸಿದ್ದು, ಸಾವಿನಲ್ಲೇಕೆ ತಾರತಮ್ಯ ಮಾಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ತಪ್ಪಿಗೆ ಇಲ್ಲಿ ಶಿಕ್ಷೆಯೇ ಇಲ್ಲವೇ, ಹಿಂದುಳಿದ ಜಿಲ್ಲೆಯ ಜನರ ಪ್ರಾಣಕ್ಕೆ ಇಷ್ಟು ಬೆಲೆ ಸಾಕೇ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.

Tap to resize

Latest Videos

undefined

 

ಬೆಂಗಳೂರು ಪಕ್ಕದಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರ ಬಲಿ: ಸಾಂತ್ವನ ಹೇಳಿದ ಸಚಿವ ಖಂಡ್ರೆ

ಸಿಎಂ ಸೂಚನೆ ಮೇರೆಗೆ ಪರಿಹಾರ ಘೋಷಣೆ: ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣದಲ್ಲಿ ಮೃತರ ಕುಟುಂಭಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಕನಕಗಿರಿ ತಾಲೂಕಿನ‌ ಬಸರಿಹಾಳ ಗ್ರಾಮದ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ಘೋಷಣೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು, ಶೀಘ್ರವಾಗಿ ಪರಿಹಾರದ ಹಣವನ್ನು ತಲುಪಿಸುವುದಾಗಿ ಭರವಸೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ 2 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಲಾಗಿದೆ ಎಂದು ತಿಳಿಸಿ ಸಾವಿನ ಮನೆಯಿಂದ ಹೊರನಡೆದರು. 

ಒಂದು ವಾರದಲ್ಲಿ ಹಣ ಬ್ಯಾಂಕ್‌ ಖಾತೆಗೆ ಬರಲಿದೆ: ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಜೆಎಮ್ ಕಾಮಗಾರಿ ವೇಳೆ ಲೋಪಗಳಾಗಿವೆ. ಇದರಿಂದ ಗ್ರಾಮದಲ್ಲಿ ಪೊರೈಸುವ ನೀರು ಕಲುಷಿತವಾಗಿದೆ. ಈ ಪ್ರಕರಣದಲ್ಲಿ ಮೂರು ಜನ ಜೀವ ಹಾನಿಯಾಗಿದೆ. ಮೃತರ ಕುಟುಂಬಗಳಿಗೆ ಮುಂದಿನ ಒಂದು ವಾರದಲ್ಲಿ 2 ಲಕ್ಷ ರೂ. ಪರಿಹಾರ ನೀಡಲಾಗತ್ತದೆ. ಕಲುಷಿತ ನೀರು ಪೋರೈಕೆಯಾಗಲು ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕಾಮಗಾರಿ ನಡೆಸಿದ ಕಾಂಟ್ರಾಕ್ಟರ್ ಬ್ಲಾಕ್ ಲಿಸ್ಟ್ ಗೆ ಸೇರಿಸಲು ಜಿಲ್ಲಾಡಳಿತ ಮುಂದಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮದ ತನಿಖೆ ನಡೆಸುತ್ತೇವೆ. ಜೊತೆಗೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಸಹಕಾರ ನೀಡಿದ ಅಧಿಕಾರಿಗಳನ್ನ ಸಸ್ಪೆಂಡ್‌ ಮಾಡುತ್ತೇವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಕುಷ್ಟಗಿ: ಕಲುಷಿತ ನೀರು ಸೇವಿಸಿ ಮಗು ಸಾವು, ಮೃತರ ಸಂಖ್ಯೆ 2ಕ್ಕೇರಿಕೆ

ಆನೆ ದಾಳಿಯಿಂದ ಸಾವನ್ನಪ್ಪಿದ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ:  ರಾಮನಗರ (ಜೂ.04): ಬೆಂಗಳೂರಿನ ನೆರೆಹೊರೆ ಜಿಲ್ಲೆಯಾದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಕಳೆದೊಂದು ವಾರದಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾಗಿದ್ದಾರೆ. ಈ ಘಟನೆಯ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ರಾಜ್ಯ ಅರಣ್ಯ ಸಚಿಚ ಈಶ್ವರ್‌ ಖಂಡ್ರೆ ಅವರು ಮೃತ ರೈತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್‌ ವಿತರಣೆ ಮಾಡಿ ಸಾಂತ್ವನ ಹೇಳಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಕಳೆದ ಎರಡು ವಾರದಲ್ಲೇ ಕಾಡಾನೆ ದಾಳಿಗೆ ಇಬ್ಬರು ರೈತರು ಸಾವನ್ನಪ್ಪಿದ್ದಾರೆ. ಇನ್ನು ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದ ಮೃತರ ಕುಟುಂಬಸ್ಥರ ಮನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕಳೆದ ಶುಕ್ರವಾರ ಸಾವನ್ನಪ್ಪಿದ್ದ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಮುತ್ತುರಾಯನದೊಡ್ಡಿ ಗ್ರಾಮದ ವೀರಭದ್ರಯ್ಯ ಮನೆಗೆ ಭೇಟಿ ನೀಡಿದ ಅರಣ್ಯ ಸಚಿವರು ಮೃತ ರೈತನ ಕುಟುಂಬಸ್ಥರಿಗೆ 15 ಲಕ್ಷ ರೂ. ಮೊತ್ತದ ಚೆಕ್ ವಿತರಣೆ ಮಾಡಿದರು. ಅರಣ್ಯ ಸಚಿವರ ಜೊತೆಗೆ ಸಂಸದ ಡಿ.‌ಕೆ ಸುರೇಶ್ ಭಾಗಿಯಾಗಿದ್ದರು.

click me!