ಲಕ್ಕುಂಡಿ ಬಂಗಾರದ ನಿಧಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿಗೆ ಸರ್ಕಾರಿ ಉದ್ಯೋಗ

Sujatha NR   | Kannada Prabha
Published : Jan 19, 2026, 07:39 AM IST
 Treasure

ಸಾರಾಂಶ

ಇತ್ತೀಚೆಗೆ ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿಯನ್ನು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಅವರಿಗೆ ಸರ್ಕಾರದಿಂದ ಉದ್ಯೋಗ ಮತ್ತು ಮನೆ ನೀಡುವ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗಿದೆ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

 ಲಕ್ಕುಂಡಿ :  ಇತ್ತೀಚೆಗೆ ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿಯನ್ನು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಅವರಿಗೆ ಸರ್ಕಾರದಿಂದ ಉದ್ಯೋಗ ಮತ್ತು ಮನೆ ನೀಡುವ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗಿದೆ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. 

 ಈ ಕುರಿತಾದ ಅಧಿಕೃತ ಆದೇಶದ ಪತ್ರಗಳನ್ನು ಗಣರಾಜ್ಯೋತ್ಸವದಂದೇ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.

ಲಕ್ಕುಂಡಿಯ 44 ತಾಣಗಳು ಸಂರಕ್ಷಿತ ಸ್ಮಾರಕ ಪಟ್ಟಿಗೆ: ಎಚ್‌.ಕೆ.ಪಾಟೀಲ್‌

ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದ 44 ತಾಣಗಳನ್ನು ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರ್ಪಡೆ ಮಾಡಲಾಗುತ್ತಿದ್ದು, ಈ ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿವೆ. ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. 

 ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉನ್ನತ ಮಟ್ಟದ ಸಲಹಾ ಸಮಿತಿಯ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.  

16 ತಾಣಗಳನ್ನು ಈಗಾಗಲೇ ಘೋಷಣೆ

ಲಕ್ಕುಂಡಿ ಗ್ರಾಮದ 16 ತಾಣಗಳನ್ನು ಈಗಾಗಲೇ ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ. ಅದರ ಜತೆಗೆ ಇನ್ನು 28 ದೇವಸ್ಥಾನ, ಬಾವಿಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಘೋಷಿಸುತ್ತೇವೆ. ಇದರಿಂದಾಗಿ ಒಟ್ಟು 44 ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿದ್ದು, ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗಲಿದೆ ಎಂದರು.

PREV
Read more Articles on
click me!

Recommended Stories

ಐತಿಹಾಸಿಕ ಲಕ್ಕುಂಡಿಗೆ ಸರ್ಕಾರದಿಂದ ವಿಶೇಷ ರಕ್ಷಾಕವಚ: ರಿತ್ತಿ ಕುಟುಂಬಕ್ಕೆ ಗುಡ್‌ನ್ಯೂಸ್
Bigg boss 12 winner ‘ಗಿಲ್ಲಿ’ ನಟನಿಗೆ ಹೆಚ್‌ಡಿ ಕುಮಾರಸ್ವಾಮಿ ಅಭಿನಂದನೆ; ಮಂಡ್ಯದ ಮಣ್ಣಿನ ಮಗನ ಸಾಧನೆಗೆ ಮೆಚ್ಚುಗೆ!