ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಅಲ್ಕೋಡ ಹನಮಂತಪ್ಪ

Published : Nov 20, 2023, 03:00 AM IST
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಅಲ್ಕೋಡ ಹನಮಂತಪ್ಪ

ಸಾರಾಂಶ

ಗದಗ ಜಿಲ್ಲೆಯಲ್ಲಿ ಬರ ತಾಂಡವವಾಡುತ್ತಿದೆ, ರೈತರು ಬೆಳೆದ ಬೆಳೆಗಳು ಒಣಗಿ ಹೋಗಿವೆ. ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಬೇರೆಡೆ ಗುಳೆ ಹೋಗುತ್ತಿದ್ದಾರೆ. ಗದಗ ಜಿಲ್ಲೆಯಲ್ಲಿ 22 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಷ್ಟಾದರೂ ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸುವ ಕೆಲಸ ಮಾಡುತ್ತಿಲ್ಲ, ಬರ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಜೆಡಿಎಸ್‌ ಮುಖಂಡ, ಮಾಜಿ ಸಚಿವ ಅಲ್ಕೋಡ ಹನಮಂತಪ್ಪ 

ಲಕ್ಷ್ಮೇಶ್ವರ(ನ.20):  ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಹೆಸರಲ್ಲಿ ಹಗಲು ದರೋಡೆ ನಡೆಸಿದೆ. ರಾಜ್ಯದ ರೈತರು ಬರದ ಬವಣೆಯಿಂದ ತತ್ತರಿಸಿ ಹೋಗಿದ್ದರೂ ರಾಜ್ಯ ಸರ್ಕಾರ ಬರ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಅಲ್ಕೋಡ ಹನಮಂತಪ್ಪ ಹೇಳಿದರು. ಲಕ್ಷ್ಮೇಶ್ವರ ತಾಲೂಕಿನಲ್ಲಿ ಶನಿವಾರ ಬರ ಅಧ್ಯಯನ ನಡೆಸಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಗದಗ ಜಿಲ್ಲೆಯಲ್ಲಿ ಬರ ತಾಂಡವವಾಡುತ್ತಿದೆ, ರೈತರು ಬೆಳೆದ ಬೆಳೆಗಳು ಒಣಗಿ ಹೋಗಿವೆ. ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಬೇರೆಡೆ ಗುಳೆ ಹೋಗುತ್ತಿದ್ದಾರೆ. ಗದಗ ಜಿಲ್ಲೆಯಲ್ಲಿ 22 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಷ್ಟಾದರೂ ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸುವ ಕೆಲಸ ಮಾಡುತ್ತಿಲ್ಲ, ಬರ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕರೆಂಟ್ ತೆಗೆದುಕೊಂಡಿದ್ದಕ್ಕೆ ದಂಡ ಕಟ್ಟಿದ್ದಾರೆ, ಅಲ್ಲಿ ಕೆಲಸ ಮಾಡುವ ಕಾರ್ಮಿಕರ ತಪ್ಪಿನಿಂದ ಈ ಕೆಲಸ ನಡೆದಿದೆ ಎಂಬುದು ಗೊತ್ತಿದ್ದರೂ ಕುಮಾರಸ್ವಾಮಿ ಮೇವೆ ವಿನಾಕಾರಣ ಆರೋಪ ಮಾಡುತ್ತಿರುವುದು ಸರಿಯಲ್ಲ.

ಗದಗ: ಭೀಕರ ಬರ ಪರಿಸ್ಥಿತಿ ಮಧ್ಯೆ ತಹಶೀಲ್ದಾರ್ ಅದ್ಧೂರಿ ಬರ್ತ್ ಡೇ ಸೆಲೆಬ್ರೇಷನ್..!

ಕೋಟಿ ಕೋಟಿ ಲೂಟಿ ಮಾಡಿ ಜೈಲಿಗೆ ಹೋಗಿ ಬಂದವರು ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ರೈತರಿಗೆ ವಿದ್ಯುತ್ ನೀಡುವಲ್ಲಿ ವಿದ್ಯಾರ್ಥಿ ವೇತನ ಯೋಜನೆ, ಬರ ನಿರ್ವಹಣೆ, ಗುತ್ತಿಗೆದಾರರಿಗೆ ಹಣ ಹಾಗೂ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ. ಬರ ಪರಿಹಾರ ಬಿಡುಗಡೆ ಬರಿ ಬಾಯಿ ಮಾತಿಗೆ ಆಗಿದೆ, ಆದರೆ ಹಣ ಬಿಡುಗಡೆಯಾಗಿಲ್ಲ. ಸರ್ಕಾರದ ವಿಫಲತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂಬಾಲಕರು ಕಾರಣವಾಗಿದ್ದಾರೆ ಎಂದು ಅವರು ಆರೋಪಿಸಿದರು.

ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವೈ. ಮುಧೋಳ, ಸಿ.ಎಸ್. ಪಾಟೀಲ, ಎಚ್.ಎಚ್. ಕೊಪ್ಪಳ, ಕಾರ್ಯದರ್ಶಿ ಶಂಕರ ಬಾಳಿಕಾಯಿ, ವಿನಾಯಕ ಪರಬತ, ಪ್ರಕಾಶ ದೊಡ್ಡಮನಿ, ವೀರಪ್ಪ ಜಿರ್ಲಿ, ಸಂಗಪ್ಪ ಯಲಬೂಚಿ, ಪ್ರವೀಣ ಬಾಳಿಕಾಯಿ, ಜಾಕೀರ್ ಹವಾಲ್ದಾರ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಗುರುರಾಜ ಹುಣಸಿಮರದ, ಭಾಷಾ ಮುದಗಲ್ಲ ಇದ್ದರು.

PREV
Read more Articles on
click me!

Recommended Stories

Bengaluru: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ