ಕರ್ನಾಟಕದಲ್ಲಿ ಬರ: ಈ ವರ್ಷ ಹಂಪಿ ಉತ್ಸವ ಇಲ್ಲ..!

By Kannadaprabha News  |  First Published Sep 14, 2023, 7:32 AM IST

ಈ ಮುಂಚೆ ನವೆಂಬರ್‌ನಲ್ಲಿ ಉತ್ಸವ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಬರ ಪರಿಸ್ಥಿತಿಯಿಂದಾಗಿ ಮುಖ್ಯಮಂತ್ರಿ ಅವರು ಫೆಬ್ರವರಿಯಲ್ಲಿ ನಡೆಸಿ ಎಂದು ಸಲಹೆ ನೀಡಿದ್ದು, ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ:  ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ 


ಹೊಸಪೇಟೆ(ಸೆ.14): ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಕ್ಷಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ರಾಜ್ಯದಲ್ಲಿ ವಿಜಯನಗರ- ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ ನಡೆಸುವುದು ಕಷ್ಟ. ಫೆಬ್ರವರಿ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಉತ್ಸವ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಯಿತು.

Latest Videos

undefined

ಚೈತ್ರಾ ಕುಂದಾಪುರ ಬಿಜೆಪಿ ಟಿಕೆಟ್‌ ವಂಚನೆ ಕೇಸ್‌ನಲ್ಲಿ ಸ್ವಾಮೀಜಿ ಪಾಲೆಷ್ಟು ಗೊತ್ತಾ?

ಈ ಮುಂಚೆ ನವೆಂಬರ್‌ನಲ್ಲಿ ಉತ್ಸವ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಬರ ಪರಿಸ್ಥಿತಿಯಿಂದಾಗಿ ಮುಖ್ಯಮಂತ್ರಿ ಅವರು ಫೆಬ್ರವರಿಯಲ್ಲಿ ನಡೆಸಿ ಎಂದು ಸಲಹೆ ನೀಡಿದ್ದು, ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗಳಾದ ನಸೀರ್ ಅಹಮದ್, ಗೋವಿಂದರಾಜು, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಮುಖ್ಯಮಂತ್ರಿ ಅವರ ಜಂಟಿ ಕಾರ್ಯದರ್ಶಿ ಜಯರಾಮ್, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್ ಸಭೆಯಲ್ಲಿ ಇದ್ದರು.

click me!