ಕ್ಯಾಥಿ ಕ್ಲೈಮೇಟ್ ಮೋಡಿಫಿಕೇಷನ್ ಕನ್ಸಲ್ಟನ್ಸ್ ಸಂಸ್ಥೆಯವರು, ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಕೈಗೊಳ್ಳಲು ಮುಂದಾಗಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ರಾಜ್ಯ ಸರ್ಕಾರ, ಸಕ್ಷಮ ಪ್ರಾಧಿಕಾರದಿಂದ ನಿಯಮಾನುಸಾರ ಅನುಮತಿ ಪಡೆದು ಮೋಡ ಬಿತ್ತನೆ ಕೈಗೊಳ್ಳಲು ಅನುಮತಿ ನೀಡಿದೆ.
ಬೆಳಗಾವಿ(ಸೆ.16): ಮಳೆ ಕೈಕೊಟ್ಟಿರುವುದರಿಂದ ಕಂಗಾಲಾಗಿರುವ ರೈತರ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲೆಯಲ್ಲೂ ಮೋಡ ಬಿತ್ತನೆ ಕೈಗೊಳ್ಳಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೆಲ ದಿನಗಳ ಹಿಂದೆ ಹಾವೇರಿಯಲ್ಲಿ ಮೋಡ ಬಿತ್ತನೆ ನಡೆದಿತ್ತು.
ಕ್ಯಾಥಿ ಕ್ಲೈಮೇಟ್ ಮೋಡಿಫಿಕೇಷನ್ ಕನ್ಸಲ್ಟನ್ಸ್ ಸಂಸ್ಥೆಯವರು, ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಕೈಗೊಳ್ಳಲು ಮುಂದಾಗಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ರಾಜ್ಯ ಸರ್ಕಾರ, ಸಕ್ಷಮ ಪ್ರಾಧಿಕಾರದಿಂದ ನಿಯಮಾನುಸಾರ ಅನುಮತಿ ಪಡೆದು ಮೋಡ ಬಿತ್ತನೆ ಕೈಗೊಳ್ಳಲು ಅನುಮತಿ ನೀಡಿದೆ. ಮೋಡ ಬಿತ್ತನೆಯ ಅನುಷ್ಠಾನ, ಜಿಲ್ಲಾಧಿಕಾರಿಯ ಸೂಕ್ತ ಮಾರ್ಗದರ್ಶನದಲ್ಲಿ ನಡೆಯುವಂತೆ ಸೂಚಿಸಿದೆ. ಇದೇ ವೇಳೆ, ಈ ಕುರಿತು ಕೈಗೊಂಡ ಕ್ರಮದ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ.
ಹಾವೇರಿ ಆಯ್ತು, ಗದಗ ಜಿಲ್ಲೆಯಲ್ಲೂ ಮೋಡ ಬಿತ್ತನೆ: ಸಚಿವ ಎಚ್.ಕೆ. ಪಾಟೀಲ ಮಾಹಿತಿ
ಇದಕ್ಕೂ ಮೊದಲು ಈ ತಿಂಗಳ ಆರಂಭದಲ್ಲಿ ಪಿಕೆಕೆ ಲಿಮಿಟೆಡ್ ಸಂಸ್ಥೆಯಿಂದ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಅವರು ಸ್ವಂತ ಖರ್ಚಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕೈಗೊಂಡಿದ್ದರು.